Transport: ಟ್ರಕ್‌ ಚಾಲಕರ ಬೇಡಿಕೆಗೆ ಕೇಂದ್ರ ಸಮ್ಮತಿ: ಜನತೆ ನಿರಾಳ

Team Udayavani, Jan 3, 2024, 12:41 AM IST

trucks

ಇತ್ತೀಚೆಗೆ ಸಂಸತ್‌ನಲ್ಲಿ ಅಂಗೀಕರಿಸಲ್ಪಟ್ಟು ಶೀಘ್ರದಲ್ಲಿಯೇ ದೇಶಾದ್ಯಂತ ಜಾರಿಗೆ ಬರಲಿರುವ ಭಾರತೀಯ ನ್ಯಾಯ ಸಂಹಿತಾ ಕಾಯಿದೆಯಲ್ಲಿ ಹಿಟ್‌ ಆ್ಯಂಡ್‌ ರನ್‌ ಪ್ರಕರಣದಲ್ಲಿ ಚಾಲಕರಿಗೆ 10 ವರ್ಷಗಳ ವರೆಗೆ ಜೈಲು ಮತ್ತು 7 ಲಕ್ಷ ರೂ.ಗಳವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಇದನ್ನು ವಿರೋಧಿಸಿ ಟ್ರಕ್‌, ಕ್ಯಾಬ್‌ ಮತ್ತು ಇತರ ವಾಣಿಜ್ಯ ವಾಹನಗಳ ಚಾಲಕರು ಕಳೆ ದೆರಡು ದಿನಗಳಿಂದ ತೀವ್ರ ತೆರನಾದ ಪ್ರತಿಭಟನೆ ನಡೆಸಿದ್ದರು.

ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಕೇಂದ್ರ ಗೃಹ ಸಚಿವಾಲಯ, ಮಂಗಳವಾರ ಆಲ್‌ ಇಂಡಿಯಾ ಮೋಟಾರ್‌ ಟ್ರಾನ್ಸ್‌ಪೊರ್ಟ್‌ ಕಾಂಗ್ರೆಸ್‌ನ ಪದಾಧಿ ಕಾರಿಗಳೊಂದಿಗೆ ಸಭೆ ನಡೆಸಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದೆ. ಕೇಂದ್ರ ಗೃಹ ಕಾರ್ಯದರ್ಶಿ ಅವರು ಮಾತುಕತೆ ವೇಳೆ ಹೊಸ ಕಾಯಿದೆಯಲ್ಲಿ ಪ್ರಸ್ತಾವಿಸಲಾಗಿರುವ ಈ ಅಂಶಗಳನ್ನು ಮುಂದಿನ ಮಾತುಕತೆವರೆಗೆ ತಡೆ ಹಿಡಿಯಲು ಸಮ್ಮತಿ ಸೂಚಿಸಿರುವ ಹಿನ್ನೆಲೆಯಲ್ಲಿ ಲಾರಿ ಮತ್ತು ಟ್ರಕ್‌ ಚಾಲಕರು ಮುಷ್ಕರವನ್ನು ಹಿಂದೆಗೆದುಕೊಂಡಿದ್ದು ಇದರಿಂದ ಜನಸಾಮಾನ್ಯರು ನಿಟ್ಟುಸಿರು ಬಿಡುವಂತಾಗಿದೆ. ಪ್ರಸ್ತುತ ಜಾರಿಯಲ್ಲಿರುವ ಐಪಿಸಿಯಲ್ಲಿ ಹಿಟ್‌ ಆ್ಯಂಡ್‌ ರನ್‌ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಸೆಕ್ಷನ್‌ 304 ಎ ಅಡಿಯಲ್ಲಿ 2 ವರ್ಷಗಳ ವರೆಗೆ ಜೈಲು ಅಥವಾ ದಂಡ ಅಥವಾ ಎರಡನ್ನೂ ವಿಧಿಸಬಹುದಾಗಿದೆ.

ಆದರೆ ಪರಿಷ್ಕೃತ ಕಾಯಿದೆಯಲ್ಲಿ ಕಾನೂನನ್ನು ಮತ್ತಷ್ಟು ಬಿಗಿಗೊಳಿಸಿ, ಅಪರಾಧಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಶಿಕ್ಷೆ ಮತ್ತು ದಂಡವನ್ನು ವಿಧಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಶಿಕ್ಷೆ ಮತ್ತು ದಂಡದ ಪ್ರಮಾಣ ತೀರಾ ಅತಿಯಾಗಿದೆ ಎಂಬುದು ಟ್ರಕ್‌ ಚಾಲಕರ ಆಕ್ರೋಶ. ಇಷ್ಟೊಂದು ದೊಡ್ಡ ಪ್ರಮಾಣದ ದಂಡವನ್ನು ಬಡ ಚಾಲಕರು ಭರಿಸುವುದಾದರೂ ಎಲ್ಲಿಂದ ಎಂಬುದು ಟ್ರಕ್‌, ಟ್ಯಾಂಕರ್‌ ಸಹಿತ ವಾಣಿಜ್ಯ ವಾಹನಗಳ ಬಡ ಚಾಲಕರ ಪ್ರಶ್ನೆ. ತತ್‌ಕ್ಷಣವೇ ಕಾಯಿದೆಗೆ ತಿದ್ದುಪಡಿ ತಂದು ಶಿಕ್ಷೆ ಮತ್ತು ದಂಡದ ಮೊತ್ತವನ್ನು ಕಡಿಮೆಗೊಳಿಸಬೇಕು ಎಂದು ದೇಶದ ಟ್ರಕ್‌ ಚಾಲಕರ ಸಂಘಟನೆಗಳು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದವು. ಮುಷ್ಕರದ ಎರಡನೇ ದಿನವಾದ ಮಂಗಳವಾರ ದಂದು ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಟ್ರಕ್‌ ಮತ್ತು ಟ್ಯಾಂಕರ್‌ ಚಾಲಕರು ಸಂಚಾರವನ್ನು ಸ್ಥಗಿತಗೊಳಿಸಿ ಭಾರೀ ಪ್ರತಿಭಟನೆ ನಡೆಸಿದ್ದರು.

