ಶೇರಿಂಗ್‌-ಪೂಲಿಂಗ್‌ ಮಾಡಿದ್ರೆ ಲೈಸನ್ಸ್‌ ರದ್ದು

Team Udayavani, Jun 29, 2019, 3:08 AM IST

shering

ಬೆಂಗಳೂರು: ನಗರದಲ್ಲಿ ನಿಯಮಬಾಹಿರವಾಗಿ ಕಾರ್ಯಾಚರಣೆ ಮಾಡುವ ಶೇರಿಂಗ್‌ ಮತ್ತು ಪೂಲಿಂಗ್‌ ಸೇವೆಯನ್ನು ತಕ್ಷಣದಿಂದ ಸ್ಥಗಿತಗೊಳಿಸಬೇಕು. ಇಲ್ಲದಿದ್ದರೆ, ಅಂತಹ ಟ್ಯಾಕ್ಸಿ ಸೇವಾ ಕಂಪನಿಗಳ ಅಗ್ರಿಗೇಟರ್‌ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಸಾರಿಗೆ ಇಲಾಖೆ ಆಯುಕ್ತ ವಿ.ಪಿ.ಇಕ್ಕೇರಿ ಎಚ್ಚರಿಸಿದ್ದಾರೆ.

ಶಾಂತಿನಗರದಲ್ಲಿರುವ ಸಾರಿಗೆ ಇಲಾಖೆ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ನಡೆದ ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವಾ ಕಂಪನಿಗಳ ಪ್ರತಿನಿಧಿಗಳು ಹಾಗೂ ಚಾಲಕರ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ಆಯುಕ್ತರು ಈ ಸೂಚನೆ ನೀಡಿದರು.

ಕಟ್ಟುನಿಟ್ಟಿನ ಸೂಚನೆಗಳ ನಡುವೆಯೂ ನಿಯಮಬಾಹಿರವಾಗಿ ಮುಂದುವರಿಸಿರುವ “ಓಲಾ ಶೇರಿಂಗ್‌’ ಮತ್ತು “ಉಬರ್‌ ಪೂಲಿಂಗ್‌’ ಸೇವೆಯನ್ನು ತಕ್ಷಣದಿಂದ ರದ್ದುಗೊಳಿಸಬೇಕು. ಇಲ್ಲದಿದ್ದರೆ, ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವೆಗಾಗಿ ಪಡೆದಿರುವ ಅಗ್ರಿಗೇಟರ್‌ ಲೈಸೆನ್ಸ್‌ ರದ್ದುಗೊಳಿಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದರು.

ಇದಕ್ಕೂ ಮುನ್ನ ಸಭೆಯಲ್ಲಿ ಓಲಾ ಮತ್ತು ಉಬರ್‌ ಕಂಪನಿಗಳ ಅಕ್ರಮ ಶೇರಿಂಗ್‌ ಮತ್ತು ಪೂಲಿಂಗ್‌ ಸೇವೆ ಕುರಿತು ಟ್ಯಾಕ್ಸಿ ಚಾಲಕ ಹಾಗೂ ಮಾಲೀಕರ ಸಂಘಟನೆಯ ಪದಾಧಿಕಾರಿಗಳು ಈ ಬಗ್ಗೆ ಗಮನ ಸೆಳೆದರು. ಆಗ ಈ ಎರಡೂ ಕಂಪನಿಗಳ ಪ್ರತಿನಿಧಿಗಳಿಗೆ ಸಾರಿಗೆ ಆಯುಕ್ತರು, ಈ ಹಿಂದೆ ಅಕ್ರಮ ಬೈಕ್‌ ಟ್ಯಾಕ್ಸಿ ಸೇವೆ ವಿರುದ್ಧ ಚಾಟಿ ಬೀಸಿದ್ದನ್ನು ನೆನಪಿಸಿದರು. ಜತೆಗೆ ಅಗ್ರಿಗೇಟರ್‌ ನಿಯಮ ಉಲ್ಲಂಘನೆ ಪುನರಾವರ್ತನೆಯಾದರೆ ಅದೇ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದರು.

