ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹನುಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದಪ್ಪ ತಳವಾರ
Team Udayavani, Dec 7, 2021, 8:18 PM IST
ಕುಷ್ಟಗಿ : ಹನುಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದಪ್ಪ ತಳವಾರ ಬಿಜೆಪಿ ಸೇರಿದ್ದು, ವಿಧಾನ ಪರಿಷತ್ ಚುನಾವಣಾ ಪ್ರಚಾರಸಭೆಯಲ್ಲಿ ಸಕ್ರೀಯರಾಗಿದ್ದಾರೆ.
ಕಳೆದ ನ.25ರಂದು ಹನುಮಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಪ್ರಾಥಮಿಕ ಸ್ಥಾನಕ್ಕೆ ಚಂದಪ್ಪ ತಳವಾರ ರಾಜಿನಾಮೆ ನೀಡಿದ್ದರು. ಈ ರಾಜಿನಾಮೆ ಕಾಂಗ್ರೆಸ್ ಪಕ್ಷದಲ್ಲಿ ಕಡೆಗಣನೆ ಹಿನ್ನೆಲೆಯ ಕಾರಣ ನೀಡಿದ್ದರು.
ಕೆಲವೇ ದಿನಗಳಲ್ಲಿ ಮುಂದಿನ ನಿರ್ಧಾರದ ಬಗ್ಗೆ ತಿಳಿಸುವುದಾಗಿ ತಿಳಿಸಿದ್ದರು. ಮಂಗಳವಾರ ಸದ್ದಿಲ್ಲದೇ ಬಿಜೆಪಿ ಪಕ್ಷ ಸೇರಿದ್ದು, ಹನುಮನಾಳ ಹೋಬಳಿ ವಲಯದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವನಾಥ ಬನಹಟ್ಟಿ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಬಿಜೆಪಿ ಅಭ್ಯಥರ್ಿ ಪರವಾಗಿ ಮತಯಾಚನೆಯಲ್ಲಿ ಸಕ್ರೀಯರಾಗಿದ್ದಾರೆ. ಈ ಪ್ರಚಾರ ಸಭೆಯಲ್ಲಿ ಮಾಜಿ ಶಾಸಕ ಜಿಲ್ಲಾ ಬಿಜೆಪಿ ಅಧ್ಯಕ್ಷ ದೊಡ್ಡನಗೌಡ ಪಾಟೀಲ, ಕುರಿ ಮತ್ತು ಉಣ್ಣೆ ನಿಗಮ ಅಭಿವೃಧ್ಧಿ ಮಂಡಳಿ ಅಧ್ಯಕ್ಷ ಶರಣು ತಳ್ಳೀಕೇರಿ, ಬಿಜೆಪಿ ಮಂಡಲ ಅಧ್ಯಕ್ಷ ಬಸವರಾಜ್ ಹಳ್ಳೂರು, ಮಾಜಿ ಜಿ.ಪಂ. ಸದಸ್ಯ ಕೆ.ಮಹೇಶ, ನೇಮಣ್ಣ ಮೇಲಸಕ್ರಿ, ವೀರಣ್ಣ ಗಜೇಂದ್ರಗಡ, ನಾಗರಾಜ ಮೇಲಿನಮನಿ ಇದ್ದರು.
ಇದನ್ನೂ ಓದಿ : ಮನೆಯಲ್ಲಿದ್ದ ಹಾವುಗಳನ್ನು ಓಡಿಸಲು ಹೋಗಿ 13 ಕೋಟಿ ಮೌಲ್ಯದ ಬಂಗಲೆಯನ್ನೇ ಸುಟ್ಟ ಆಸಾಮಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.