ಇವೆಲ್ಲದರ ನಡುವೆ ಟ್ರಕ್‌, ಟ್ಯಾಂಕರ್‌ ಚಾಲಕರ ಮುಷ್ಕರದ ಪರಿಣಾಮ ನೇರ ಮಾರುಕಟ್ಟೆಯ ಮೇಲೆ ಬೀಳಲಾರಂಭಿಸಿತ್ತಲ್ಲದೆ ಇದರ ಬಿಸಿ ಗ್ರಾಹಕರಿಗೂ ತಟ್ಟತೊಡಗಿತ್ತು. ಪೆಟ್ರೋಲ್‌ ಪಂಪ್‌ಗ್ಳಲ್ಲಿ ತೈಲ ದಾಸ್ತಾನು ಮುಗಿದು, ಪಂಪ್‌ಗ್ಳು ತೈಲ ದಾಸ್ತಾನಿಲ್ಲದೆ ಬಾಗಿಲು ಮುಚ್ಚುವ ಅನಿವಾರ್ಯಕ್ಕೆ ಸಿಲುಕಿದ್ದವು. ಇನ್ನು ಟ್ರಕ್‌ಗಳ ಮುಷ್ಕರದ ಪರಿಣಾಮ ಆಹಾರ, ತರಕಾರಿ ಸಹಿತ ವಿವಿಧ ಅಗತ್ಯ ವಸ್ತುಗಳ ಸಾಗಣೆಗೂ ಅಡಚಣೆ ಉಂಟಾಗಿತ್ತು. ಇವೆಲ್ಲದರ ಪರಿಣಾಮ ಜನಸಾಮಾನ್ಯರು ಸಂಕಷ್ಟಕ್ಕೀಡಾಗುವಂತಾಗಿತ್ತು.

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಕೇಂದ್ರ ಗೃಹ ಸಚಿವಾಲಯ, ತತಕ್ಷಣ ಮಧ್ಯಪ್ರವೇಶಿಸಿ, ಆಲ್‌ ಇಂಡಿಯಾ ಮೋಟಾರ್‌ ಟ್ರಾನ್ಸ್‌ಪೊರ್ಟ್‌ ಕಾಂಗ್ರೆಸ್‌ನ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವಲ್ಲಿ ಯಶಸ್ವಿಯಾಗಿದೆ. ಚಾಲಕರ ಆಕ್ರೋಶಕ್ಕೆ ತುತ್ತಾಗಿರುವ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿದು ಮುಂದಿನ ದಿನಗಳಲ್ಲಿ ಈ ಸಂಬಂಧ ಟ್ರಾನ್ಸ್‌ಪೊರ್ಟ್‌ ಕಾಂಗ್ರೆಸ್‌ನ ಪದಾಧಿಕಾರಿಗಳೊಂದಿಗೆ ವಿಸ್ತೃತ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲು ಕೇಂದ್ರ ಸರಕಾರ ನಿರ್ಧರಿಸಿದೆ. ಇದಕ್ಕೆ ಟ್ರಾನ್ಸ್‌ ಪೋರ್ಟ್‌ ಸಂಘಟನೆಗಳು ಕೂಡ ಸಮ್ಮತಿ ಸೂಚಿಸುವುದರೊಂದಿಗೆ ವಿವಾದ ಶಾಂತಿಯುತವಾಗಿ ಪರಿಹಾರಗೊಂಡಂತಾಗಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಬೆಲೆ ಏರಿಕೆಯ ಭೀತಿ ಯಲ್ಲಿದ್ದ ಜನಸಾಮಾನ್ಯರು ಈ ಬೆಳವಣಿಗೆಯಿಂದ ನಿಟ್ಟುಸಿರು ಬಿಡುವಂತಾಗಿದೆ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-s-v

ಜನಪ್ರತಿನಿಧಿಗಳು ಆತ್ಮವಿಮರ್ಶೆ ಮಾಡಿಕೊಳ್ಳಲು ಇದು ಸಕಾಲ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.