ಜೆಡಿಎಸ್‌ನಲ್ಲಿ ರಾಜಕೀಯ ಧ್ರುವೀಕರಣದ ಲೆಕ್ಕಾಚಾರ
Team Udayavani, Dec 5, 2019, 5:29 AM IST
ಬೆಂಗಳೂರು: ಉಪ ಚುನಾವಣೆ ನಂತರ ರಾಜಕೀಯ ಧ್ರುವೀಕರಣದ ನಿರೀಕ್ಷೆಯಲ್ಲಿರುವ ಜೆಡಿಎಸ್ ವರಿಷ್ಠ
ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿಯವರು ಪ್ರಚಾರದ ನಂತರ
ಮತದಾನ ಹಾಗೂ ಫಲಿತಾಂಶದ ಲೆಕ್ಕಾಚಾರದಲ್ಲಿದ್ದಾರೆ.
ಪ್ರಚಾರದಿಂದಾಗಿ ಕೆಮ್ಮು ಹಾಗೂ ಜ್ವರ ಕಾಣಿಸಿಕೊಂಡಿದ್ದರಿಂದ ಕುಮಾರಸ್ವಾಮಿಯವರು ಜಯದೇವ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡು, ಜೆಪಿ ನಗರ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಲೇ ಉಪ
ಚುನಾವಣೆ ಕುರಿತು ಸ್ಥಳೀಯ ಮುಖಂಡರಿಂದ ಮಾಹಿತಿ ಪಡೆದರು. ದೇವೇಗೌಡರು ಸಹ ಪದ್ಮನಾಭನಗರ ನಿವಾಸದಲ್ಲೇ ಜಿಲ್ಲಾ ನಾಯಕರ ಜತೆ ದೂರವಾಣಿ ಮೂಲಕ ಮಾತನಾಡಿ, ಮತದಾನದ ದಿನ ಎಚ್ಚರ ತಪ್ಪದಂತೆ ಸೂಚನೆ ನೀಡಿದರು.
ಹುಣಸೂರು, ಕೆ.ಆರ್.ಪೇಟೆ, ಚಿಕ್ಕಬಳ್ಳಾಪುರ, ಯಶವಂತಪುರ, ಗೋಕಾಕ್ ಕ್ಷೇತ್ರಗಳ ಬಗ್ಗೆ ಜೆಡಿಎಸ್ ಭರವಸೆ ಇಟ್ಟುಕೊಂಡಿದ್ದು, ಆ ಕ್ಷೇತ್ರಗಳಲ್ಲಿ ಗೆಲುವು, ಜತೆಗೆ ಅನರ್ಹರನ್ನು ಸೋಲಿಸುವ ಗುರಿ ಹೊಂದಿದೆ. ಹುಣಸೂರು, ಯಶವಂತಪುರ, ಕೆ.ಆರ್.ಪೇಟೆ ಹಾಗೂ ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಗೆದ್ದರೆ, ಗೋಕಾಕ್‌ನಲ್ಲಿ ಬಿಜೆಪಿ ಸೋತರೆ, ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ
ಗೆದ್ದರೆ ರಾಜ್ಯದ ಲೆಕ್ಕಾಚಾರವೇ ಬುಡಮೇಲು ಆಗಲಿದೆ ಎಂಬ ನಂಬಿಕೆ ಜೆಡಿಎಸ್‌ನದು.
ಬಿಜೆಪಿಗೆ ಎಚ್.ಡಿ.ಕುಮಾರಸ್ವಾಮಿ ಹತ್ತು ಪ್ರಶ್ನೆ
ಬೆಂಗಳೂರು: ಉಪ ಚುನಾವಣೆ ಹಿನ್ನೆಲೆಯಲ್ಲಿ ಅನರ್ಹರು ಹಾಗೂ ಬಿಜೆಪಿ ವಿರುದ್ಧ ಮಾಜಿ ಸಿಎಂ
ಎಚ್.ಡಿ.ಕುಮಾರಸ್ವಾಮಿ ಚಾರ್ಜ್‌ಶೀಟ್ ಬಿಡುಗಡೆ ಮಾಡಿದ್ದು, ಹತ್ತು ಪ್ರಶ್ನೆಗಳ ಮೂಲಕ ಹಿಂದಿನ ಸಮ್ಮಿಶ್ರ ಸರ್ಕಾರ ಪತನ, ನಂತರದ ಬೆಳವಣಿಗೆ, ಆಪರೇಷನ್ ಕಮಲ ಪ್ರಶ್ನಿಸಿದ್ದಾರೆ. ನನ್ನ ನೇತೃತ್ವದಲ್ಲಿ ಮೈತ್ರಿ ಸರ್ಕಾರ ರಚನೆಯಾದ ಕೂಡಲೇ ಅತೃಪ್ತಗೊಂಡಿದ್ದ ಬಿಜೆಪಿ, ಅಧಿಕಾರದ ಹುಚ್ಚು ಹಿಡಿಸಿಕೊಂಡು
