ವಿಜಯನಗರ ಜಿಲ್ಲೆಗೆ ಅಭಿಯಾನ ಶುರು!

Team Udayavani, Feb 11, 2020, 3:10 AM IST

vijaynaga-jill

ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ವಿಭಜನೆ ಸದ್ಯಕ್ಕಿಲ್ಲ ಎಂಬ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ ಬೆನ್ನಲ್ಲೇ ಜಿಲ್ಲೆಯ ಕೆಲ ಭಾಗದ ಜನರು, ಜನಪ್ರತಿನಿ ಧಿಗಳಲ್ಲಿ ಸಮಾಧಾನ ಮೂಡಿಸಿದರೆ, ಹೊಸಪೇಟೆಯಲ್ಲಿ ವಿಜಯನಗರ ಜಿಲ್ಲೆಗಾಗಿ ಬೆಂಗಳೂರಿನತ್ತ ಪಾದಯಾತ್ರೆ ಹಮ್ಮಿಕೊಳ್ಳಲು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿದೆ.

ಗಣಿನಾಡು ಬಳ್ಳಾರಿ ಜಿಲ್ಲೆ ವಿಭಜಿಸಿ ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿ ಮಾಡಲು ಜಿಲ್ಲೆಯಲ್ಲಿ ಮೊದಲಿನಿಂದಲೂ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಬಳ್ಳಾರಿಯನ್ನು ಅಖಂಡವಾಗಿ ಮುಂದುವರಿಸಬೇಕೆಂದು ಬಳ್ಳಾರಿ ನಗರ ಬಂದ್‌ ಆಚರಿಸಿದರೆ, ಹೊಸಪೇಟೆಯಲ್ಲಿ ವಿಜಯನಗರ ಜಿಲ್ಲೆ ರಚನೆ ಮಾಡಬೇಕು ಎಂದು ಅಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗಿತ್ತು. ಈ ಕುರಿತು ಜಿಲ್ಲೆಯ ಜನಪ್ರತಿನಿ ಧಿಗಳ ಸಭೆ ಕರೆದಿದ್ದ ಸಿಎಂ ಯಡಿಯೂರಪ್ಪ ವಿಧಾನಸಭೆ ಉಪಚುನಾವಣೆ ನೆಪದಲ್ಲಿ ಜಿಲ್ಲೆಯ ವಿಭಜನೆ ವಿಷಯವನ್ನು ತಾತ್ಕಾಲಿಕವಾಗಿ ಮುಂದೂಡಿದ್ದರು. ಇದಕ್ಕಾಗಿ ಮತ್ತೂಂದು ಸಭೆ ನಡೆಸಿ ನಿರ್ಣಯ ಕೈಗೊಳ್ಳುವುದಾಗಿಯೂ ಹೇಳಿದ್ದರು.

ಆದರೆ ವಿಜಯನಗರ ಶಾಸಕ ಆನಂದ್‌ಸಿಂಗ್‌ ಸಚಿವರಾಗುತ್ತಿದ್ದಂತೆ ಪುನಃ ಮುನ್ನೆಲೆಗೆ ಬಂದಿದ್ದು, ಸಿಎಂ ಯಡಿಯೂರಪ್ಪ ಭಾನುವಾರ ಬಳ್ಳಾರಿ ಜಿಲ್ಲೆ ವಿಭಜನೆ ಸದ್ಯಕ್ಕಿಲ್ಲ ಎಂಬ ಹೇಳಿಕೆ ನೀಡಿರುವುದು ಜಿಲ್ಲೆಯ ಹೊಸಪೇಟೆ ಹೊರತುಪಡಿಸಿ ಉಳಿದ ತಾಲೂಕುಗಳ ಜನರು, ಜನಪ್ರತಿನಿ ಧಿಗಳಲ್ಲಿ ಸಂತಸ ಮೂಡಿಸಿದರೆ, ಹೊಸಪೇಟೆ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಪರಿಣಾಮ ಸಾಮಾಜಿಕ ಜಾಲತಾಣಗಳಲ್ಲಿ ಆನಂದ್‌ಸಿಂಗ್‌ ಅಭಿಮಾನಿಗಳ ಹೆಸರಲ್ಲಿ ಅಭಿಯಾನ ಆರಂಭಿಸಿರುವ ಜನರು ವಿಜಯನಗರ ಜಿಲ್ಲೆಗಾಗಿ ಬೆಂಗಳೂರಿಗೆ ಪಾದಯಾತ್ರೆ ನಡೆಸುವುದಾಗಿ ಎಚ್ಚರಿಸಿ, ಮೊಬೈಲ್‌ ಸಂಖ್ಯೆಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ವಿಜಯನಗರ ಜಿಲ್ಲೆಗಾಗಿ ಮತ ಹಾಕಿದವರು ಈ ಸಂಖ್ಯೆಗೆ ಹಾಯ್‌ ಎಂದು ವಾಟ್ಸ್‌ಆಪ್‌ ಮಾಡುವಂತೆ ಸೂಚಿಸಲಾಗುತ್ತಿದೆ.

