ಸುಳ್ಳು ಆಶ್ವಾಸನೆಗಳಿಂದ ಪ್ರಗತಿ ಅಸಾಧ್ಯ: ತುನ್ನೂರ
Team Udayavani, Jan 10, 2021, 6:57 PM IST
ಯಾದಗಿರಿ: ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಬರೀ ಸುಳ್ಳು ಆಶ್ವಾಸನೆಗಳನ್ನು ನೀಡಿ ಜನರನ್ನು ಮರಳು ಮಾಡುತ್ತಿದ್ದು, ಜನರು ಎಚ್ಚೆತ್ತುಕೊಳ್ಳಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಚನ್ನಾರೆಡ್ಡಿ ತುನ್ನೂರ ಹೇಳಿದರು.
ನಗರದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ ನೂತನ ಗ್ರಾಪಂ ಸದಸ್ಯರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್ ನವರು ಏನು ಮಾಡಿದ್ದಾರೆ ಎಂದು ಪ್ರಶ್ನಿಸುವ ಬಿಜೆಪಿಗರು, 6 ವರ್ಷದಲ್ಲಿ ಕೇಂದ್ರ ಸರ್ಕಾರ ಏನು ಮಾಡಿದೆ ಎನ್ನುವುದನ್ನು ಹೇಳಲಿ. ಇತ್ತೀಚೆಗೆ ಯಾದಗಿರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಗಮಿಸಿ ಕೇವಲ 3 ನಿಮಿಷದ ಭಾಷಣ ಮಾಡಿದ್ದಾರೆ. ಬರೀ ಸುಳ್ಳು ಮಾತಿನಲ್ಲಿ ಮೋಡಿ ಮಾಡುತ್ತಿದ್ದು, 2 ಕೋಟಿ ಯುವಕರಿಗೆ ನೌಕರಿ ನೀಡುವುದಾಗಿ ಹೇಳಿ ಈವರೆಗೆ ಎಷ್ಟು ಜನರಿಗೆ ಉದ್ಯೋಗ ನೀಡಿದ್ದಾರೆ
ಎನ್ನುವುದನ್ನು ಬಹಿರಂಗಪಡಿಸಲಿ ಎಂದು ಸವಾಲ್ ಎಸೆದರು.
ಶಹಾಪುರ ಶಾಸಕ ಶರಣಬಸಪ್ಪ ದರ್ಶನಾಪುರ ಕಾರ್ಯಕ್ರಮ ಉದ್ಘಾಟಿಸಿ, ಪರಿಶಿಷ್ಟರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ
ವರ್ಗಗಳ ಜನರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಹಲವು ಯೋಜನೆಗಳನ್ನು ರೂಪಿಸಿ ಏಳ್ಗೆಗೆ ಶ್ರಮಿಸಿದೆ. ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 31 ಗ್ರಾಪಂಗಳಲ್ಲಿ ಶೇ.70ರಷ್ಟು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿ ಪಕ್ಷಕ್ಕೆ ಶಕ್ತಿ ತುಂಬಿದ್ದಾರೆ ಎಂದರು.
ಅಲ್ಪಸಂಖ್ಯಾತರ ಮುಖಂಡ ಲಾಯಕ್ ಹುಸೇನ್ ಬಾದಲ್, ಕಾಡಾ ಮಾಜಿ ಅಧ್ಯಕ್ಷ ಶ್ರೀನಿವಾಸರೆಡ್ಡಿ ಕಂದಕೂರ, ಮಂಜುಳಾ ಗೂಳಿ, ಮಲ್ಲಣ್ಣ ದಾಸನಕೇರಿ ಮಾತನಾಡಿದರು. ಪ್ರಮುಖರಾದ ಚಿದಾನಂದಪ್ಪ ಕಾಳಬೆಳಗುಂದಿ, ಮಾಣಿಕರಡ್ಡಿ ಕುರಕುಂದಿ, ಸುದರ್ಶನ ನಾಯಕ್, ಮರೆಪ್ಪ ಬಿಳಾರ, ಬಸ್ಸುಗೌಡ ಬಿಳಾರ, ರಾಘವೇಂದ್ರ ಮಾನಸಗಲ್, ಸುರೇಶ ಜೈನ್ ಇದ್ದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.