Cauvery: ರಾಜ್ಯದಲ್ಲಿ ಮತ್ತಷ್ಟು ತೀವ್ರಗೊಂಡ ಕಾವೇರಿ ಗದ್ದಲ


Team Udayavani, Sep 25, 2023, 10:55 PM IST

river…

ಕಾವೇರಿ ನೀರು ಹಂಚಿಕೆ ಸಂಬಂಧ ಸುಪ್ರೀಂಕೋರ್ಟ್‌ ನೀಡಿರುವ ಆದೇಶಕ್ಕೆ ಕಾವೇರಿ ಜಲಾನಯನ ಪ್ರದೇಶದ ಜಿಲ್ಲೆಗಳಲ್ಲಿ ಆಕ್ರೋಶ ಮುಂದುವರಿದಿದೆ. ರೈತ ಹಾಗೂ ಕನ್ನಡ ಪರ ಸಂಘಟನೆಗಳು ಮಂಗಳವಾರ “ಬೆಂಗಳೂರು ಬಂದ್‌’ಗೆ ಕರೆ ನೀಡಿರುವ ನಡುವೆಯೇ, “ಬಿಜೆಪಿ ಮತ್ತು ಜೆಡಿಎಸ್‌ ಕಾವೇರಿ ವಿವಾದದಲ್ಲಿ ರಾಜಕೀಯ ಮಾಡುತ್ತಿವೆ’ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಇಡೀ ಬೆಳವಣಿಗೆಗಳ ಬೆನ್ನಲ್ಲೇ, ನಾಡಿಗೆ ಎದುರಾಗಿರುವ ಸಂಕಷ್ಟ ನಿವಾರಿಸಲು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದಿದ್ದಾರೆ.

ವಿಪಕ್ಷಗಳ ವಿರುದ್ಧ ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟನೆ ನಡೆಸಲು ಅವಕಾಶವಿದೆ. ಕಾವೇರಿ ವಿಚಾರದಲ್ಲಿ ನಡೆಯುತ್ತಿರುವ ಹೋರಾಟವನ್ನು ನಾವು ಹತ್ತಿಕ್ಕುವುದಿಲ್ಲ. ಆದರೆ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಕಾವೇರಿ ವಿವಾದದಲ್ಲಿ ರಾಜಕೀಯ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿವಾದಕ್ಕೆ ಸಂಬಂಧಪಟ್ಟಂತೆ ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಲಾಗಿತ್ತು. ಆಗ ವಿಪಕ್ಷದವರು ನನ್ನ ರಾಜೀನಾಮೆ ಕೇಳಿರಲಿಲ್ಲ. ಈಗ ರಾಜಕೀಯ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸೆ.26ರಂದು ಸುಪ್ರೀಂಕೋರ್ಟ್‌ನಲ್ಲಿ ಮತ್ತೂಮ್ಮೆ ಕಾವೇರಿ ವಿಚಾರ ಚರ್ಚೆಗೆ ಬರಲಿದೆ. ಅಲ್ಲಿ ನಾವು ಪ್ರಬಲ ವಾದ ಮಂಡಿಸಲು ಕ್ರಮ ಕೈಗೊಂಡಿದ್ದೇವೆ. ರಾಜ್ಯದ ಹಿತಾಸಕ್ತಿ ಕಾಪಾಡುವುದಕ್ಕೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ ಎಂದರು.

ಪೊಲೀಸ್‌ ಅಧಿಕಾರಿಗಳ ಜತೆ ಸಭೆ
ಮಂಗಳವಾರ ನಡೆಯುವ ಬೆಂಗಳೂರು ಬಂದ್‌ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೋಮವಾರ ಬೆಳಗ್ಗೆ ಹಿರಿಯ ಪೊಲೀಸ್‌ ಅಧಿಕಾರಿಗಳ ಜತೆಗೆ ಸಭೆ ನಡೆಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ.

