ಚಾಮರಾಜನಗರ ಜಿಲ್ಲಾ ಕಸಾಪ ಚುನಾವಣೆ : ಎಂ. ಶೈಲಕುಮಾರ್ ಗೆಲುವು

Team Udayavani, Nov 21, 2021, 8:08 PM IST

ಚಾಮರಾಜನಗರ ಜಿಲ್ಲಾ ಕಸಾಪ ಚುನಾವಣೆ : ಎಂ. ಶೈಲಕುಮಾರ್ ಗೆಲುವು

ಚಾಮರಾಜನಗರ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ ಎಂ. ಶೈಲಕುಮಾರ್ 643 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಚಿತ್ರಕಲಾವಿದ ಎಂ. ಶೈಲಕುಮಾರ್ ಅವರು ಒಟ್ಟು 1316 ಮತಗಳನ್ನೂ, ಅವರ ಸಮೀಪದ ಪ್ರತಿಸ್ಪರ್ಧಿ ಗಾಯಕ ಸಿ.ಎಂ. ನರಸಿಂಹಮೂರ್ತಿ 673 ಮತಗಳನ್ನೂ ಪಡೆದರು. ಇನ್ನೋರ್ವ ಸ್ಪರ್ಧಿ ನಾಗೇಶ್ ಸೋಸ್ಲೆ 150 ಮತಗಳನ್ನು ಪಡೆದರೆ, ಸ್ನೇಹಾ 22 ಮತ ಗಳಿಸಿದ್ದಾರೆ.

ಎಂ. ಶೈಲಕುಮಾರ್ ಅವರು, ಚಾಮರಾಜನಗರದ ತಾಲೂಕು ಕಚೇರಿ ಸಭಾಂಗಣದ ಮತಗಟ್ಟೆಯಲ್ಲಿ 266, ಆಡಳಿತ ಶಾಖೆ ಮತಗಟ್ಟೆಯಲ್ಲಿ 223 ಹಾಗೂ ಚುನಾವಣಾ ಶಾಖೆ ಮತಗಟ್ಟೆಯಲ್ಲಿ 112 ಮತಗಳನ್ನೂ, ಯಳಂದೂರು ತಾಲೂಕಿನಲ್ಲಿ 143, ಕೊಳ್ಳೇಗಾಲ ತಾಲೂಕಿನಲ್ಲಿ 177, ಗುಂಡ್ಲುಪೇಟೆ ತಾಲೂಕಿನಲ್ಲಿ 328 ಮತಗಳನ್ನೂ, ಹನೂರು ತಾಲೂಕಿನಲ್ಲಿ 67 ಮತಗಳನ್ನು ಪಡೆದರು.

ಅವರ ಸಮೀಪದ ಪ್ರತಿಸ್ಪರ್ಧಿ ಸಿ.ಎಂ. ನರಸಿಂಹಮೂರ್ತಿ ಅವರು, ತಾಲೂಕು ಕಚೇರಿ ಸಭಾಂಗಣದ ಮತಗಟ್ಟೆಯಲ್ಲಿ 166, ಆಡಳಿತಶಾಖೆ ಮತಗಟ್ಟೆಯಲ್ಲಿ 162, ಚುನಾವಣಾ ಶಾಖೆ ಮತಗಟ್ಟೆಯಲ್ಲಿ 95 ಮತಗಳನ್ನು ಪಡೆದರು. ಯಳಂದೂರು ತಾಲೂಕಿನಲ್ಲಿ 99, ಕೊಳ್ಳೇಗಾಲ ತಾಲೂಕಿನಲ್ಲಿ 90, ಗುಂಡ್ಲುಪೇಟೆ ತಾಲೂಕಿನಲ್ಲಿ 38 ಹಾಗೂ ಹನೂರು ತಾಲೂಕಿನಲ್ಲಿ 23 ಮತಗಳನ್ನು ಪಡೆದರು.

