ಬಿಜೆಪಿ ಕಚೇರಿ, ಬಿಎಸ್‌ವೈ ಮನೆಯಲ್ಲಿ ಸಂಭ್ರಮ
Team Udayavani, Jul 25, 2019, 3:07 AM IST
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸಮತ ಗಳಿಸುವಲ್ಲಿ ವಿಫಲವಾಗುತ್ತಿದ್ದಂತೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರಲ್ಲಿ ಹಷೊìದ್ಘಾರ ಮುಗಿಲು ಮುಟ್ಟಿದೆ. ಬಿಜೆಪಿ ಸರ್ಕಾರ ರಚನೆಯಾಗಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮ ಮನೆ ಮಾಡಿತ್ತು.
ಕಾರ್ಯಕರ್ತರು ಅತ್ಯಂತ ಸಂಭ್ರಮ, ಸಡಗರದಿಂದ ಕಚೇರಿಯಲ್ಲಿ ಸುತ್ತಾಡುತ್ತಿದ್ದರು. ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಅವರು ಪಕ್ಷದ ಕಚೇರಿಗೆ ಭೇಟಿ ನೀಡಿ, ಕೆಲ ಗಂಟೆಗಳ ಕಾಲ ಪ್ರಮುಖರೊಂದಿಗೆ ಚರ್ಚೆ ನಡೆಸಿದರು. ರಾಜ್ಯ ಬಿಜೆಪಿ ಸಹ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಕೂಡ ದಿನವಿಡಿ ಪಕ್ಷದ ಕಚೇರಿಯಲ್ಲೇ ಇದ್ದು, ಸಂಘಟನಾತ್ಮಕವಾಗಿ ಆಗಬೇಕಿರುವ ಹಲವು ವಿಚಾರಗಳ ಬಗ್ಗೆ ಕಾರ್ಯಕರ್ತರು ಮತ್ತು ಪ್ರಮುಖರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಕಳೆದ ಕೆಲವು ದಿನಗಳಿಂದ ಪಕ್ಷದ ಕಚೇರಿಯ ಟಿವಿ ಮುಂದೆಯೇ ಕುಳಿದಿದ್ದ ಅನೇಕರು ಬುಧವಾರ ನಿಟ್ಟುಸಿರು ಬಿಟ್ಟು, ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು. ನಮ್ಮ ಪಕ್ಷ ಅಧಿಕಾರಕ್ಕೆ ಬರುವ ಕಾಲ ಸನ್ನಿಹಿತವಾಗಿದೆ. ಪಕ್ಷದ ಕೇಂದ್ರ ಕಚೇರಿಗೆ ಇನ್ನಷ್ಟು ಮೆರುಗು ಬರಲಿದೆ ಎಂಬ ಆಶಾಭಾವದಲ್ಲಿ ಅಲ್ಲಿನ ಕಾರ್ಯಕರ್ತರು ಸಿಬ್ಬಂದಿ ವರ್ಗ ಇದೆ. ಬುಧವಾರ ಬಿ.ಎಸ್.ಯಡಿಯೂರಪ್ಪ ಅವರು ಕಚೇರಿಗೆ ಭೇಟಿ ನೀಡಿದೇ ಇದ್ದರೂ, ಬೇರೆ, ಬೇರೆ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಪ್ರಮುಖರು ಪಕ್ಷದ ಕಚೇರಿಗೆ ಭೇಟಿ ನೀಡಿ, ಪ್ರಮುಖರೊಂದಿಗೆ ಚರ್ಚೆ ನಡೆಸಿದ್ದಾರೆ.
ಇನ್ನು ಡಾಲರ್ ಕಾಲೋನಿಯ ಬಿ.ಎಸ್.ಯಡಿಯೂರಪ್ಪ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿತ್ತು. ಪಕ್ಷದ ಪ್ರಮುಖರು, ಶಾಸಕರು ಸೇರಿದಂತೆ ಮನೆಗೆ ಭೇಟಿ ನೀಡಿದ ಪ್ರತಿಯೊಬ್ಬರು ಯಡಿಯೂರಪ್ಪ ಅವರಿಗೆ ಹೂವಿನ ಹಾರ ಹಾಕಿ, ಹೂಗುತ್ಛ ನೀಡಿ, ಪೇಟಾ ಧರಿಸಿ ಸನ್ಮಾನಿಸುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಕಾರ್ಯಕರ್ತರು ಸಿಹಿ ಹಂಚಿ, ಸಂಭ್ರಮಾಚರಣೆ ಮಾಡಿದರು. ಒಟ್ಟಾರೆಯಾಗಿ ಬಿಎಸ್‌ವೈ ನಿವಾಸ ಹಾಗೂ ಬಿಜೆಪಿ ಕಾರ್ಯಾಲಯದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಸದಸ್ಯತ್ವ ಅಭಿಯಾನವೂ ಜೋರಾಗಿ ನಡೆಯುತ್ತಿದ್ದು, ಎಲ್ಲರೂ ಅತ್ಯಂತ ಸಂಭ್ರಮ, ಸಡಗರದಿಂದ ಕೆಲಸ ಮಾಡುತ್ತಿರುವ ದೃಶ್ಯ ಕಚೇರಿಯಲ್ಲಿ ಕಾಣುತ್ತಿತ್ತು.
