ಸಂಪುಟ ವಿಸ್ತರಣೆ ಗದ್ದಲದಲ್ಲಿ ಭಿನ್ನ ದನಿ


Team Udayavani, Feb 3, 2020, 3:09 AM IST

samputa-vista

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಸಂಪುಟ ಸರ್ಕಸ್‌ ಕೊನೆಗೂ ಅಂತಿಮಗೊಂಡಿದ್ದು, ನೂತನ ಸಚಿವರು ಪ್ರಮಾಣ ವಚನ ಸ್ವೀಕಾರದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಪ್ರಮಾಣ ವಚನ ಸಮಾರಂಭಕ್ಕೆ ಸಮಯ ನಿಗದಿಯಾಗಿದ್ದರೂ, ಅಂದು ವಿಸ್ತರಣೆಯಾಗುವುದೋ ಅಥವಾ ಪುನಾ ರಚನೆಯಾಗುವುದೋ ಎಂಬುದು ಇನ್ನೂ ಬಹಿರಂಗವಾಗಿಲ್ಲ. ಈ ನಡುವೆಯೇ, ಸಚಿವಾಕಾಂಕ್ಷಿಗಳ ಒತ್ತಡ ತಂತ್ರವೂ ಮುಂದುವರಿದಿದೆ. ಸಂಪುಟ ವಿಸ್ತರಣೆ ಗದ್ದಲದಲ್ಲಿ ಯಾರು ಏನೆಂದರು ಎಂಬ ವಿವರ ಇಲ್ಲಿದೆ..

ಹದಿನೇಳು ಶಾಸಕರ ಹಂಗಿನಲ್ಲಿ ಸಿಎಂ ಯಡಿಯೂರಪ್ಪ: ಸತೀಶ
ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹದಿನೇಳು ಮಂದಿ ಶಾಸಕರ ಹಂಗಿನಲ್ಲಿದ್ದಾರೆ. ಅವರನ್ನು ಸಮಾಧಾನಪಡಿಸುವುದು ಅವರ ಮೊದಲ ಕೆಲಸ. ಹೀಗಾಗಿ ಮೂಲ ಬಿಜೆಪಿ ಶಾಸಕರು ಸಚಿವರಾಗಲು ಇನ್ನಷ್ಟು ದಿನ ಕಾಯಬೇಕು ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದರು. ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ಸಂಪುಟ ವಿಸ್ತರಣೆ ನಂತರ ಮತ್ತೆ ಭಿನ್ನಮತ ಸ್ಫೋಟಗೊಳ್ಳಲಿದೆ. ಮೂಲ ಬಿಜೆಪಿ ಶಾಸಕರು ತಮ್ಮ ಹಕ್ಕು ಪ್ರತಿಪಾದನೆ ಮಾಡುತ್ತಾರೆ. ಆಗ ತಾನಾಗೇ ಭಿನ್ನಮತ ಹೊರಗಡೆ ಬರುತ್ತದೆ ಎಂದರು.

ಆಪರೇಷನ್‌ ಕಮಲ ಮಾಡಿದ ಮೇಲೆ ಎಲ್ಲವನ್ನೂ ಸರಿದೂಗಿಸಲು ಸಾಧ್ಯವಿಲ್ಲ. ಮೊದಲು 17 ಜನ ಶಾಸಕರನ್ನು ತೃಪ್ತಿಪಡಿಸಬೇಕು. ಇದರಿಂದ ಮೂಲ ಬಿಜೆಪಿ ಶಾಸಕರು ಇನ್ನೂ ಸಚಿವರಾಗಲು ಕನಸು ಕಾಣುತ್ತಲೇ ಇರಬೇಕು. ಆಪರೇಷನ್‌ ಕಮಲ ಮಾಡಿದ್ದೇ ತಪ್ಪು ಸಂದೇಶ ಹೋಗಿದೆ. ಹೀಗಾಗಿ ಸರ್ಕಾರಕ್ಕೆ ಸಮಸ್ಯೆ ಉಂಟಾಗುವುದು ಖಚಿತ ಎಂದರು. ರಮೇಶ ಜಾರಕಿಹೊಳಿ ಒಬ್ಬ ಟ್ರಬಲ್‌ ಮೇಕರ್‌. ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಮೇಶನನ್ನು ಎಷ್ಟು ದಿನ ಸಹಿಸಿಕೊಳ್ಳುತ್ತಾರೋ ನೋಡಬೇಕು. ರಮೇಶ ಜಾರಕಿಹೊಳಿ ಅಭಿವೃದ್ಧಿ ಉದ್ದೇಶದಿಂದ ನೀರಾವರಿ ಸಚಿವ ಸ್ಥಾನ ಕೇಳುತ್ತಿಲ್ಲ.