ಬಳ್ಳಾರಿ ಜಿಲ್ಲೆ ವಿಭಜಿಸಿ ವಿಜಯನಗರ ಜಿಲ್ಲೆ ರಚನೆಗೆ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದ ಶಾಸಕ ಸೋಮಶೇಖರ ರೆಡ್ಡಿ, ಸಿಎಂ ಯಡಿಯೂರಪ್ಪ ಹೇಳಿಕೆಗೆ ಸಂತಸ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯನ್ನು ಇಬ್ಭಾಗ ಮಾಡದೆ ಅಖಂಡವಾಗಿ ಮುಂದುವರಿಸೋಣ. ನಮ್ಮ ಬೇಡಿಕೆಗೆ ಸಿಎಂ ಮನ್ನಣೆ ನೀಡಿರುವುದು ಖುಷಿ ನೀಡಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ. ಆದರೆ, ಹೊಸಪೇಟೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿರುವ ಕೆಲವರು, ವಿಜಯನಗರ ಕ್ಷೇತ್ರ ವಿಜಯನಗರ ಜಿಲ್ಲೆಯಾಗಬೇಕು. ವಿಜಯನಗರ ಕ್ಷೇತ್ರದ ಮತದಾರರು ಮತ ಹಾಕಿರುವುದು ವಿಜಯ ನಗರ ಜಿಲ್ಲೆಗಾಗಿ. ವಿಜಯನಗರ ಜಿಲ್ಲೆಗಾಗಿ ಹೋರಾಟ ನಡೆಸಿದವರು, ಇದೀಗ ಬೆಂಗಳೂರಿಗೆ ಪಾದಯಾತ್ರೆಗೆ ಬಯಸುವವರು 7996627267 ಸಂಖ್ಯೆಗೆ ವಾಟ್ಸ್‌ಆಪ್‌ನಲ್ಲಿ ಹಾಯ್‌ ಎಂದು ಸಂದೇಶ ಕಳುಹಿಸುವಂತೆ ತಿಳಿಸಲಾಗಿದೆ.

ವಿಭಜನೆ ಕೈ ಬಿಟ್ಟಿದ್ದಕ್ಕೆ ಸಂತಸ
ಬಳ್ಳಾರಿ: ಗಣಿ ನಾಡು ಬಳ್ಳಾರಿ ಜಿಲ್ಲೆಯ ವಿಭಜನೆ ಸದ್ಯಕ್ಕಿಲ್ಲ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆ ಖುಷಿ ನೀಡಿದ್ದು, ನಮ್ಮ ಬೇಡಿಕೆಗೆ ಮನ್ನಣೆ ಸಿಕ್ಕಿರುವುದು ಸಂತಸವಾಗಿದೆ ಎಂದು ಶಾಸಕ ಜಿ.ಸೋಮಶೇಖರ ರೆಡ್ಡಿ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಯಡಿಯೂರಪ್ಪ ಬಳ್ಳಾರಿ ಜಿಲ್ಲೆ ವಿಭಜನೆ ಮಾಡುವ ವಿಷಯವನ್ನು ಸದ್ಯಕ್ಕೆ ಕೈ ಬಿಟ್ಟಿರುವುದು ಸಂತಸ ನೀಡಿದೆ. ಜಿಲ್ಲೆ ವಿಭಜನೆ ಆಗಬಾರದು, ಅಖಂಡ ಜಿಲ್ಲೆಯಾಗಿರಬೇಕು ಎಂಬುದು ಬಳ್ಳಾರಿ ಜನರ ಅಪೇಕ್ಷೆಯಾಗಿತ್ತು. ವಿಜಯನಗರದ ಸಚಿವ ಆನಂದ್‌ಸಿಂಗ್‌ ಅವರಲ್ಲಿ ಸಹ ನಾನು ಇದನ್ನೇ ಮನವಿ ಮಾಡಿಕೊಂಡಿದ್ದೇನೆ.

ನಮ್ಮ ಬೇಡಿಕೆಗೆ ಸಿಎಂ ಯಡಿಯೂರಪ್ಪ ಮನ್ನಣೆ ನೀಡಿರುವುದು ಸಂತಸವಾಗಿದೆ ಎಂದರು. ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯನ್ನು ನೀಡಿದರೆ ಒಳ್ಳೆಯದು. ಸಚಿವ ಆನಂದ್‌ಸಿಂಗ್‌ ಅವರಿಗೆ ನೀಡಿದರೂ ಒಳ್ಳೆಯದು. ಶ್ರೀರಾಮುಲುಗೆ ನೀಡಿದರೆ ಮಾಜಿ ಸಚಿವ ಜನಾರ್ದನ ರೆಡ್ಡಿಯವರಂತೆ ಜಿಲ್ಲೆಯನ್ನು ಹೆಚ್ಚು ಅಭಿವೃದ್ಧಿಪಡಿಸುತ್ತಾರೆ. ಆನಂದ್‌ಸಿಂಗ್‌, ಶ್ರೀರಾಮುಲು ಇಬ್ಬರಲ್ಲಿ ಯಾರಿಗಾದರೂ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡಲಿ ಎಂದರು.

ಉಪ ಚುನಾವಣೆ ಟ್ರಂಪ್‌ ಕಾರ್ಡ್‌?: ವಿಜಯನಗರ ಕ್ಷೇತ್ರದ ಶಾಸಕ ಆನಂದ್‌ಸಿಂಗ್‌ ಸಚಿವರಾಗುತ್ತಿದ್ದಂತೆ ಬಳ್ಳಾರಿ ವಿಭಜಿಸಿ ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿ ರಚಿಸುವುದು ಬಹುತೇಕ ಖಚಿತ ಎಂಬ ಮಾತುಗಳು ಎಲ್ಲೆಡೆ ಕೇಳಿಬರುತ್ತಿತ್ತು. ಆದರೆ, ಆನಂದ್‌ಸಿಂಗ್‌ಗೆ ಸಚಿವ ಸ್ಥಾನ ನೀಡುತ್ತಿದ್ದಂತೆ ಸಿಎಂ ಯಡಿಯೂರಪ್ಪ ಜಿಲ್ಲೆಯ ವಿಭಜನೆ ಸದ್ಯಕ್ಕಿಲ್ಲ ಎಂಬ ಹೇಳಿಕೆ,

ಸಚಿವ ಬಿ. ಶ್ರೀರಾಮುಲು, ಶಾಸಕ ಜಿ. ಸೋಮಶೇಖರರೆಡ್ಡಿ ಅವರನ್ನು ಸಮಾಧಾನ ಪಡಿಸುವ ಸಲುವಾಗಿ ನೀಡಿದ್ದಾರಾ ಅಥವಾ ವಿಜಯನಗರ ಜಿಲ್ಲೆ ರಚನೆ ವಿಷಯವನ್ನು ಕೇವಲ ಉಪಚುನಾವಣೆಯಲ್ಲಿ ಟ್ರಂಪ್‌ ಕಾರ್ಡ್‌ನ್ನಾಗಿ ಮಾತ್ರ ಬಳಸಿಕೊಂಡಿದ್ದಾರಾ ಅಥವಾ ಆನಂದ್‌ಸಿಂಗ್‌ಗೆ ಸಚಿವ ಸ್ಥಾನ ನೀಡಿ ಸಮಾಧಾನ ಪಡಿಸಿದ್ದಾರಾ ಎಂಬ ಆರೋಪಗಳು ಕೇಳಿಬರುತ್ತಿದ್ದು, ಜಿಲ್ಲೆಯ ವಿಭಜನೆ ವಿಚಾರ ಮುಂದಿನ ದಿನಗಳಲ್ಲಿ ಉಭಯ ತಾಲೂಕುಗಳಲ್ಲಿ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

* ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.