ಬಿಎಸ್‌ವೈ ನಿವಾಸಕ್ಕೆ ಪೊಲೀಸ್ ಭದ್ರತೆ: ಮೈತ್ರಿ ಸರ್ಕಾರ ಪತನವಾಗುತ್ತಿದ್ದಂತೆ ಮಲ್ಲೇಶ್ವರದ ಬಿಜೆಪಿ ಕಚೇರಿ ಹಾಗೂ ಡಾಲರ್ ಕಾಲೋನಿಯ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು. ಬಿಜೆಪಿ ಕಾರ್ಯಾಲಯದಲ್ಲಿ ಲೋಹ ಶೋಧಕ ಯಂತ್ರವನ್ನು ಅಳವಡಿಸಲಾಗಿತ್ತು. ರಸ್ತೆಯಲ್ಲಿ ಬ್ಯಾರಿಕೇಡ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದರೆ ಯಾವುದೇ ರೀತಿಯ ಗೊಂದಲ ಆಗಬಾರದು ಎಂಬ ಉದ್ದೇಶದಿಂದ ಹೆಚ್ಚಿನ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎಲ್ಲೆಲ್ಲೂ ಸಚಿವ ಸ್ಥಾನದ ಮಾತು…: ಬಿಜೆಪಿ ಕಚೇರಿಯಲ್ಲಿ ಎಲ್ಲಿ, ಯಾರಲ್ಲಿ ಕೇಳಿದರೂ, ಬಿಎಸ್‌ವೈ ಮುಖ್ಯಮಂತ್ರಿ ಆಗುತ್ತಾರೆ. ಯಾರ್ಯಾರು ಉಪ ಮುಖ್ಯಮಂತ್ರಿ ಆಗುತ್ತಾರೆ. ಮಂತ್ರಿಗಿರಿ ಯಾರಿಗೆ ಸಿಗಲಿದೆ. ಬೆಂಗಳೂರಿನ ಎಷ್ಟು ಶಾಸಕರಿಗೆ ಮಂತ್ರಿಗಿರಿ ಸಿಗಲಿದೆ ಎಂಬಿತ್ಯಾದಿ ವಿಚಾರಗಳ ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ಕರಾವಳಿ ಅಥವಾ ಉತ್ತರ ಕರ್ನಾಟಕ ಭಾಗಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಗಬಹುದು. ಕರಾವಳಿಗೆ ಹೆಚ್ಚಿನ ಮಂತ್ರಿ ಸ್ಥಾನ ಸಿಗದೇ ಇದ್ದರೂ ನಿಗಮ ಮಂಡಳಿಯಲ್ಲಿ ಹೆಚ್ಚಿನ ಅವಕಾಶ ದೊರೆಯಲಿದೆ ಎಂಬ ಮಾತುಕತೆಗಳು ಕಾರ್ಯಕರ್ತರು ಹಾಗೂ ಪ್ರಮುಖರ ಮಧ್ಯೆ ಆರಂಭವಾಗಿದೆ.
ಯಡಿಯೂರಪ್ಪ ಅವರ ಡಾಲರ್ ಕಾಲೋನಿಯ ನಿವಾಸಕ್ಕೆ ಸಚಿವ ಸ್ಥಾನದ ಆಕಾಂಕ್ಷಿಗಳು ಭೇಟಿ ನೀಡಿದ್ದು ಕಂಡು ಬಂತು. ಪ್ರದೇಶವಾರು, ಹಿರಿತನ, ಜಾತಿ, ಪಕ್ಷ ನಿಷ್ಠೆ ಇತ್ಯಾದಿ ವಿಷಯಗಳ ಆಧಾರದಲ್ಲಿ ಮಂತ್ರಿ ಸ್ಥಾನದ ಹಂಚಿಕೆಯಾಗಲಿದೆ ಎಂಬ ಚರ್ಚೆಯೂ ನಡೆಯುತ್ತಿದೆ. ಬಿಜೆಪಿಯ ಬೆಂಗಳೂರಿನ ಪ್ರಬಲ ನಾಯಕರಾದ ಆರ್.ಅಶೋಕ್, ವಿ.ಸೋಮಣ್ಣ, ಡಾ.ಅಶ್ವತ್ಥನಾರಾಯಣ, ಎಸ್.ಆರ್.ವಿಶ್ವನಾಥ್, ಸತೀಶ್ ರೆಡ್ಡಿ, ಅರವಿಂದ ಲಿಂಬಾವಳಿ ಮೊದಲಾದವರು ಸಚಿವಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಚಿಕ್ಕನಾಯಕನಹಳ್ಳಿ ಶಾಸಕ ಜೆ.ಸಿ.ಮಾಧುಸ್ವಾಮಿ, ಮೊಳಕಾಲ್ಮೂರು ಶಾಸಕ ಶ್ರೀರಾಮುಲು,
ಮೈಸೂರಿನ ರಾಮದಾಸ್, ಶಿವಮೊಗ್ಗದಿಂದ ಕೆ.ಎಸ್.ಈಶ್ವರಪ್ಪ, ದಾವಣಗೆರೆಯಿಂದ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ, ಕರಾವಳಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಸುನೀಲ್ ಕುಮಾರ್, ಅಂಗಾರ, ಸಂಜೀವ್ ಮಟ್ಟಂದೂರು, ಉತ್ತರ ಕರ್ನಾಟಕ ಭಾಗದಲ್ಲೂ ಸಚಿವ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಆದರೆ, ಯಾರ್ಯಾರು ಸಚಿವರಾಗಲಿದ್ದಾರೆ ಎಂಬುದು ಸಂಪುಟ ರಚನೆಯ ನಂತರವಷ್ಟೇ ತಿಳಿಯಲಿದೆ. ಆದರೆ, ಇದರ ಬಗ್ಗೆ ಕಾರ್ಯಕರ್ತರು ಹಾಗೂ ಪ್ರಮುಖರ ಚರ್ಚೆ ಈಗಲೇ ಆರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.