ಕೂಗು ಮಾರಿಯಂತಾಗಿತ್ತು. ನಾನು ಮಾಡದ ತಪ್ಪುಗಳಿಗೆ ನನ್ನನ್ನು ಬಿಗಿಯುತ್ತಾ, ಆಡಳಿತ ಮಾಡಲು ಬಿಡದ ಬಿಜೆಪಿ ಅನರ್ಹರ ಆಕ್ರಮ ಸಂಬಂಧದೊಂದಿಗೆ ಅನೈತಿಕ ಸರ್ಕಾರ ರಚಿಸಿ ಇದೀಗ ರಾಜ್ಯ ಅನಾಹುತದ ಹಾದಿಯಲ್ಲಿ ಕರೆದೊಯ್ಯುತ್ತಿದೆ. ಈ ಮೂಲಕ ದೇಶದಲ್ಲಿ ಕೆಟ್ಟ ಸಂಪ್ರದಾಯವೊಂದಕ್ಕೆ ರಾಜ್ಯ ಮಾದರಿಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಟ್ವೀಟ್ ಮೂಲಕ ಎಚ್‌ಡಿಡಿ ಮನವಿ
ಉಪ ಚುನಾವಣೆಯಲ್ಲಿ ಮತದಾರರು ಅನರ್ಹರ ವಿರುದ್ಧ ತೀರ್ಪು ನೀಡುವಂತೆ ದೇವೇಗೌಡರು ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ. “ಕರ್ನಾಟಕದಲ್ಲಿ ಹಣ, ಅಧಿಕಾರದ ಆಸೆಯಿಂದ ಪಕ್ಷಾಂತರ ಮಾಡಿದ “ಅನರ್ಹರ’ ವಿರುದಟಛಿ ತೀರ್ಪು ನೀಡುವ ಪರಮಾಧಿಕಾರ ರಾಜ್ಯದ ಜನತೆಗೆ ಸಿಕ್ಕಿದೆ. ಇಡೀ ದೇಶದ ಜನತೆಯ ಗಮನ ಕರ್ನಾಟಕದ ಮತದಾರ ನೀಡುವ ತೀರ್ಪಿನ ಮೇಲಿದೆ. ಈ ಸಂದರ್ಭದಲ್ಲಿ
ಯಾವುದೇ ಆಮಿಷಕ್ಕೆ ಒಳಗಾಗದೆ ರಾಜ್ಯದ ಘನತೆ ಎತ್ತಿ ಹಿಡಿಯುವ ತೀರ್ಪು ನೀಡಬೇಕಾಗಿ ಮನವಿ
ಮಾಡಿಕೊಳ್ಳುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.
ಚಾರ್ಜ್‌ಶೀಟ್‌ನಲ್ಲೇನಿದೆ?
ಜೆಡಿಎಸ್-ಕಾಂಗ್ರೆಸ್ ಸರ್ಕಾರವನ್ನು ಐದು ವರ್ಷ ನಡೆಯಲು ಬಿಡದ ಯಡಿಯೂರಪ್ಪ ಅವರದ್ದು
ಅಧಿಕಾರ ಲಾಲಸೆಯಾಗಿರಲಿಲ್ಲವೇ?
ನಿಮ್ಮದು ಸಾಂವಿಧಾನ ಬದ್ಧ ಸರ್ಕಾರವೇ?
ಆಪರೇಷನ್‌ಗೆ ಒಂದಾಣೆ ಖರ್ಚು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳಿ
ಹಠದ ಸರ್ಕಾರದ ಒಂದೇ ಒಂದು ಸಾಧನೆ ತಿಳಿಸಬಹುದೇ?
ಬಿಜೆಪಿ ಸರ್ಕಾರ ರಚಿಸಲು ಮೋದಿ , ಶಾ ಒಪ್ಪಿದ್ದರೇ?
ಜಾತಿವಾದಿಗಳಲ್ಲವೇ ನೀವು? ಹಾವಿಗೆ ಹಾಲೆರದಂತೆ ಆಯಿತೇ? (ಕೆ.ಆರ್.ಪೇಟೆ ಮತ್ತು ಮಹಾಲಕ್ಷ್ಮೀ
ಬಡಾವಣೆಯ ಅನರ್ಹ ಶಾಸಕರು)
ಮಂಡ್ಯ ಜನರ ಎದುರು ನಿಲ್ಲಲು ಬಿಎಸ್‌ವೈಗೆ ನಾಚಿಕೆಯಾಗದೇ?
ಎಸ್.ಎಂ.ಕೃಷ್ಣರದ್ದು ಧರ್ಮ ಕಾರ್ಯವೋ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.