CCB ಗೇ “ಬಿಟ್‌’ ಉರುಳು!

- ಬಿಟ್‌ಕಾಯಿನ್‌ ಹಗರಣ: ಸಿಸಿಬಿ ವಿರುದ್ಧವೇ ಎಸ್‌ ಐಟಿ ಎಫ್ಐಆರ್‌

Team Udayavani, Aug 12, 2023, 6:31 AM IST

bit coin

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಬಿಟ್‌ಕಾಯಿನ್‌ ಹಗರಣವು ಹೊಸ ತಿರುವು ಪಡೆದಿದ್ದು, ಈ ಹಿಂದೆ ತನಿಖೆ ನಡೆಸಿದ್ದ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ತನಿಖಾಧಿಕಾರಿಗಳೇ ಸಾಕ್ಷ್ಯ ನಾಶ ಮಾಡಿರುವುದು ವಿಶೇಷ ತನಿಖಾ ದಳ (ಎಸ್‌ಐಟಿ)ದ ತನಿಖೆಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಿಸಿಬಿ ತನಿಖಾಧಿಕಾರಿಗಳ ವಿರುದ್ಧ ಎಫ್ಐಆರ್‌ ದಾಖಲಾಗಿದ್ದು, ಅಧಿಕಾರಿಗಳಿಗೆ ಎಸ್‌ಐಟಿ ವಿಚಾರಣೆ ಭೀತಿ ಎದುರಾಗಿದೆ.

ಹಗರಣದಲ್ಲಿ ಸಿಸಿಬಿ ತನಿಖಾಧಿಕಾರಿಗಳು ಇಲ್ಲದಿದ್ದ ಕಡತಗಳನ್ನು ಸೃಷ್ಟಿಸಿ ಸಾಕ್ಷ್ಯಾಧಾರ ತಿರುಚುವ, ಸಾಕ್ಷ್ಯ ನಾಶಪಡಿಸುವ ಮೂಲಕ ಅಪರಾಧಿಕ ದುರುಪಯೋಗ, ಅವುಗಳ ಸಾಕ್ಷಿಗಳ ಮೌಲ್ಯವನ್ನು ಅಪಮೌಲ್ಯಗೊಳಿಸಿರುವುದು ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್‌ಎಲ್‌)ದ ವರದಿಯಿಂದ ಬಹಿರಂಗಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಸಿಬಿ ಕೈಗೆತ್ತಿಕೊಂಡ ಬಳಿಕವೇ ಸಾಕ್ಷ್ಯಗಳನ್ನು ತಿರುಚಿರುವುದು ಗೊತ್ತಾಗಿದೆ.

ಎಫ್ಐಆರ್‌ನಲ್ಲಿ ಏನಿದೆ?
ಎಸ್‌ಐಟಿ ತನಿಖಾ ತಂಡದ ಅಧಿಕಾರಿ ಹಾಗೂ ಸಿಐಡಿ ಡಿವೈಎಸ್‌ಪಿ ಕೆ. ರವಿಶಂಕರ್‌ ನೀಡಿರುವ ದೂರಿನ ಆಧಾರದ ಮೇಲೆ ಕಾಟನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಸಿಸಿಬಿ ತನಿಖಾಧಿಕಾರಿಗಳ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಹಿಂದಿನ ಸಿಸಿಬಿ ತನಿಖಾಧಿಕಾರಿಗಳು ಆರೋಪಿಗಳು ಕೃತ್ಯಕ್ಕೆ ಉಪಯೋಗಿಸಿದ್ದ ಎಲೆಕ್ಟ್ರಾನಿಕ್‌ ಉಪಕರಣಗಳಾದ ಮೊಬೈಲ್‌, ಲ್ಯಾಪ್‌ಟಾಪ್‌, ಕಂಪ್ಯೂಟರ್‌ಗಳು, ಹಾರ್ಡ್‌ಡಿಸ್ಕ್ಗಳು, ಪೆನ್‌ ಡ್ರೈವ್‌ ಮತ್ತಿತರ ವಸ್ತುಗಳನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದರು. ಜು. 19ರಂದು ಎಫ್ಎಸ್‌ಎಲ್‌ ನೀಡಿದ ವರದಿಯನ್ನು ಎಸ್‌ಐಟಿ ತಂಡ ಪರಿಶೀಲಿಸಿತ್ತು.

2020ರ ನ. 9ರಂದು ವಶಪಡಿಸಿಕೊಂಡಿದ್ದ ಎರಡು ಪೆನ್‌ಡ್ರೈವ್‌ಗಳನ್ನು 2020 ನ. 11ರಂದು ಮಿರರ್‌ ಇಮೇಜ್‌ ಪ್ರಕ್ರಿಯೆಗೆ ಒಳಪಡಿಸಲಾಗಿದೆ. ಅಮಾನತುಪಡಿಸಿರುವ ಮೂಲ ಆರ್ಟಿಕಲ್‌ನಲ್ಲಿಯೇ ಹೆಚ್ಚುವರಿಯಾಗಿ ಕಡತಗಳು ಸೃಷ್ಟಿಯಾಗಿರುವುದು ಪತ್ತೆಯಾಗಿದೆ. ಒಂದು ಹಾರ್ಡ್‌ ಡಿಸ್ಕ್ ಮತ್ತು ಒಂದು ಆ್ಯಪಲ್‌ ಮ್ಯಾಕ್‌ಬುಕ್‌ಗಳನ್ನು 2020ರ ನ. 17ರಂದು ಜಪ್ತಿ ಮಾಡಿ 2020ರ ನ. 22ರಿಂದ ಡಿ. 11ರ ನಡುವೆ ಮಿರರ್‌ ಇಮೇಜ್‌ ಪ್ರಕ್ರಿಯೆಗೆ ಒಳಪಡಿಸಲಾಗಿದೆ. ಆದರೆ 2020ರ ನ. 18ರಿಂದ ನ. 21ರ ನಡುವೆ ಮೂಲ ಆರ್ಟಿಕಲ್‌ನಲ್ಲಿಯೇ ಹೆಚ್ಚುವರಿಯಾಗಿ ಕಡತ ಸೃಷ್ಟಿಯಾಗಿರುವ ಅಂಶ ಎಫ್ಎಸ್‌ಎಲ್‌ ವರದಿಯಿಂದ ತಿಳಿದುಬಂದಿದೆ.