ಜಿಲ್ಲೆಯಲ್ಲಿ ಒಟ್ಟು 4830 ಮತಗಳಿದ್ದು, 2183 ಮತಗಳು ಚಲಾವಣೆಯಾದವು. ಇದರಲ್ಲಿ 2161 ಮತಗಳು ಕ್ರಮಬದ್ಧವಾಗಿದ್ದು, 22 ಮತಗಳು ತಿರಸ್ಕೃತವಾದವು.

ರಾಜ್ಯಾಧ್ಯಕ್ಷ ಸ್ಥಾನದ ಚುನಾವಣೆಗೆ ಜಿಲ್ಲೆಯಲ್ಲಿ ಶೇಖರಗೌಡ ಮಾಲಿ ಪಾಟೀಲ ಅವರಿಗೆ 836 ಮತಗಳೂ, ಮಹೇಶ್ ಜೋಶಿ ಅವರಿಗೆ 757 ಮತಗಳೂ ದೊರೆತಿವೆ.

ಇದನ್ನೂ ಓದಿ : ಕಡಬ: ಕಡ್ಯ ಕೊಣಾಜೆ ಪ್ರದೇಶದಲ್ಲಿ ಹಾಡಹಗಲೇ ಮನೆ ಅಂಗಳಕ್ಕೆ ನುಗ್ಗಿದ ಕಾಡಾನೆ

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಸುವೆ: ಆಯ್ಕೆ ಬಳಿಕ ಮಾತನಾಡಿದ ಶೈಲಕುಮಾರ್, ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಹೋಬಳಿ ಮಟ್ಟದಲ್ಲಿ ಸಾಹಿತ್ಯ ಸಮ್ಮೇಳನವನ್ನು ಮಾಡುವ ಉದ್ದೇಶವನ್ನು ಹೊಂದಿ ಮತಯಾಚನೆ ಮಾಡಿದ್ದೆ. ಜಿಲ್ಲೆಯ ಮತದಾರರು ಇದಕ್ಕೆ ಪೂರಕವಾಗಿ ಸ್ಪಂದಿಸಿ, ಹೆಚ್ಚಿನ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿದ್ದಾರೆ. ಅವರಿಗೆ ಅಭಾರಿಯಾಗಿದ್ದೇನೆ.

ನನ್ನ ಗೆಲುವಿಗೆ ಕಾರಣಕರ್ತರಾದ ಪರಿಷತ್‌ನ ಹಿಂದಿನ ಅಧ್ಯಕ್ಷರಾದ ಮಲೆಯೂರು ಗುರುಸ್ವಾಮಿ, ಎ.ಎಂ. ನಾಗಮಲ್ಲಪ್ಪ, ಸೋಮಶೇಖರ್ ಬಿಸಲ್ವಾಡಿ ಹಾಗೂ ಬಿ.ಎಸ್. ವಿನಯ್ ಅವರು ಹಾಗೂ ಜಿಲ್ಲೆಯ ಎಲ್ಲಾ ಸಾಹಿತ್ಯಸಕ್ತರು, ಹಾಗೂ ಮತದಾರರಿಗೆ ತುಂಬು ಹೃದಯದ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಎಲ್ಲಾ ಸಾಹಿತ್ಯಕ್ತರು, ಚುನಾಯಿತ ಪ್ರತಿನಿಧಿಗಳ ಸಹಕಾರದೊಂದಿಗೆ ಗಡಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅನ್ನು ಹೆಚ್ಚಿನ ಪ್ರಗತಿ ಮಾಡುವುದಾಗಿ ಶೈಲಕುಮಾರ್ ತಿಳಿಸಿದರು.

ವಿಜಯೋತ್ಸವ : ಶೈಲಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಅವರ ಅಭಿಮಾನಿಗಳು ಹೂವಿನ ಹಾರ ಹಾಕಿ, ಸಿಹಿ ತಿನ್ನಿಸುವ ಮೂಲಕ ವಿಜಯೋತ್ಸವ ಆಚರಣೆ ಮಾಡಿದರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.