Karnataka: ಸಮಯಾವಕಾಶ ಕೇಳಿದರೂ ಪ್ರತಿಕ್ರಿಯಿಸದ ಕೇಂದ್ರ: ಸಿಎಂ ಸಿದ್ದರಾಮಯ್ಯ
Team Udayavani, Sep 9, 2023, 11:17 PM IST
ಹುಬ್ಬಳ್ಳಿ/ಧಾರವಾಡ: ವಿವಿಧ ನೀರಾವರಿ ಯೋಜನೆಗಳ ವಿಚಾರ, ಸಮಸ್ಯೆಗಳ ಕುರಿತು ಸರ್ವಪಕ್ಷ ನಿಯೋಗ ಕರೆತರುತ್ತಿದ್ದು, ತಮಗೆ ಸಮಯ ನೀಡಬೇಕು ಎಂದು ಪ್ರಧಾನಿಗೆ 10 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ. ಇದುವರೆಗೂ ಅವರಿಂದ ಸಮಯ ನಿಗದಿಯ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶನಿ ವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮಹಾದಾಯಿ, ಕಾವೇರಿ, ಕೃಷ್ಣಾ ಮೇಲ್ದಂಡೆ , ಮೇಕೆದಾಟು ಸಹಿತ ವಿವಿಧ ನೀರಾವರಿ ಯೋಜನೆಗಳಿಗೆ ಸಂಬಂಧಿಸಿ ಮಾತನಾಡಲು ಸಮಯಾವಕಾಶ ನೀಡುವಂತೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆಯಲಾಗಿದೆ. ಜತೆಗೆ, ಬರಗಾಲ ಘೋಷಣೆ ವಿಚಾರದಲ್ಲಿ ನಿಯಮಗಳನ್ನು ಬದಲಾವಣೆ ಮಾಡುವಂತೆ ಮನವಿ ಮಾಡಿದರೂ ಸ್ಪಂದನೆ ಸಿಕ್ಕಿಲ್ಲ ಎಂದು ಹೇಳಿದರು.
ಕೃಷಿ ಸಚಿವ ಚಲುವರಾಯಸ್ವಾಮಿ ಮಾತನಾಡಿ, ಮುಂಗಾರು ವಿಫಲವಾಗಿದ್ದು, ಬರಗಾಲ ಘೋಷಣೆಗೆ ಸರಕಾರ ಉಪಸಮಿತಿ ರಚಿಸಿದೆ. ಈಗಾಗಲೇ 196 ತಾಲೂಕುಗಳಲ್ಲಿ ಬರ ಅಧ್ಯಯನ ಕೈಗೊಳ್ಳಲಾಗಿದೆ. ವರದಿ ಪರಿಶೀಲಿಸಿ ಬರ ಪೀಡಿತ ತಾಲೂಕು ಘೋಷಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.