ಇದು ಎರಡು ವರ್ಷದಿಂದ ನಡೆದಿರುವ ಪ್ಲಾನ್‌. ತಮ್ಮ ಸ್ವಹಿತಾಸಕ್ತಿಗಾಗಿ ಈ ಖಾತೆ ಕೇಳುತ್ತಿದ್ದಾರೆ. ಇಲ್ಲಿಯೂ ತಾವು ಬೇಡಿದ ಖಾತೆ ಕೊಡದಿದ್ದರೆ ಆಗ ಮತ್ತೆ ರಮೇಶ ಸಮಸ್ಯೆ ಉಂಟು ಮಾಡುತ್ತಾರೆ ಎಂದು ಹೇಳಿದರು. ಸಚಿವ ಸ್ಥಾನ ಸಿಗದೇ ಇದ್ದರೆ ಬಿಜೆಪಿ ಕಚೇರಿಯಲ್ಲಿ ಕಸ ಗುಡಿಸಲು ಸಿದ್ಧ ಎಂಬ ಶಾಸಕ ಮಹೇಶ ಕುಮಟಳ್ಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಒಂದು ಪಕ್ಷಕ್ಕೆ ಹೋದ ಮೇಲೆ ಅದರ ಸಿದ್ಧಾಂತಕ್ಕೆ ಬದ್ಧವಾಗಿರಬೇಕಾಗುತ್ತದೆ. ಕಸವನ್ನೂ ಗುಡಿಸಬೇಕಾಗುತ್ತದೆ ಎಂದು ವ್ಯಂಗ್ಯವಾಡಿದರು.

ಬಿಎಸ್‌ವೈ ಕೊಟ್ಟ ಮಾತು ಉಳಿಸಿಕೊಳ್ಳಲಿ: ವಾಲ್ಮೀಕಿ ಶ್ರೀ
ಹರಿಹರ: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕೊಟ್ಟ ಮಾತಿನಂತೆ ಸಂಪುಟ ವಿಸ್ತರಣೆ ವೇಳೆ ವಾಲ್ಮೀಕಿ ಸಮಾಜದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದರು. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಚುನಾವಣೆ ಸಂದರ್ಭ ಯಡಿಯೂರಪ್ಪ ವಾಲ್ಮೀಕಿ ಸಮಾಜ ದವರಿಗೆ ಡಿಸಿಎಂ ಸ್ಥಾನ ನೀಡುವುದಾಗಿ ಘೋಷಿಸಿದ್ದರು. ಈಗ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕಿದೆ ಎಂದರು.