ಇದೇ ವೇಳೆ ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವೆ ಕಂಪನಿಗಳು ಚಾಲಕರಿಗೆ ನೀಡುತ್ತಿರುವ ಅನಗತ್ಯ ಕಿರುಕುಳ, ಗ್ರಾಹಕರಿಂದ ಅಧಿಕ ದರ ಪಡೆದು ಸುಲಿಗೆ ಮಾಡುತ್ತಿರುವ ಬಗ್ಗೆಯೂ ಪದಾಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಆಯುಕ್ತರು ವಿನಾಕಾರಣ ಚಾಲಕರಿಗೆ ತೊಂದರೆ ಕೊಡುವುದನ್ನು ನಿಲ್ಲಿಸುವಂತೆ ಎರಡೂ ಕಂಪನಿಗಳಿಗೆ ತಾಕೀತು ಮಾಡಿದರು. ಇನ್ನು ಆ್ಯಪ್‌ ಆಧಾರಿತ ಟ್ಯಾಕ್ಸಿ ದರ ಪರಿಷ್ಕರಣೆ ಬಗ್ಗೆಯೂ ಚರ್ಚಿಸಲಾಯಿತು. ಈ ಸಂಬಂಧ ಶೀಘ್ರ ಸಮಿತಿಯೊಂದನ್ನು ರಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆಯುಕ್ತರು ಭರವಸೆ ನೀಡಿದರು.

ಮೀಟರ್‌ಗೆ ಅವಕಾಶ ಕೊಡಿ – ಮನವಿ: ನಗರದಲ್ಲಿ ಆಟೋ ಮಾದರಿಯಲ್ಲಿ ಮೀಟರ್‌ ಟ್ಯಾಕ್ಸಿ ಸೇವೆಗೂ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ. ಸರ್ಕಾರ ನಿಗದಿಪಡಿಸುವ ದರದಲ್ಲೇ ಸೇವೆ ನೀಡಲು ಸಿದ್ಧ ಎಂದೂ ಆಯುಕ್ತರ ಗಮನಕ್ಕೆ ತರಲಾಯಿತು. ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಆಯುಕ್ತರು ಹೇಳಿದ್ದಾರೆ ಎಂದು ಆ್ಯಪ್‌ ಆಧಾರಿತ ಟ್ಯಾಕ್ಸಿ ಚಾಲಕರ ಮುಖಂಡ ತನ್ವೀರ್‌ ಪಾಷಾ ತಿಳಿಸಿದರು.

ಅಲ್ಲದೆ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟ್ಯಾಕ್ಸಿ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ಟ್ಯಾಕ್ಸಿ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

ಮಾದರಿ ಒಂದೇ – ಹೆಸರು ಬೇರೆ: ಆ್ಯಪ್‌ ಆಧಾರಿತ ಟ್ಯಾಕ್ಸಿಯಲ್ಲಿ ಪ್ರತ್ಯೇಕ ಬುಕಿಂಗ್‌ ಮಾಡಿ, ಒಬ್ಬರಿಗಿಂತ ಹೆಚ್ಚು ಪ್ರಯಾಣಿಕರು ಪ್ರಯಾಣಿಸುವುದು. ಆ ಪ್ರಯಾಣ ದರವನ್ನು ಎಲ್ಲರೂ ಹಂಚಿಕೊಂಡು ಪಾವತಿಸುವುದಕ್ಕೆ ಶೇರಿಂಗ್‌ ಅಥವಾ ಪೂಲಿಂಗ್‌ ಎನ್ನಲಾಗುತ್ತದೆ. ಸಾರಿಗೆ ಇಲಾಖೆ ನೀಡುವ ಅಗ್ರಿಗೇಟರ್‌ ಲೈಸೆನ್ಸ್‌ನಲ್ಲಿ ಈ ಸೇವೆಗೆ ಅವಕಾಶವಿಲ್ಲ. ನಿಯಮದ ಪ್ರಕಾರ ಗ್ರಾಹಕರನ್ನು ಒಂದು ಸ್ಥಳದಿಂದ ಹತ್ತಿಸಿಕೊಂಡು ಮತ್ತೂಂದು ಸ್ಥಳದಲ್ಲಿ ಇಳಿಸಬೇಕು.

ಟಾಪ್ ನ್ಯೂಸ್

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

The owner of the betting app promoted by Bollywood actresses is Pakistani!

Betting App; ಬಾಲಿವುಡ್‌ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್‌‌ ಮಾಲಕ ಪಾಕಿಸ್ತಾನಿ!

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.