ಸಿಇಟಿ 2ನೇ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿ ಪ್ರಕಟ
ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ; ಕಾಲೇಜು ಪ್ರವೇಶಕ್ಕೆ ಡಿ. 30 ಕೊನೆಯ ದಿನ
Team Udayavani, Dec 25, 2021, 6:15 AM IST
ಬೆಂಗಳೂರು: ಯುಜಿ ಸಿಇಟಿ- 2021 ವೃತ್ತಿಪರ ಕೋರ್ಸ್‌ಗಳ ಎರಡನೇ ಮುಂದುವರಿದ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ.
ಶುಕ್ರವಾರ ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ ಮಾಡಿದ್ದು, ಕಾಲೇಜು ಪ್ರವೇಶ ಪಡೆದು ಕೊಳ್ಳಲು ಡಿ. 30 ಕೊನೆಯ ದಿನವಾಗಿದೆ.
ಎಂಜಿನಿಯರಿಂಗ್, ಟೆಕ್ನಾಲಜಿ ವಾಸ್ತುಶಿಲ್ಪ, ಕೃಷಿ ವಿಜ್ಞಾನ, ಪಶುಸಂಗೋಪನೆ, ನ್ಯಾಚುರೋಪತಿ ಮತ್ತು ಯೋಗ ಮುಂತಾದ ವಿವಿಧ ಕೋರ್ಸ್‌ಗಳಿಗೆ ಸೀಟು ಹಂಚಿಕೆ ಮಾಡಲಾಗುತ್ತದೆ. ಈ ಸುತ್ತಿನಲ್ಲಿ ಅಭ್ಯರ್ಥಿಗಳು ಎಲ್ಲ ಕೋರ್ಸ್‌ಗಳಿಗೆ ಹೊಸದಾಗಿ ತಮ್ಮ ಆಯ್ಕೆಯನ್ನು ದಾಖಲಿಸಬಹುದು.
ವೇಳಾಪಟ್ಟಿ
ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕ ವಿವರವನ್ನು ಡಿ. 24ರ ಬೆಳಗ್ಗೆ 11ಕ್ಕೆ ಪ್ರಕಟಿಸಲಾಗಿದೆ. ತಮಗೆ ದೊರೆತಿರುವ ಸೀಟು ಬೇಡವಾದರೆ, ಡಿ. 25ರ ಸಂಜೆ 5 ಗಂಟೆಯೊಳಗೆ ರದ್ದುಪಡಿಸಬಹುದು. ಅಭ್ಯರ್ಥಿಗಳು ಆಯ್ಕೆಗಳನ್ನು ಅವಶ್ಯವಿದ್ದಲ್ಲಿ ಬದಲಾಯಿಸಲು, ಸೇರಿಸಲು ಮತ್ತು ತೆಗೆದು ಹಾಕಲು ಡಿ. 26ರ ವರೆಗೆ ಸಮಯ ನೀಡಲಾಗಿದೆ. ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಡಿ. 27ರ ಸಂಜೆ 6ಕ್ಕೆ ಪ್ರಕಟಿಸಲಾಗುತ್ತದೆ. ಅಭ್ಯರ್ಥಿಗಳು ಶುಲ್ಕ ಪಾವತಿಸುವುದು ಮತ್ತು ಪ್ರವೇಶ ಪತ್ರವನ್ನು ಡಿ. 28 ಮತ್ತು 29ರಂದು ಡೌನ್‌ಲೋಡ್ ಮಾಡಿಕೊಳ್ಳಬಹುದು. ಕಾಲೇಜುಗಳಲ್ಲಿ ಪ್ರವೇಶ ಪಡೆದುಕೊಳ್ಳಲು ಡಿ. 30ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ ಎಂದು ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.
ಇದನ್ನೂ ಓದಿ:ರಾಜಸ್ಥಾನ: ಭಾರತೀಯ ವಾಯುಸೇನೆಯ ಮಿಗ್- 21 ವಿಮಾನ ಪತನ, ಪೈಲಟ್ ಸಾವು
ರದ್ದುಪಡಿಸಲೂ ಅವಕಾಶವಿದೆ
ಎರಡನೇ ಮುಂದುವರಿದ ಸುತ್ತಿನಲ್ಲಿ ಸೀಟು ಹಂಚಿಕೆ ಬಳಿಕ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಯಾವುದೇ ಆಯ್ಕೆಯನ್ನು ಪರಿಗಣಿಸಲು ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳ ಆಯ್ಕೆಗಳನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಸೀಟು ಹಂಚಿಕೆ ಮಾಡಲಾಗುತ್ತದೆ. ಅಭ್ಯರ್ಥಿಯ ಎರಡನೇ ಮುಂದುವರಿದ ಸುತ್ತಿನಲ್ಲಿ ಹಂಚಿಕೆ ಯಾಗುವ ಸೀಟಿಗೆ ಶುಲ್ಕವನ್ನು ಪಾವತಿಸಿ ನಿಗದಿತ ಅವಧಿಯಲ್ಲಿ ಕಾಲೇಜಿನಲ್ಲಿ ಕಡ್ಡಾಯವಾಗಿ ಪ್ರವೇಶ ಪಡೆದುಕೊಳ್ಳಬೇಕು. ಒಂದು ವೇಳೆ ಅಭ್ಯರ್ಥಿಗಳು ಮೊದಲನೇ ಸುತ್ತಿನಲ್ಲಿ ಅಥವಾ ಎರಡನೇ ಸುತ್ತಿನಲ್ಲಿ ತಮಗೆ ದೊರೆತಿರುವ ಸೀಟು ಇಷ್ಟವಾಗದಿದ್ದಲ್ಲಿ ಡಿ. 25ರ ಸಂಜೆ 5ರೊಳಗೆ ರದ್ದುಪಡಿಸಬಹುದು. ಅಂತಹ ಅಭ್ಯರ್ಥಿಗಳಿಗೆ ಈಗಾಗಲೇ ಪಾವತಿಸಿರುವ ಶುಲ್ಕದಲ್ಲಿ 5 ಸಾವಿರ ರೂ.ಗಳನ್ನು ಕಡಿದುಕೊಂಡು ಉಳಿದ ಮೊತ್ತವನ್ನು ಹಿಂದಿರುಗಿಸಲಾಗುತ್ತದೆ.
ಸೀಟು ಪಡೆಯದಿದ್ದರೆ ಕಾನೂನು ಕ್ರಮ
ಒಂದು ವೇಳೆ ಎರಡನೇ ಮುಂದುವರಿದ ಸುತ್ತಿನಲ್ಲಿ ಸೀಟು ಹಂಚಿಕೆಯ ಬಳಿಕ ಹಂಚಿಕೆಯಾದ ಸೀಟಿಗೆ ಪ್ರವೇಶಾತಿ ಪಡೆಯದಿದ್ದಲ್ಲಿ, ಅಂತಹ ಅಭ್ಯರ್ಥಿ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರಗಿಸಲಾಗುತ್ತದೆ ಎಂದು ಕೆಇಎ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.