ವಾಲ್ಮೀಕಿ ಸಮಾಜದ ಶ್ರೀರಾಮುಲು ಹಾಗೂ ರಮೇಶ್‌ ಜಾರಕಿಹೊಳಿ ಡಿಸಿಎಂ ಸ್ಥಾನಕ್ಕೆ ಅರ್ಹರಾಗಿದ್ದು, ಇಬ್ಬರಲ್ಲಿ ಯಾರಿಗಾದರೂ ಒಬ್ಬರಿಗೆ ಡಿಸಿಎಂ ಸ್ಥಾನ ನೀಡಲಿ. ಅದರ ಬಗ್ಗೆ ನಮ್ಮ ತಕರಾರು ಇಲ್ಲ ಎಂದ ಶ್ರೀಗಳು, ಈ ಕುರಿತು ಸಮಾಜದ ಜನರಲ್ಲೂ ದೊಡ್ಡ ನಿರೀಕ್ಷೆ ಇದ್ದು, ಅದನ್ನು ಬಿಎಸ್‌ವೈ ಹುಸಿಗೊಳಿಸಬಾರದು ಎಂದರು. ವಾಲ್ಮೀಕಿ ಸಮಾಜದವರಿಗೆ ಶೇ.7.5 ಮೀಸಲಾತಿ ನೀಡಬೇಕೆಂಬ ಬೇಡಿಕೆ ಇಟ್ಟಿದ್ದೇವೆ. ಆಯೋಗದ ವರದಿ ಬಂದ ನಂತರ ಈ ಕುರಿತು ನಿರ್ಣಯಿಸುವುದಾಗಿ ಬಿಎಸ್‌ವೈ ಹೇಳಿದ್ದಾರೆ. ಆ ಬಗ್ಗೆ ನಮ್ಮ ಒಪ್ಪಿಗೆಯೂ ಇದೆ. ಹಿಂದುಳಿದ ಸಮಾಜಕ್ಕೆ ಸಾಮಾಜಿಕ ನ್ಯಾಯ ಸಿಗಬೇಕಿದೆ ಎಂದರು.

ವಾಲ್ಮೀಕಿ ಜಾತ್ರೆ: ಫೆ.8 ಮತ್ತು 9ರಂದು ಮಠದಲ್ಲಿ ಎರಡನೇ ವರ್ಷದ ಐತಿಹಾಸಿಕ ಮಹರ್ಷಿ ವಾಲ್ಮೀಕಿ ಜಾತ್ರೆ ನಡೆಯಲಿದೆ. ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಜನ ಆಗಮಿಸುವ ನಿರೀಕ್ಷೆ ಇದೆ. ಸಿಎಂ, ಮಾಜಿ ಸಿಎಂ, ಕೇಂದ್ರ, ರಾಜ್ಯ ಸಚಿವರು, ನಾಡಿನ ವಿವಿಧ ಮಠಾ ಧೀಶರು, ಸಮಾಜದ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಾತ್ರೆ ಸಂಬಂಧ ಸಿದ್ಧತೆಗಳು ನಡೆಯುತ್ತಿವೆ ಎಂದರು.

ತಾಳ್ಮೆ ವಹಿಸಿದರೆ ಶಂಕರ್‌ಗೂ ಅವಕಾಶ
ಬಳ್ಳಾರಿ: ಮಾಜಿ ಸಚಿವ ಆರ್‌.ಶಂಕರ್‌ ಅವರನ್ನು ಬಿಜೆಪಿ ವರಿಷ್ಠರು ಕೈಬಿಡಲ್ಲ. ಮುಂದೆಯೂ ಅವರಿಗೆ ಅವಕಾಶ ಇದ್ದೇ ಇರುತ್ತದೆ ಎಂದು ಶಾಸಕ ಜಿ.ಸೋಮಶೇಖರರೆಡ್ಡಿ ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಚಿವ ಲಕ್ಷ್ಮಣ ಸವದಿ ಅವರಿಗೆ ಎಂಎಲ್‌ಸಿ ನೀಡಿದರೂ, ಮಾಜಿ ಸಚಿವ ಆರ್‌.ಶಂಕರ್‌ ಅವರನ್ನು ಕೈಬಿಡಲ್ಲ. ಮುಂದೆ ಯೂ ಯಾವುದಾದರೂ ಒಂದು ಅವಕಾಶ ಅವರಿಗೆ ಇದ್ದೇ ಇರುತ್ತದೆ. ಸ್ವಲ್ಪ ತಾಳ್ಮೆಯಿಂದ ಇರಬೇಕು. ಪಕ್ಷದ ರಾಜ್ಯ ಮುಖಂಡರು ಈ ಬಗ್ಗೆ ಆಲೋಚನೆ ಮಾಡಿ ಅವಕಾಶ ಕಲ್ಪಿಸುತ್ತಾರೆ ಎಂದರು.

