ಲಂಡನ್: ಹೆಚ್ಚಾಯಿತು ಕೌಟುಂಬಿಕ ದೌರ್ಜನ್ಯ ಪ್ರಕರಣಗಳು
Team Udayavani, Apr 27, 2020, 2:31 PM IST
ಲಂಡನ್: ಲಂಡನ್‌ನಲ್ಲಿ ಲಾಕ್‌ಡೌನ್ ಜಾರಿಯಾದಾಗಿನಿಂದ ಕೌಟುಂಬಿಕ ದೌರ್ಜನ್ಯ, ಕಿರುಕುಳದಂತಹ ಅಪರಾಧಗಳ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೆಟ್ರೋಪಾಲಿಟನ್ ಪೊಲೀಸ್ ಸೇವೆ ಸಂಸ್ಥೆ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಆರು ವಾರಗಳ ಕಾಲ ಅವಧಿಯಲ್ಲಿ ಅಂದರೆ ಏಪ್ರಿಲ್ 19ರ ವರೆಗೆ ಕೌಟುಂಬಿಕ ದೌರ್ಜನ್ಯ ಪ್ರಕರಣದಡಿ ಒಟ್ಟು 4 ಸಾವಿರಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಆ ಮೂಲಕ ದೇಶದಲ್ಲಿ ಕೋವಿಡ್-19 ಬಿಕ್ಕಟ್ಟು ಪ್ರಾರಂಭವಾದಾಗಿನಿಂದ ಇಂತಹ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.
ವರ್ಷದಲ್ಲಿ ಶೇ.9ರಷ್ಟು ಏರಿಕೆ
ಕಳೆದ ವರ್ಷಕ್ಕೆ ಹೋಲಿಸಿದರೆ ಲಂಡನ್‌ನಲ್ಲಿ ಕೌಟುಂಬಿಕ ದೌರ್ಜನ್ಯ ಘಟನೆಗಳ ಪ್ರಮಾಣದಲ್ಲಿ ಶೇ.9 ರಷ್ಟು ಹೆಚ್ಚಾಗಿದೆ ಎಂದು ಪೊಲೀಸರು ತಿಳಿಸಿದ್ದು, 2019 ರಲ್ಲಿ 17,275 ಪ್ರಕರಣಗಳು ದಾಖಲಾಗಿದ್ದವು. ಆದರೆ ಪ್ರಸಕ್ತ ವರ್ಷದಲ್ಲಿ ಇದರ ಪ್ರಮಾಣ 18,800 ಕ್ಕಿಂತ ಹೆಚ್ಚಾಗಿದೆ.
ನಿಯಮಗಳೇ ಮುಳುವು
ಸದ್ಯ ಎದುರಾಗಿರುವ ಸಾಂಕ್ರಾಮಿಕ ಪಿಡುಗನ್ನು ತಡೆಗಟ್ಟಲು ಮತ್ತು ಸಾರ್ವಜನಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಲಾಕ್‌ಡೌನ್ ನಿರ್ಬಂಧಗಳನ್ನು ಹೇರಿದ್ದು, ಮನೆಯಲ್ಲಿಯೇ ಇರುವಂತೆ ಸೂಚಿಸ ಲಾಗಿದೆ. ಇಷ್ಟು ದಿನ ಕೆಲಸ ಕಾರ್ಯ ಎಂದು ದಿನದ ಮುಕ್ಕಾಲು ಭಾಗ ಹೊರಗೆ ಕಳೆಯುತ್ತಿದ್ದ ದಂಪತಿ ಒಟ್ಟಿಗೆ ಸಮಯ ಕಳೆಯುತ್ತಿದ್ದಾರೆ. ಪರಿಣಾಮ ಸತಿ- ಪತಿಯರ ನಡುವೆ ಮನಸ್ತಾಪ ಹೆಚ್ಚುತ್ತಿದೆ. ದುರದೃಷ್ಟವಶಾತ್ ಇಂತಹ ವೇಳೆಯೇ ಕೌಟುಂಬಿಕ ದೌರ್ಜನ್ಯ, ಕಿರುಕುಳ ಮತ್ತಿತ್ತರ ