ಆರ್‌ಟಿಇ ಶುಲ್ಕ ಮರುಪಾವತಿಗೆ ಕ್ಯಾಮ್ಸ್ ಆಗ್ರಹ
Team Udayavani, Mar 30, 2020, 5:46 AM IST
ಬೆಂಗಳೂರು: ಕೋವಿಡ್-19 ಭೀತಿಯಿಂದ ತುರ್ತು ರಜೆ ಘೋಷಣೆ ಮಾಡಿರುವುದರಿಂದ ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿವೆ. ಹೀಗಾಗಿ 2019-20ನೇ ಸಾಲಿನ ಆರ್‌ಟಿಇ ಶುಲ್ಕ ಮರುಪಾವತಿ ಮಾಡುವಂತೆ ಕರ್ನಾಟಕ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿ ಒಕ್ಕೂಟ(ಕ್ಯಾಮ್ಸ್) ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಆಗ್ರಹಿಸಿದೆ.
ಶಿಕ್ಷಣ ಹಕ್ಕು ಕಾಯ್ದೆಯಡಿ ಶೇ.25ರಷ್ಟು ಸೀಟುಗಳನ್ನು ಭರ್ತಿ ಮಾಡಿಕೊಂಡಿರುವ ಶಾಲೆಗಳಿಗೆ 2018-19ರ ಶುಲ್ಕ ಮರುಪಾವತಿ ಸ್ಪಲ್ಪ ಬಾಕಿಯಿದೆ. ಹಾಗೆಯೇ 2019-20ನೇ ಸಾಲಿನ ಪೂರ್ಣ ಶುಲ್ಕ ಮರುಪಾವತಿ ಬಾಕಿಯಿದೆ. ಸುಮಾರು 1,300ಕೋ.ರೂ.ಗಳಷ್ಟು ಸರಕಾರ ನೀಡಬೇಕಿದೆ. ತುರ್ತು ರಜೆ ನೀಡಿರುವುದರಿಂದ ಶಿಕ್ಷಕ ಮತ್ತು ಶಿಕ್ಷಕೇತರ ಸಿಬಂದಿಗೆ ವೇತನ ಪಾವತಿ ಮಾಡಬೇಕಿದೆ. ಅಲ್ಲದೆ ಶಾಲೆಗಳ ಇನ್ನಿತರೇ ಖರ್ಚು, ವೆಚ್ಚ ನಿಭಾಯಿಸುವುದು ಕಷ್ಟವಾಗಿದೆ. ಹೀಗಾಗಿ ಆರ್‌ಟಿಇ ಬಾಕಿ ಹಣವನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಎಂದು ಕ್ಯಾಮ್ಸ… ಪತ್ರದ ಮೂಲಕ ಮನವಿ ಮಾಡಿಕೊಂಡಿದೆ. ಜತೆಗೆ ಶಿಕ್ಷಣ ಸಂಸ್ಥೆಗಳಿಗೆ ಮುಂದಿನ ಮೂರು ತಿಂಗಳುಗಳ ಕಾಲ ಇಎಸ್‌ಐ, ಇಪಿಎಫ್ ಮತ್ತು ಪ್ರೊಫೆಷನಲ್ ಟ್ಯಾಕ್ಸ… ವಿನಾಯತಿ ನೀಡುವಂತೆ ಕೇಂದ್ರದ ಸಂಬಂಧಪಟ್ಟ ಇಲಾಖೆಯ ಮನ ವೊಲಿಸುವಂತೆಯೂ ಪತ್ರದಲ್ಲಿ ಕೋರಲಾಗಿದೆ.
ಅನೇಕ ಶಿಕ್ಷಕ ಸಂಸ್ಥೆಗಳು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿವೆ. ಮಾಸಿಕವಾಗಿ ಶುಲ್ಕ ಪಡೆಯುವ ಶಿಕ್ಷಣ ಸಂಸ್ಥೆಗಳು ತೀರ ನಷ್ಟದಲ್ಲಿವೆ. ಆದರೂ ಮುಂದಿನ ವರ್ಷದ ಶುಲ್ಕವನ್ನು ಈಗಲೇ ಪಾವತಿ ಮಾಡಿ ಎನ್ನುವುದು ಸರಿಯಲ್ಲ. ಇದನ್ನು ನಾವು ಖಂಡಿಸುತ್ತೇವೆ. ಮಾನವೀಯ, ಮನುಷ್ಯತ್ವದಿಂದ ವರ್ತಿಸಬೇಕಾಗುತ್ತದೆ. ನಮ್ಮ ಕಷ್ಟಗಳನ್ನು ಸರಕಾರದ ಮುಂದೆ ಹೇಳಿಕೊಳ್ಳೊಣ. ವಾಮಮಾರ್ಗದಲ್ಲಿ ನಡೆದ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಕಳಂಕ ತರುವುದು ಸರಿಯಲ್ಲ.
-ಡಿ. ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.