CBDT ಅಧ್ಯಕ್ಷ ಗುಪ್ತಾ ಸೇವಾವಧಿ ವಿಸ್ತರಣೆ
Team Udayavani, Sep 30, 2023, 8:21 PM IST
ನವದೆಹಲಿ: ಕೇಂದ್ರೀಯ ನೇರ ತೆರಿಗೆಗಳ ಮಂಡಳಿ(ಸಿಬಿಡಿಟಿ) ಅಧ್ಯಕ್ಷರಾದ ನಿತಿನ್ ಗುಪ್ತಾ ಅವರ ಅಧಿಕಾರಾವಧಿಯನ್ನು ಗುತ್ತಿಗೆ ಆಧಾರದಲ್ಲಿ ಮುಂದಿನ 9 ತಿಂಗಳು ಕಾಲ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. 1986ರ ಬ್ಯಾಚ್‌ನ ಭಾರತೀಯ ಕಂದಾಯ ಸೇವೆ(ಐಆರ್‌ಎಸ್) ಅಧಿಕಾರಿಯಾಗಿರುವ ಗುಪ್ತಾ(60) ಶನಿವಾರ ನಿವೃತ್ತಿ ಹೊಂದುವವರಿದ್ದರು.
ಆದಾಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿದ್ದ ಅವರನ್ನು ಸಿಬಿಡಿಟಿ ಅಧ್ಯಕ್ಷರಾಗಿ ಕಳೆದ ವರ್ಷ ಜೂನ್‌ನಲ್ಲಿ ನೇಮಿಸಲಾಗಿತ್ತು. 2023ರ ಅ.1ರಿಂದ 2024ರ ಜೂ.30ರವರೆಗೆ ಸಿಬಿಡಿಟಿ ಅಧ್ಯಕ್ಷರಾಗಿ ಗುಪ್ತಾ ಅವರ ಮರು ನೇಮಕಕ್ಕೆ ಕೇಂದ್ರ ಸಂಪುಟ ನೇಮಕ ಸಮಿತಿ(ಎಸಿಸಿ) ಅನುಮೋದನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.