Karnataka: ಸರಕಾರಕ್ಕೆ ಶತ ಸಂಭ್ರಮ- ಸಿದ್ದರಾಮಯ್ಯ ನೇತೃತ್ವದ ಆಡಳಿತಕ್ಕೆ ಗ್ಯಾರಂಟಿಯೇ ಶಕ್ತಿ
Team Udayavani, Aug 28, 2023, 12:57 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರ್ಣಗೊಂಡಿವೆ. ಮೇ 20ರಂದು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದ ಸಿದ್ದರಾಮಯ್ಯ ಚುನಾವಣ ಪೂರ್ವದಲ್ಲಿ ಘೋಷಿಸಿದ್ದ ಪಂಚ ಗ್ಯಾರಂಟಿಗಳಿಗೆ ಮೊದಲ ಸಚಿವ ಸಂಪುಟ ಸಭೆಯಲ್ಲೇ ಒಪ್ಪಿಗೆಯ ಮುದ್ರೆ ಒತ್ತಿದ್ದರು.
ಅಂದಿನಿಂದಲೇ ಗ್ಯಾರಂಟಿಗಳ ಜಾರಿಗೆ ಸಂಪನ್ಮೂಲ ಕ್ರೋಡೀಕರಣ, ಫಲಾನುಭವಿ ಗಳ ಆಯ್ಕೆ ಇತ್ಯಾದಿ ಕಸರತ್ತು ಆರಂಭಿಸಿದ ಸರಕಾರವು ಐದರಲ್ಲಿ ಮೂರು ಗ್ಯಾರಂಟಿಗಳನ್ನು ಷರತ್ತುಬದ್ಧವಾಗಿ ಜಾರಿಗೊಳಿಸಿದ್ದು, ಇನ್ನುಳಿದ ಎರಡರ ಅನುಷ್ಠಾನಕ್ಕಾಗಿ ದಿನ ಗಣನೆ ಆರಂಭವಾಗಿದೆ.
ಷರತ್ತಿಲ್ಲದ ಶಕ್ತಿ
ಷರತ್ತುಗಳಿಲ್ಲದೆ ಜಾರಿಯಾದ ಏಕೈಕ ಮತ್ತು ಪ್ರಪ್ರಥಮ ಯೋಜನೆ ರಾಜ್ಯದ ಮಹಿಳೆಯರಿಗೆ ಸರಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ “ಶಕ್ತಿ’. ಜೂ. 11ರಂದು ಆರಂಭಗೊಂಡ “ಶಕ್ತಿ’ಯ ಪ್ರಯೋಜನ ವನ್ನು ಇದುವರೆಗೆ 46.80 ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಪಡೆದುಕೊಂಡಿದ್ದು, ಇದಕ್ಕಾಗಿ 1,084 ಕೋಟಿ ರೂ. ಮೌಲ್ಯದ ಶೂನ್ಯದರ ಟಿಕೆಟ್‌ಗಳನ್ನು ವಿತರಿಸ ಲಾಗಿದೆ. ಜೂ. 11ರಿಂದ 30ರ ವರೆಗೆ 259.96 ಕೋಟಿ ರೂ. ಮೌಲ್ಯದ ಟಿಕೆಟ್ ವಿತರಣೆ ಯಾಗಿತ್ತು. ಜೂ. 11ರಿಂದ ಜು. 30ರ ವರೆಗೆ 687.49 ಕೋಟಿ ರೂ. ಮೌಲ್ಯದ ಟಿಕೆಟ್ ಬಿಕರಿ ಯಾಗಿತ್ತು. ಹಾಲಿ ತಿಂಗಳಲ್ಲಿ ಮೊದಲ ಕಂತಿನ ಸಹಾಯಾನುದಾನವಾಗಿ 125.48 ಕೋಟಿ ರೂ., ಎರಡನೇ ಕಂತಿನಲ್ಲಿ ಮರುಪಾವತಿಗಾಗಿ 294.74 ಕೋಟಿ ರೂ. ಸೇರಿ ಒಟ್ಟು 420.22 ಕೋಟಿ ರೂ. ಬಿಡುಗಡೆ ಆಗಿದೆ. ಇನ್ನೂ 664.34 ಕೋಟಿ ರೂ.ಗಳನ್ನು ಸಾರಿಗೆ ನಿಗಮಗಳಿಗೆ ಬಿಡುಗಡೆ ಮಾಡಬೇಕಿದೆ.
