CET ಕ್ರೀಡಾ ಕೋಟಾ ಬದಲಾವಣೆ
Team Udayavani, Aug 31, 2023, 10:41 PM IST
ಬೆಂಗಳೂರು: ವೃತ್ತಿ ಶಿಕ್ಷಣ ಕೋರ್ಸ್‌ಗಳಿಗೆ ನಡೆಸಲಾಗುವ ಸಿಇಟಿ ಪರೀಕ್ಷೆ ವೇಳೆ ಉಂಟಾಗುತ್ತಿರುವ ಕ್ರೀಡಾ ಕೋಟಾದ ನಿಯಮಗಳಲ್ಲಿ ಮುಂದಿನ ಶೈಕ್ಷಣಿಕ ಸಾಲಿನಿಂದ ಬದಲಾವಣೆ ತರಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ.ಸುಧಾಕರ್ ಅಧ್ಯಕ್ಷತೆಯಲ್ಲಿ ಗುರುವಾರ ಜರಗಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ 2006ರ ನಿಯಮಗಳನ್ವಯ ಪ್ರಸ್ತುತ ಇರುವ ಕ್ರೀಡಾ ಕೋಟಾದ ನಿಯಮಗಳಲ್ಲಿ ಕೆಲವು ಅಸ್ಪಷ್ಟತೆಯಿದ್ದು, ಅದನ್ನು ಪರಿಷ್ಕರಿಸಲು ನಿರ್ಧರಿಸಲಾಗಿದೆ.
ರಾಜ್ಯ ಕ್ರೀಡಾ ಇಲಾಖೆ ಈಗಾಗಲೇ ಪರಿಷ್ಕೃತ ಕ್ರೀಡಾ ಕೋಟಾದ ವರದಿಯನ್ನು ನೀಡಿದ್ದು, ಈ ಪ್ರಕಾರ ಅಧಿಕೃತವಾಗಿ ರಾಜ್ಯ ಅಥವಾ ರಾಷ್ಟ್ರವನ್ನು ಪ್ರತಿನಿಧಿಸಿರುವ ವಿದ್ಯಾರ್ಥಿಗಳಿಗೆ ಮಾತ್ರ ಕ್ರೀಡಾ ಕೋಟಾದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪರಿಗಣಿಸಲಾಗುತ್ತದೆ. ಕೆ.ಇ.ಎ ಪ್ರಾಧಿಕಾರದ ಕಟ್ಟಡದ ಮರು ವಿನ್ಯಾಸ ಹಾಗೂ ಹೆಚ್ಚುವರಿ ಕಟ್ಟಡ ನಿರ್ಮಾಣ ಕುರಿತು ಚರ್ಚಿಸಲಾಯಿತು. ಅತ್ಯಂತ ಅಗತ್ಯವಾಗಿ ಸುಸಜ್ಜಿತ ನೂತನ ಕಟ್ಟಡ ಅಗತ್ಯ ಇರುವುದರಿಂದ ಈ ಬಗ್ಗೆ ಕರ್ನಾಟಕ ಹೌಸಿಂಗ್ ಬೋರ್ಡ್ ಎಂಜಿನಿಯರ್‌ಗಳು ನೀಡಿದ ಪಿಪಿಟಿ ವೀಕ್ಷಿಸಲಾಯಿತು. ಸುಮಾರು 33 ಕೋ. ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣದ ಕಾರ್ಯವನ್ನು ಕೈಗೊಳ್ಳುವ ಬಗ್ಗೆ ಒಪ್ಪಿಗೆ ನೀಡಲಾಯಿತು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವನ್ನು ಹೆಚ್ಚು ಉತ್ತರದಾಯಿತ್ವ ಸಂಸ್ಥೆಯಾಗಿ ರೂಪಿಸಲು ಮತ್ತಷ್ಟು ಉತ್ತಮ ಕಾರ್ಯನಿರ್ವಹಣೆಗೆ ಮುಂದಾಗಲು ಸೂಚಿಸಲಾಯಿತು. ಸಭೆಯ ಮುನ್ನ ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ.ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣ ಪ್ರಕಾಶ್ ಪಾಟೀಲ್ ಸಿಇಟಿ ಕೇಂದ್ರದಲ್ಲಿ ಕೌನ್ಸೆಲಿಂಗ್‌ಗೆ ಆಗಮಿಸಿದ್ದ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಕಾಲೇಜುಗಳ ಆಯ್ಕೆ ಸಂಬಂಧ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ತರಬೇತಿ ನೀಡುವ ಕಾರ್ಯವನ್ನು ಮುಂದಿನ ವರ್ಷದಿಂದ ಕೈಗೊಳ್ಳಲು ಸೂಚಿಸಲಾಯಿತು. ಕರ್ನಾಟಕ ಪರೀûಾ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಡಾ| ಶರಣಪ್ರಕಾಶ್ ಪಾಟೀಲ, ಪ್ರಭಾರ ಕಾರ್ಯದರ್ಶಿ ಉಮಾಶಂಕರ್, ಆಯುಕ್ತ ಜಗದೀಶ್, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯ ಹಾಗೂ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.