ಈ ಅಪರಾಧಿಕ ಕೃತ್ಯಗಳು 2020ರ ನ. 9ರಿಂದ 2020ರ ಡಿ. 16ರ ನಡುವೆ ಬೆಂಗಳೂರಿನ ಸಿಸಿಬಿ ಕಚೇರಿ ಹಾಗೂ ಇತರೆಡೆಗಳಲ್ಲಿ ನಡೆದಿರುವುದು ದಾಖಲಾತಿಗಳ ಪರಿಶೀಲನೆಯಿಂದ ತಿಳಿದುಬಂದಿದೆ. ಈ ರೀತಿಯಾಗಿ ಅಮಾನತುಪಡಿಸಿದ ದಿನಾಂಕ ಹಾಗೂ ಸಮಯದ ಅನಂತರ ಹಿಂದಿನ ಸಿಸಿಬಿ ತನಿಖಾಧಿಕಾರಿಗಳು, ಇತರ ಪೊಲೀಸ್‌ ಅಧಿಕಾರಿಗಳು ಮತ್ತು ಇತರರು ಒಳಸಂಚು ನಡೆಸಿ, ಯಾವುದೋ ದುರುದ್ದೇಶದಿಂದ ಕಾನೂನುಬದ್ಧವಾಗಿ ವಶಪಡಿಸಿಕೊಂಡು ತಮ್ಮ ಸುಪರ್ದಿಯಲ್ಲಿದ್ದ ಡಿಜಿಟಲ್‌ ಉಪಕರಣಗಳಲ್ಲಿ ಅಮಾನತುಪಡಿಸಿದ್ದ ಸಮಯದಲ್ಲಿ ಇಲ್ಲದೆ ಇದ್ದ ಕಡತಗಳನ್ನು ಸೃಷ್ಟಿಸಿ ಸಾಕ್ಷ್ಯಾಧಾರಗಳನ್ನು ತಿರುಚುವ, ಸಾಕ್ಷ್ಯ ನಾಶಪಡಿಸುವುದರ ಮೂಲಕ ಅಪರಾಧಿಕ ದುರುಪಯೋಗ ಹಾಗೂ ಅವುಗಳ ಸಾಕ್ಷಿಗಳ ಮೌಲ್ಯವನ್ನು ಅಪಮೌಲ್ಯಗೊಳಿಸಿದ ಅಪರಾದ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಈ ಅಪರಾಧ ಎಸಗಿರುವ ಸಿಸಿಬಿ ಹಿಂದಿನ ತನಿಖಾಧಿಕಾರಿಗಳು ಹಾಗೂ ಇತರ ಪೊಲೀಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವಂತೆ ಎಫ್ಐಆರ್‌ನಲ್ಲಿ ಉಲ್ಲೇಖೀಸಲಾಗಿದೆ.

ಮುಂದೇನು?
2020ರಲ್ಲಿ ಬಿಟ್‌ಕಾಯಿನ್‌ ತನಿಖೆ ನಡೆಸಿದ ಸಿಸಿಬಿ ತನಿಖಾಧಿಕಾರಿಗಳು, ಯಾವ ಹಿರಿಯ ಐಪಿಎಸ್‌ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆದಿದೆ, ಬಿಟ್‌ಕಾಯಿನ್‌ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್‌ ಶ್ರೀಕಿ ಕೊಟ್ಟ ಹೇಳಿಕೆಗೂ ಸಿಸಿಬಿ ಸೃಷ್ಟಿಸಿರುವ ಕಡತಗಳಿಗೆ ಲಿಂಕ್‌ ಇದೆಯೇ, ಸಿಸಿಬಿ ತನಿಖಾಧಿಕಾರಿಗಳು ಯಾರ ಪ್ರಭಾವಕ್ಕೆ ಒಳಗಾಗಿ ಕೃತ್ಯ ಎಸಗಿದ್ದಾರೆ ಎಂಬ ಬಗ್ಗೆ ಎಸ್‌ಐಟಿ ಮಾಹಿತಿ ಕಲೆ ಹಾಕುತ್ತಿದೆ. ಎಫ್ಎಸ್‌ಎಲ್‌ ವರದಿ ಕಂಡು ದಂಗಾದ ಎಸ್‌ಐಟಿ ಅಧಿಕಾರಿಗಳು ಈಗ ಬಿಟ್‌ಕಾಯಿನ್‌ ಹಗರಣ ಬೆಳಕಿಗೆ ಬಂದ ಬಳಿಕ ನಡೆದ ತನಿಖೆಗಳ ಬಗ್ಗೆ ಸಮಗ್ರ ದಾಖಲೆ ಕಲೆ ಹಾಕುವಲ್ಲಿ ನಿರತರಾಗಿದ್ದಾರೆ. ಶೀಘ್ರದಲ್ಲೇ ಸಂಬಂಧಪಟ್ಟ ಸಿಸಿಬಿ ಅಧಿಕಾರಿಗಳಿಗೆ ನೋಟಿಸ್‌ ಕೊಟ್ಟು ವಿಚಾರಣೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.