![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Oct 15, 2023, 5:48 PM IST
ಮಂಗಳೂರು: ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಅ್ಯಪ್ ಉಪಯೋಗಿಸಿಕೊಂಡು ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಸೋಲು ಗೆಲುವಿನಲ್ಲಿ ಅದೃಷ್ಠದ ಆಟವಾದ ಕ್ರಿಕೆಟ್ ಬೆಟ್ಟಿಂಗ್ ಜೂಜಾಟವಾಡುತ್ತಾ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸುತ್ತಿದ್ದರು. ಈ ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ದೀಪಕ್, ಸಂದೀಪ್ ಶೆಟ್ಟಿ ಎಂಬವರನ್ನು ಬಂಧಿಸಿದ್ದಾರೆ.
ಅವರ ವಶದಿಂದ ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು ರೂ. 31,000/- ನಗದು ಹಾಗೂ 4 ಮೊಬೈಲ್ ಫೋನ್ ಸಹಿತ ಅಂದಾಜು ರೂ. 1,11,000/- ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ಈ ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಇತರರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಈ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಪ್ರಕರಣದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರವರಾದ ಶ್ರೀ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.