ಗೋ ನೀತಿಗೆ ಸಂಪುಟ ಅಸ್ತು , ರೈತರ ಮನೆ ಬಾಗಿಲಿಗೆ ಮೇವು
ವಿದ್ಯಾರ್ಥಿಗಳಿಗೆ 2 ನೇ ಸೆಟ್ ಸಮವಸ್ತ್ರಕ್ಕೂ ಒಪ್ಪಿಗೆ ;100 ತಾಲೂಕುಗಳ ಜಲಾನಯನ ಅಭಿವೃದ್ಧಿ ಯೋಜನೆಗೆ ಅನುಮೋದನೆ
Team Udayavani, Nov 1, 2019, 5:47 AM IST
ಬೆಂಗಳೂರು: ರಾಜ್ಯದ ಎಲ್ಲ ತಾಲೂಕುಗಳಲ್ಲಿ ಗೋ ಶಾಲೆ ಮತ್ತು ಮೇವು ಬ್ಯಾಂಕ್ ಸ್ಥಾಪನೆ ಹಾಗೂ ನಿರ್ವಹಣೆಗಾಗಿ ಪ್ರತ್ಯೇಕ ಗೋ ನೀತಿ ಜಾರಿಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಹೈಕೋರ್ಟ್ ಸೂಚನೆ ಮೇರೆಗೆ ನೂತನ ನೀತಿ ಜಾರಿಯಾಗಲಿದ್ದು ರೈತರ ಮನೆ ಬಾಗಿಲಿಗೆ ದಿನಕ್ಕೆ ಕನಿಷ್ಠ 5 ಕೆಜಿಯಂತೆ ನಿಗದಿತ ಪ್ರಮಾಣದ ಮೇವನ್ನು ಕಾರ್ಡ್ ಮೂಲಕ ತಲುಪಿಸುವುದು ಇದರ ಉದ್ದೇಶ.
ಸಂಪುಟ ಸಭೆಯ ಅನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಗೋಶಾಲೆ ಮತ್ತು ಮೇವು ಬ್ಯಾಂಕ್ ಸ್ಥಾಪನೆಯಾದ ಅನಂತರ ಅದರ ನಿರ್ವಹಣೆ ಹೇಗೆ ಮಾಡಬೇಕು, ಯಾರು ಮಾಡಬೇಕು, ಅವರ ಹೊಣೆಗಾರಿಕೆ ಮತ್ತು ಜವಾಬ್ದಾರಿಗಳೇನು ಎಂಬುದನ್ನು ನೀತಿಯು ಒಳಗೊಂಡಿರುತ್ತದೆ ಎಂದು ತಿಳಿಸಿದರು.
2ನೇ ಜತೆ ಸಮವಸ್ತ್ರ
1 ರಿಂದ 8 ನೇ ತರಗತಿವರೆಗೆ ಸರಕಾರಿ ಶಾಲೆ ವಿದ್ಯಾರ್ಥಿಗಳಿಗೆ ಎರಡನೇ ಜತೆ ಸಮವಸ್ತ್ರ ನೀಡುವ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ ನೀಡಿದೆ. 37 ಲಕ್ಷ ವಿದ್ಯಾರ್ಥಿಗಳಿಗೆ ತಲಾ 250 ರೂ. ವೆಚ್ಚದಲ್ಲಿ ಸಮವಸ್ತ್ರ ಪೂರೈಕೆಗೆ ಶಾಲಾ ಅಭಿವೃದ್ಧಿ ಮೇಲುಸ್ತುವಾರಿ ಸಮಿತಿಗಳಿಗೆ ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದರು.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವ್ಯಾಪ್ತಿಯ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಟೈ, ಬೆಲ್ಟ್ ನೀಡಲು 11.77 ಕೋ. ರೂ.ಗಳನ್ನು ವ್ಯಯಿಸಲು ಹಾಗೂ ಸರಕಾರಿ ಮತ್ತು ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರಗಳ ಎಸ್‌ಸಿ-ಎಸ್‌ಟಿ ಅಭ್ಯರ್ಥಿಗಳಿಗೆ ಟೂಲ್‌ಕಿಟ್ ವಿತರಿಸಲು 7.86 ಕೋ. ರೂ. ಮಂಜೂರಾತಿಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.
ಜಲಾನಯನ ಅಭಿವೃದ್ಧಿ
ರಾಜ್ಯದ 100 ತಾಲೂಕುಗಳಲ್ಲಿ ಜಲಾನಯನ ಅಭಿವೃದ್ಧಿ ಯೋಜನೆ ರೂಪಿಸಲು ಸಂಪುಟ ಒಪ್ಪಿಗೆ ನೀಡಿದೆ. ಅಂತರ್ಜಲ ವೃದ್ಧಿ, ಜಲ ಮರುಪೂರಣ, ಅರಣ್ಯ ಬೆಳೆಸುವುದು, ಭೂ ರಹಿತರಿಗೆ ಹಸು, ಕುರಿ, ಕೋಳಿ ವಿತರಣೆ ಈ ಯೋಜನೆ ಒಳಗೊಂಡಿರುತ್ತದೆ ಎಂದು ತಿಳಿಸಿದರು.
ಕರ್ನಾಟಕ ವಸತಿ ಮಂಡಳಿಯ ಭೂ ಸ್ವಾಧೀನ ನೀತಿಗೆ ಕೆಲವು ತಿದ್ದುಪಡಿಗಳನ್ನು ತರಲಾಗಿದ್ದು, ಭೂಮಿ ನೀಡುವವರಿಂದ 50-50, 45-55 ಮತ್ತು 60-40 ಆಧಾರದಲ್ಲಿ ಪಡೆಯುವುದು ಸಹಿತ ಹಲವು ಅಂಶಗಳನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.