ಕೋವಿಡ್: ಕೈದಿಗಳಿಗೆ ಬಿಡುಗಡೆ ಭಾಗ್ಯ
Team Udayavani, Jul 12, 2020, 3:17 PM IST
ಲಾಸ್‌ಏಂಜಲೀಸ್: ಅಮೆರಿಕದಲ್ಲಿ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಕೈದಿಗಳೀಗ ಬಿಡುಗಡೆ ಭಾಗ್ಯ ಕಾಣುತ್ತಿದ್ದಾರೆ. ಅಮೆರಿಕದ ಹೆಚ್ಚಿನ ಜೈಲುಗಳು ಅಪರಾಧಿಗಳಿಂದ ತುಂಬಿದ್ದು, ಸೋಂಕು ಒಂದೊಮ್ಮೆ ಪ್ರವೇಶಿಸಿದರೆ, ಸಾವಿರಾರು ಮಂದಿ ಸಂಕಷ್ಟಕ್ಕೀಡಾಗುವ ಭೀತಿ ಇದೆ.
ಆಗಸ್ಟ್ ವೇಳೆಗೆ ಸುಮಾರು 8 ಸಾವಿರ ಕೈದಿಗಳನ್ನು ಬಿಡಲು ಉದ್ದೇಶಿಸಲಾಗಿದೆ. ಈಗಾಗಲೇ ಸುಮಾರು 10 ಸಾವಿರ ಮಂದಿಯನ್ನು ಜೈಲಿನಿಂದ ಕಳಿಸಲಾಗಿದೆ. ಈಗ ಜೈಲಿನಿಂದ ಬಿಡುಗಡೆಯಾಗುವವರು ಕ್ಯಾಲಿಫೋರ್ನಿಯಾದ ಜೈಲುಗಳಲ್ಲಿದ್ದಾರೆ ಎಂದು ಕ್ಯಾಲಿಫೋರ್ನಿಯಾ ಬಂದೀಖಾನೆ ಮತ್ತು ಪುನರ್ವಸತಿ ಇಲಾಖೆ ಹೇಳಿದೆ. ಜೈಲುಗಳಲ್ಲಿರುವ ಕೈದಿಗಳ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಇಲ್ಲಿರುವ ಜೈಲು ಸಿಬಂದಿಗೂ ಸೋಂಕಿನ ಭೀತಿಯಿದ್ದು, ಹಲವರು ಜೈಲಿನಿಂದ ತೆರವಾಗುವುದರಿಂದ ಅವರ ಆರೋಗ್ಯ ಸಂರಕ್ಷಣೆಯ ಕೆಲಸವೂ ಆಗಲಿದೆ.
ಈಗಾಗಲೇ ಕ್ಯಾಲಿಫೋರ್ನಿಯಾದ ವಿವಿಧ ಜೈಲುಗಳಲ್ಲಿ ಕೈದಿಗಳ ಪರೀಕ್ಷೆ ಮಾಡಲಾಗಿದ್ದು ಸುಮಾರು 1 ಸಾವಿರ ಮಂದಿಗೆ ಸೋಂಕು ದೃಢಪಟ್ಟಿದೆ.
ಏತನ್ಮಧ್ಯೆ ಸಾನ್ ಕ್ವಾಂಟೈನ್ ಜೈಲಿನಲ್ಲಿ ಸುಮಾರು 1.13 ಲಕ್ಷ ಮಂದಿ ಇದ್ದಾರೆ. ಇದರಲ್ಲಿ ಅರ್ಧದಷ್ಟು ಮಂದಿಗೆ ಸೋಂಕು ತಗುಲಿದೆ ಎಂದು ಹೇಳಲಾಗುತ್ತಿದೆ. ಇಲ್ಲಿಂದ ಹಲವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ. ಇದಕ್ಕೂ ಮೊದಲು ಬಿಡುಗಡೆಯಾದವರಿಗೆ ಪಾಸಿಟಿವ್ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.