ಕಾವೇರಿ ವಿಷಯದಲ್ಲಿ ಕಾಂಗ್ರೆಸ್‌ನಿಂದ ಅನ್ಯಾಯ: ಎಚ್‌.ಡಿ. ದೇವೇಗೌಡ
ಬೆಂಗಳೂರು: ನೀವು ಕಾವೇರಿ ಬಗ್ಗೆ ಮಾತನಾಡಿದರೆ ನನ್ನ ಸರಕಾರ ಹೋಗುತ್ತದೆ. ತಮಿಳರು ಎಲ್ಲರೂ ಒಟ್ಟಾಗಿದ್ದಾರೆ. ಕೋರ್ಟ್‌ನಲ್ಲೇ ಬಗೆಹರಿಸಿಕೊಳ್ಳಿ ಎಂದು ಅಂದಿನ ಪ್ರಧಾನಿ
ಮನಮೋಹನ್‌ ಸಿಂಗ್‌ ಕೈಚೆಲ್ಲಿದ್ದಾಗಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು, ಮನ ಮೋಹನ್‌ ಸಿಂಗ್‌ ಸಂಪುಟದಲ್ಲಿ ನಮ್ಮ ರಾಜ್ಯದ 4 ಜನ ಮಂತ್ರಿಗಳಿದ್ದರು. ಅವರಲ್ಲಿ ಒಬ್ಬರೂ ಅಂದು ರಾಜ್ಯದ ಪರವಾಗಿ ಮಾತನಾಡಲಿಲ್ಲ. ಈಗ ಮನಮೋಹನ್‌ ಸಿಂಗ್‌ ಅವರೂ ಇದ್ದಾರೆ, ಆ ನಾಲ್ವರು ಸಚಿವರಾದ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಲಿ, ಎಸ್‌.ಎಂ.ಕೃಷ್ಣ, ಕೆ.ಎಚ್‌.ಮುನಿಯಪ್ಪ ಅವರೂ ಇದ್ದಾರೆ. ಇದು ಕರ್ನಾಟಕದ ಬಗ್ಗೆ ಕಾಂಗ್ರೆಸ್‌ ತೋರಿಸಿದ ಕಾಳಜಿ ಎಂದು ಜರಿದರು.

ಬರಿದಾದ ಜಲಾಶಯಗಳ ಚಿತ್ರ ಪ್ರದರ್ಶನ
ರಾಜ್ಯದಲ್ಲಿ ದೊಡ್ಡ ಪ್ರಮಾಣದ ಜಲ ಸಂಕಷ್ಟ ಉಂಟಾಗಿದೆ. ಜಲಾಶಯಗಳಲ್ಲಿ ನೀರಿಲ್ಲ. ಆದರೂ ತಮಿಳುನಾಡಿಗೆ ನೀರು ಬಿಡಿ ಎಂದು ಆದೇಶಗಳು ಬರುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿಗಳು, ಸುದ್ದಿಗೋಷ್ಠಿಯಲ್ಲಿ ಬರಿದಾದ ಕೆಆರ್‌ಎಸ್‌ ಜಲಾಶಯದ ಚಿತ್ರಗಳನ್ನು ಪ್ರದರ್ಶಿಸಿದರು.

ಈ ಫೋಟೋಗಳನ್ನು ಪ್ರಧಾನಿಯವರಿಗೂ ಕಳಿಸುತ್ತೇವೆ. ಅವರೇ ಗಮನಿಸಲಿ. ನೀರಿದ್ದರೆ ಸಮಸ್ಯೆ ಇಲ್ಲ. ನೀರು ಇಲ್ಲದಿದ್ದಕ್ಕೆ ಈ ಬಿಕ್ಕಟ್ಟು. ಅವರೂ ಬದುಕಬೇಕು, ನಾವೂ ಬದುಕಬೇಕು. ರಾಜ್ಯಸಭೆಯಲ್ಲಿ ನಾನು ಎಲ್ಲ ವಿಷಯವನ್ನು ಹೇಳಿದ್ದೇನೆ. ನನ್ನಿಂದ ನಿಲ್ಲಲು ಆಗದಿದ್ದರೂ ಶಕ್ತಿಮೀರಿ ಪ್ರಯತ್ನಿಸಿ ಎದ್ದು ನಿಂತು ಮಾತನಾಡಿದ್ದೇನೆ. ಕಣ್ಣೀರು ಹಾಕಿದ್ದೇನೆ ಎಂದು ಗದ್ಗದಿತರಾಗಿ ಹೇಳಿದರು.