ಅನ್ನಭಾಗ್ಯದೊಂದಿಗೆ ನಗದು ಭಾಗ್ಯ
ಅನ್ನಭಾಗ್ಯ ಯೋಜನೆಯಡಿ ಆಹಾರ ಭದ್ರತ ಕಾಯ್ದೆಯಡಿ ಕೇಂದ್ರ ಸರಕಾರ ನೀಡುತ್ತಿರುವ 5 ಕೆ.ಜಿ. ಅಕ್ಕಿಯನ್ನು ಬಿಪಿಎಲ್, ಅಂತ್ಯೋದಯ ಅನ್ನ ಕಾರ್ಡುದಾರರಿಗೆ ಎಂದಿನಂತೆ ವಿತರಿಸಲಾಗುತ್ತಿದ್ದು, ಇನ್ನುಳಿದ 5 ಕೆ.ಜಿ. ಅಕ್ಕಿಯ ಬದಲಿಗೆ ನೇರ ನಗದು ಪಾವತಿ ಮಾಡಲಾಗುತ್ತಿದೆ. ಆಹಾರ ಇಲಾಖೆಯ ಅಂದಾಜಿನ ಪ್ರಕಾರ ತಿಂಗಳಿಗೆ 2.40 ಲಕ್ಷ ಟನ್‌ನಷ್ಟು ಹೆಚ್ಚುವರಿ ಅಕ್ಕಿ ಬೇಕಾಗಿದ್ದು, ಭಾರತೀಯ ಆಹಾರ ನಿಗಮದಿಂದ ಅಕ್ಕಿ ಸಿಗದೆ ಇರುವುದರಿಂದ ಆಂಧ್ರಪ್ರದೇಶ, ತೆಲಂಗಾಣ ಸಹಿತ ವಿವಿಧ ರಾಜ್ಯಗಳ ಮೊರೆ ಹೋಗಿದೆ.
ಹಿನ್ನಡೆ ಉಂಟು ಮಾಡಿದ ಘಟನೆಗಳು
ಕೆಎಸ್ಸಾರ್ಟಿಸಿ ಚಾಲಕ ಕಂ ನಿರ್ವಾಹಕ ಆತ್ಮಹತ್ಯೆಗೆ ಯತ್ನಿಸಿದಾಗ ಸಚಿವ ಚಲುವರಾಯಸ್ವಾಮಿ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಮುಗಿಬಿದ್ದಿದ್ದರು. ವರ್ಗಾವಣೆಯ ದಂಧೆಯ ಆರೋಪಗಳೂ ಎರಗಿದವು. ಈ ಘಟನೆ ಮಾಸುವ ಮುನ್ನವೇ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಸಹಾಯಕ ಕೃಷಿ ಅಧಿಕಾರಿಗಳು ಪತ್ರ ಬರೆದ ಪ್ರಕರಣ ಮತ್ತಷ್ಟು ಮುಜುಗರ ಉಂಟು ಮಾಡಿತ್ತು. ಬಿಬಿಎಂಪಿ ಗುತ್ತಿಗೆದಾರರು ಡಿಸಿಎಂ ಡಿ.ಸಿ. ಶಿವಕುಮಾರ್ ವಿರುದ್ಧ ಬಾಕಿ ಬಿಲ್ ಪಾವತಿಗೆ ಲಂಚ ಸ್ವೀಕಾರದ ಆರೋಪ ಹೊರಿಸಿ ರಾಜಭವನದ ಬಾಗಿಲು ತಟ್ಟಿದ್ದರು. ಎರಡೇ ತಿಂಗಳಿಗೆ ಸಚಿವರು-ಶಾಸಕರ ನಡುವೆ ಸಮನ್ವಯದ ಕೊರತೆ ಸೃಷ್ಟಿಯಾಗಿತ್ತು. ಈ ಅಸಮಾಧಾನ ತಣಿಸಲು ಸಿಎಂ ಸರಣಿ ಸಭೆಗಳನ್ನು ನಡೆಸಿ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿ ಬಿಡುಗಡೆ ಮಾಡಿದ್ದರು. ಈಗ ಮಳೆ ಮಾಯವಾಗಿ ಬರಗಾಲದ ಛಾಯೆ ಆವರಿಸಿದೆಯಲ್ಲದೆ, ಕಾವೇರಿ ಜಲ ವಿವಾದಕ್ಕೆ ಮರುಜೀವ ಬಂದಿದೆ.
ನಮ್ಮ ಸರಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರೈಸಿವೆ.
ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ. -ಸಿದ್ದರಾಮಯ್ಯ, ಮುಖ್ಯಮಂತ್ರಿ
ಸರಕಾರದ ನೂರು ದಿನಗಳ ಕೆಲಸ ರಾಜ್ಯದ ಜನರ ಕಣ್ಣಿಗೆ ಕಾಣುತ್ತಿದೆ.
ನಮ್ಮ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಸೆಂಚುರಿ ಬಾರಿಸಿ ಮುನ್ನುಗ್ಗುತ್ತಿದೆ. ಶಕ್ತಿ ಯೋಜನೆಯಡಿ ಮಹಿಳೆಯರು ರಾಜ್ಯದೆÇÉೆಡೆ ಉಚಿತವಾಗಿ
ಬಸ್ ಪ್ರಯಾಣ ಮಾಡುತ್ತಿದ್ದಾರೆ. ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ
ಯಾವ ಸರಕಾರ ಇಷ್ಟು ಕೆಲಸ ಮಾಡಿದೆ?-ಡಿ.ಕೆ. ಶಿವಕುಮಾರ್, ಡಿಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.