Central Government: ಉದ್ಯೋಗಸ್ಥ ಮಹಿಳೆಯರಿಗೆ ಸರಕಾರದಿಂದ ಸುರಕ್ಷೆಯ ಅಭಯ


Team Udayavani, Aug 31, 2024, 6:00 AM IST

She-Box

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು ಮತ್ತು ಮೇಲ್ವಿಚಾರಣೆಗಾಗಿ ಕೇಂದ್ರ ಸರಕಾರ ಶಿ- ಬಾಕ್ಸ್‌ ಪೋರ್ಟಲ್‌ ಅನ್ನು ಆರಂಭಿಸಿದೆ. ಕೇಂದ್ರ ಮತ್ತು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಈ ಪೋರ್ಟಲ್‌ ರೂಪಿಸಿದ್ದು, ಇನ್ನು ಮುಂದೆ ಮಹಿಳಾ ಉದ್ಯೋಗಿಗಳು ತಾವು ಕೆಲಸ ನಿರ್ವಹಿಸುತ್ತಿರುವ ಸ್ಥಳದಲ್ಲಿ ಯಾವುದೇ ಲೈಂಗಿಕ ಕಿರುಕುಳ ಅಥವಾ ದೌರ್ಜನ್ಯಕ್ಕೀಡಾದಲ್ಲಿ ಈ ಪೋರ್ಟಲ್‌ನ ಮೂಲಕ ದೂರನ್ನು ದಾಖಲಿಸಬಹುದಾಗಿದೆ.
ಇಂತಹ ದೂರುಗಳ ಬಗೆಗೆ ಸಂಬಂಧಿತ ಅಧಿಕಾರಿಗಳು ತತ್‌ಕ್ಷಣ ಸ್ಪಂದಿಸುವುದರ ಜತೆಯಲ್ಲಿ ದೂರುಗಳ ವಿಲೇವಾರಿಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳ ಮೇಲ್ವಿಚಾರಣೆಗೆ ನೆರವಾಗಲಿದೆ.

ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧೆಡೆ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರದಂತಹ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಈ ಬಗ್ಗೆ ದೇಶಾದ್ಯಂತ ಮಹಿಳಾ ಸಮುದಾಯ ಆತಂಕಕ್ಕೀಡಾಗಿದೆ. ಅದರಲ್ಲೂ ಮುಖ್ಯವಾಗಿ ಉದ್ಯೋಗ ಯಾ ಕೆಲಸದ ಸ್ಥಳಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿರುವ ಸಂಬಂಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರ ಅತ್ಯಂತ ಮಹತ್ವದ ಉಪಕ್ರಮಕ್ಕೆ ಚಾಲನೆ ನೀಡಿದೆ.

ಮಹಿಳಾ ಉದ್ಯೋಗಿಗಳಲ್ಲಿ ಧೈರ್ಯ ತುಂಬಿ, ಸುರಕ್ಷೆಯ ಮನೋಭಾವವನ್ನು ಮೂಡಿಸುವುದರ ಜತೆಯಲ್ಲಿ ಕೆಲಸದ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸಲು ಪೂರಕವಾದ ಉತ್ತಮ ವಾತಾವರಣವನ್ನು ರೂಪಿಸುವ ನಿಟ್ಟಿನಲ್ಲಿ ಈ ಪೋರ್ಟಲ್‌ ಸಹಕಾರಿಯಾಗಲಿದೆ. ಸಂತ್ರಸ್ತರಿಗೆ ಕ್ಷಿಪ್ರವಾಗಿ ದೂರು ದಾಖಲಿಸಲು ಮತ್ತು ಇದರಿಂದ ತಪ್ಪಿತಸ್ಥರನ್ನು ತತ್‌ಕ್ಷಣ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲು ಕಾನೂನು ಜಾರಿ ಸಂಸ್ಥೆಗಳಿಗೆ ಸಹಾಯಕವಾಗಲಿದೆ. ಇಂತಹ ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಈ ಪೋರ್ಟಲ್‌ ಪರಿಣಾಮಕಾರಿಯಾಗಿದೆ. ದೂರುದಾರರು ಮತ್ತು ಅವರ ಬಗೆಗಿನ ಎಲ್ಲ ಮಾಹಿತಿಗಳನ್ನು ಗೌಪ್ಯವಾಗಿರಿಸಲಾಗುವುದು ಎಂದು ಸರಕಾರ ಸ್ಪಷ್ಟಪಡಿಸಿದ್ದು ಈ ಬಗ್ಗೆ ಯಾರಿಗೂ ಯಾವುದೇ ತೆರನಾದ ಸಂದೇಹ ಬೇಡ ಎಂದು ಅಭಯ ನೀಡಿದೆ.

ದೇಶದಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಕೇಂದ್ರ ಸರಕಾರ ಪ್ರಸಕ್ತ ಸಾಲಿನ ಮುಂಗಡಪತ್ರದಲ್ಲಿ ವಿವಿಧ ಕೌಶಲಾಭಿವೃದ್ಧಿ ತರಬೇತಿ ಯೋಜನೆಗಳನ್ನು ಘೋಷಿಸಿದೆ. ಸಾಂಪ್ರದಾಯಿಕ ಮತ್ತು ಸಾಂಪ್ರದಾಯಿಕವಲ್ಲದ ವೃತ್ತಿಗಳಲ್ಲಿ ಹೆಣ್ಣು ಮಕ್ಕಳ ಕೌಶಲವನ್ನು ಹೆಚ್ಚಿಸುವುದರ ಜತೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ರೂಪಿಸಿ, ಅವರನ್ನು ಸ್ವಾವಲಂಬಿಗಳಾಗಿಸಲು ಸರಕಾರ ಮುಂದಡಿ ಇರಿಸಿದೆ.

ದೇಶದ ಸ್ವಾತಂತ್ರ್ಯದ ಶತಮಾನೋತ್ಸವದ ವೇಳೆಗೆ “ವಿಕಸಿತ ಭಾರತ’ ನಿರ್ಮಾಣದ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಜತೆಯಲ್ಲಿ ಪುರುಷರಿಗೆ ಸರಿಸಮಾನರಾಗಿಸಲು ಸರಕಾರ ಸಂಕಲ್ಪ ತೊಟ್ಟಿದೆ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಅಭದ್ರತೆಯ ಭೀತಿ ಕಾಡಿದಲ್ಲಿ ಸರಕಾರದ ಈ ಮಹದಾಸೆ ಈಡೇರುವುದು ಕಷ್ಟಸಾಧ್ಯ. ಇದರ ನಡುವೆ ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಹೆಚ್ಚುತ್ತಿರುವ ಮಹಿಳೆಯರ ಮೇಲಣ ಕಿರುಕುಳದ ಪ್ರಕರಣಗಳು ಕೇವಲ ಮಹಿಳೆ­ಯರನ್ನು ಮಾತ್ರವಲ್ಲದೆ ಇಡೀ ಸಮಾಜವನ್ನು ಒಂದಿಷ್ಟು ಚಿಂತೆಗೀಡು ಮಾಡಿದೆ.

ಈ ಎಲ್ಲ ನಕಾರಾತ್ಮಕ ಬೆಳವಣಿಗೆಗಳ ನಡುವೆ ಕೇಂದ್ರ ಸರಕಾರ ಶಿ-ಬಾಕ್ಸ್‌ ಪೋರ್ಟಲ್‌ಗೆ ಚಾಲನೆ ನೀಡುವ ಮೂಲಕ ಹೆಣ್ಣು ಮಕ್ಕಳಲ್ಲಿ ಧೈರ್ಯ ತುಂಬುವ ಕಾರ್ಯ ಮಾಡಿದೆ. ಉದ್ಯೋಗ ಸ್ಥಳ ಮಾತ್ರವಲ್ಲದೆ ಒಟ್ಟಾರೆ ಸಮಾಜದಲ್ಲಿ ಹೆಣ್ಣು ಮಕ್ಕಳ ಸುರಕ್ಷೆಯ ಬಗೆಗೆ ಯಾವುದೇ ಅನುಮಾನ ಕಾಡದಿರುವಂತಹ ವಾತಾವರಣ ರೂಪಿಸುವ ಕೆಲಸವಾಗಬೇಕು. ಕೇವಲ ಸರಕಾರದ ಉಪಕ್ರಮ, ಕಾನೂನುಗಳ ಜಾರಿ ಮತ್ತಿತರ ಕ್ರಮಗಳಿಂದ ಇಂತಹ ವಾತಾವರಣ ರೂಪಿಸುವುದು ಕಷ್ಟಸಾಧ್ಯವಾಗಿದ್ದು, ಇಡೀ ಸಮಾಜ ಒಗ್ಗೂಡಿ ಈ ಕಾರ್ಯದಲ್ಲಿ ಕೈಜೋಡಿಸಬೇಕು.

ಟಾಪ್ ನ್ಯೂಸ್

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Vijay Raghavendra, Rudrabhishekam Movie, Sandalwood, Vasanth Kumar, Veeragase

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ಪಡಿತರ ಚೀಟಿ ಮಾನದಂಡ ಆಮೂಲಾಗ್ರ ಪರಿಷ್ಕರಣೆ ಅಗತ್ಯ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

16-pongal

Pongal: ಹೀಗೊಂದು ಪೊಂಗಲ್‌ ಪ್ರಯೋಗ

15-uv-fusion

Pendulum Wall Clock: ನಮ್ಮ ಮನೆಯಲ್ಲಿ ಒಂದು ಅದ್ಭುತ ಇದೆ ಗೊತ್ತಾ?

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

14-uv-fusion

UV Fusion: ಕೈ ಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.