ಪತ್ರಿಕೆಯ ಗೌರವ ಸಂಪಾದಕ, ಸಮಾಜ ಸೇವಕ ಚಂದ್ರಕಾಂತ ಅಂಗಡಿ ನಿಧನ
Team Udayavani, Dec 24, 2021, 6:38 PM IST
ಹಳಿಯಾಳ: ಸರಳ ವ್ಯಕ್ತಿತ್ವ ಹಾಗೂ ಸರ್ವ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ ತಾಲೂಕಾ ಬಸವ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ, ಅಂಗಡಿ ಸರ್ವಿಸ್ ಮಾಲೀಕ ಹಾಗೂ ವಿಜಯ ಸಂದೇಶ ವಾರ ಪತ್ರಿಕೆಯ ಗೌರವ ಸಂಪಾದಕ ಸಮಾಜಸೇವಕ ಚಂದ್ರಕಾಂತ ಅಂಗಡಿ (62) ಶುಕ್ರವಾರ ನಸುಕಿನ ವೇಳೆ ಪಟ್ಟಣದ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ಚಂದ್ರಕಾಂತ ಅವರು ಕಳೆದ ಹಲವು ತಿಂಗಳುಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೂ ನಿರಂತರ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದರು. ಸಮಾಜ ಸೇವಕರಾಗಿ ಬಸವ ತತ್ವದ ಪ್ರಬಲ ಪ್ರತಿಪಾದಕರಾಗಿದ್ದು ಶಾಂತಿ ಸಹಬಾಳ್ವೆಗೆ ಹಾಗೂ ಸಾಮರಸ್ಯ ಜೀವನಕ್ಕೆ ಒತ್ತು ನೀಡುತ್ತಿದ್ದರು. ಅವರ ಸೇವೆಗಾಗಿ ಹಲವು ರಾಜ್ಯ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿಗಳು ಇವರನ್ನು ಅರಸಿಕೊಂಡು ಬಂದಿವೆ ಪ್ರಮುಖವಾಗಿ ಇಂದಿರಾ ಗಾಂಧಿ ಪ್ರಿಯದರ್ಶನಿ ಪ್ರಶಸ್ತಿ,ಯುವ ಪ್ರಶಸ್ತಿ,ವನಮಿತ್ರ ಪಶಸ್ತಿ,ಬಸವಗುರು ಕಾರುಣ್ಯ ಪ್ರಶಸ್ತಿ, ಅಂಬಿಗ ಕುಮಾರ ಚೌಡಯ್ಯ ಸೇರಿದಂತೆ ಅನೇಕ ಸೇವಾ ಪ್ರಶಸ್ತಿಗಳು ಲಭಿಸಿವೆ.
ಚಿತ್ರದುರ್ಗದ ಬೃಹಣ್ಮಠ ಸ್ವಾಮೀಜಿಗಳು, ಹಳಿಯಾಳ ಉಪ್ಪಿನಬೆಟಗೇರಿ ವಿರಕ್ತಮಠ ಸ್ವಾಮೀಜಿಗಳು, ಇಲಕಲ್ಲ ಮಹಾಂತ ಸ್ವಾಮಿಗಳು, ಚಿತ್ತರಗಿ ಮಹಾಸಂಸ್ಥಾನ ಮಠಾಧೀಶರು, ಮುಂಡಗೋಡ ಅತ್ತಿವೇರಿ ಧಾಮದ ಶರಣೆ ಬಸವೇಶ್ವರಿ,ಶಾಸಕ ಆರ್ ವಿ ದೇಶಪಾಂಡೆ,ಧಾರವಾಡ ಕ್ಷೇತ್ರದ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ್,ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಘೋಟ್ನೆಕರ , ಮಾಜಿ ಶಾಸಕ ಸುನಿಲ ಹೆಗಡೆ,ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್ ವಾಸರೆ ,ಪುರಸಭೆ ಅಧ್ಯಕ್ಷ ಅಜರುದ್ದೀನ್ ಬಸರೀಕಟ್ಟಿ ,ಹಾಗೂ ವಿವಿಧ ಸಮಾಜದ ಗಣ್ಯರು ರಾಜಕೀಯ ಮುಖಂಡರು ಅಂಗಡಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.
ಮೃತರು ಪತ್ನಿ ,ಓರ್ವ ಪುತ್ರ,ಮೂರು ಜನ ಸಹೋದರರು ಹಾಗೂ ಓರ್ವ ಸಹೋದರಿ ಹಾಗೂ ಅಪಾರ ಬಂಧು ಬಳಗ ಮತ್ತು ಅನುಯಾಯಿಗಳನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಬಸವ ತತ್ವದ ಪ್ರಕಾರ ಅಂಗಡಿ ಗ್ಯಾಸ್ ಸರ್ವಿಸಸ್ ಪಕ್ಕದ ಅವರ ಜಮೀನಿನಲ್ಲಿ ಸಂಜೆ 6 ಗಂಟೆಗೆ ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapura: ಬಸ್- ಬೈಕ್ ಡಿಕ್ಕಿ; ಟಯರ್ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು
ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು
Karkala: ಲೈಸೆನ್ಸ್ ಇಲ್ಲದ ವ್ಯಾಪಾರಕ್ಕೆ ಕಡಿವಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.