ಪ್ರಧಾನಿ ಮಧ್ಯಪ್ರವೇಶಕ್ಕೆ ಎಚ್‌ಡಿಕೆ ಆಗ್ರಹ
ಬೆಂಗಳೂರು: ಸಿಡಬ್ಲೂಎಂಎ ಹಾಗೂ ಸಿಡಬ್ಲೂಆರ್‌ಸಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಸೂಚನೆ ನೀಡಿದ ದಿನವೇ ಪ್ರಧಾನಿಗಳು ಮಧ್ಯ ಪ್ರವೇಶಿಸ ಬೇಕೆಂದು ಹೇಳಿದ್ದೆ ಎಂದು ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಲೂ ಪ್ರಧಾನಿ ಮಧ್ಯಪ್ರವೇಶ ಮಾಡುವಂತೆ ನಾನು ಆಗ್ರಹಿಸುತ್ತೇನೆ ಎಂದರು. ಕುಮಾರಸ್ವಾಮಿ ಅವರು ಅಮಿತ್‌ ಶಾ ಜತೆ ಮಾತನಾಡಿಕೊಂಡು ಬಂದಿದ್ದಾರೆ. ಅದೇ ಕಾವೇರಿ ವಿಚಾರವಾಗಿ ಮಾತನಾಡಬೇಕಿತ್ತು ಎಂಬ ಸಚಿವರೊಬ್ಬರ ಹೇಳಿಕೆ ಬಗ್ಗೆ ಕಿಡಿಕಾರಿದ ಅವರು, ಆ ಸಚಿವರು ಮೊದಲೇ ಹೇಳಿದ್ದರೆ ಮಾತನಾಡಿಕೊಂಡು ಬರುತ್ತಿದೆ. ಅವರೂ ಹೋಗಿ ಕೇಂದ್ರ ಮಂತ್ರಿಯನ್ನು ಭೇಟಿ ಮಾಡಿದ್ದರಲ್ಲ, ಅವರು ಏನು ಮಾತನಾಡಿಕೊಂಡು ಬಂದಿದ್ದಾರೆ ಎಂದು ಮರು ಪ್ರಶ್ನಿಸಿದರು. ಸುಪ್ರೀಂ ಕೋರ್ಟ್‌ ಮುಂದೆ ಈ ಸರಕಾರ ಏನು ವಾಸ್ತವಾಂಶ ಇಟ್ಟಿದೆ ಎಂದು ಹೇಳಲಿ. ದೇವೇಗೌಡರ ಬದ್ಧತೆ ಇವರಿಗೆ ಇದೆಯಾ? ಇವರಿಂದ ಕಲೀಬೇಕಾ ಎಂದು ಖಾರವಾಗಿ ಪ್ರಶ್ನಿಸಿದರು.

ಬಂದ್‌ಗೆ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ನೈತಿಕ ಬೆಂಬಲ
ಬೆಂಗಳೂರು: ಬೆಂಗಳೂರು ಬಂದ್‌ಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ತಿಳಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಂಗಮ್‌ ಸುರೇಶ್‌, ಬೆಂಗಳೂರು ಬಂದ್‌ನಲ್ಲಿ ಸ್ವಯಂ ಪ್ರೇರಿತವಾಗಿ ಪತ್ರಿಕೆ ವಿತರಣೆ ಮಾಡುವುದರ ಜತೆಗೆ ಕಪ್ಪು ಪಟ್ಟಿ ಧರಿಸಿ ಕಾವೇರಿ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ಪತ್ರಿಕಾ ವಿತರಕರು ನೀಡಲಿದ್ದಾರೆ. ರಾಜ್ಯದ ರೈತರ ಹಿತದೃಷ್ಟಿಯಿಂದ ಹಾಗೂ ಜೀವ ಜಲಗಳ ಹಿತದೃಷ್ಟಿಯಿಂದ ನಡೆಯುವ ಹೋರಾಟಕ್ಕೆ ಪತ್ರಿಕಾ ವಿತರಕರು ಸದಾ ಬೆಂಬಲವಾಗಿ ನಿಲ್ಲಲಿದ್ದಾರೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.