ಹಣೆ ಬರಹದಂತೆ ಆಗುತ್ತೆ: ತಾವು ಸಚಿವ ಸ್ಥಾನದ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪಕ್ಷದ ರಾಜ್ಯ ಮುಖಂಡರಿಗೆ ಈಗಿರುವ ತಲೆನೋವೇ ಸಾಕು. ಅದರಲ್ಲಿ ನಾನೇಕೆ ಮಧ್ಯೆ ಪ್ರವೇಶಿಸಬೇಕು? ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆ ಯಾಗಿದ್ದೇನೆ. ಕೆಲವರಂತೆ ಮೂರ್‍ನಾಲ್ಕು ಬಾರಿ ಶಾಸಕನಾಗಿ ಆಯ್ಕೆ ಯಾಗಿಲ್ಲ. ಮನಸ್ಸಿದ್ದರೆ ಮಾರ್ಗ. ಭಗವಂತ ಹಣೆಬರಹದಲ್ಲಿ ಏನು ಬರೆದಿದ್ದಾನೋ ಅದರಂತೆ ಆಗಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುವಲ್ಲಿ ಮಾಜಿ ಸಚಿವರಾದ ಎಚ್‌.ವಿಶ್ವನಾಥ್‌ ಮತ್ತು ಎಂ.ಟಿ.ಬಿ. ನಾಗರಾಜ್‌ ಅವರ ತ್ಯಾಗ ದೊಡ್ಡದು. ಅವರ ತ್ಯಾಗವನ್ನು ಸಿಎಂ ಯಡಿಯೂರಪ್ಪ ಅವರು ಮರೆಯುವುದಿಲ್ಲ.
-ವಿ.ಸೋಮಣ್ಣ, ವಸತಿ ಸಚಿವ

ಜನಪ್ರತಿನಿಧಿಗಳಿಗೆ ಅಧಿಕಾರದ ಆಸೆ ಹೆಚ್ಚಾಗಿರುವುದನ್ನು ಕಾಣುತ್ತಿದ್ದೇವೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ಮುಂದೆ ದಾವಣಗೆರೆ, ಚಿತ್ರದುರ್ಗ, ಬೆಂಗಳೂರು..ಹೀಗೆ ಒಂದೊಂದು ಜಿಲ್ಲೆಗೆ ಒಬ್ಬೊಬ್ಬ ಮುಖ್ಯಮಂತ್ರಿ ಮಾಡಿ ಎಂದು ಒತ್ತಡ ಹಾಕುವ ದಿನಗಳು ಸಹ ಬರಬಹುದು.
-ಸಂತೋಷ್‌ ಹೆಗ್ಡೆ, ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ

ವಾಲ್ಮೀಕಿ ಸಮುದಾಯಕ್ಕೆ ಡಿಸಿಎಂ ಸ್ಥಾನ ಕೊಡುವ ಬಗ್ಗೆ ಏನನ್ನೂ ಹೇಳಲ್ಲ. ಹಾಗೆಯೇ ಯಾರಿಗೂ ಮುಜುಗರಪಡಿಸಲೂ ಹೋಗುವುದಿಲ್ಲ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ತೀರ್ಮಾನವನ್ನು ಕಾದು ನೋಡುತ್ತೇನೆ.
-ಶ್ರೀರಾಮುಲು, ಆರೋಗ್ಯ ಸಚಿವ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.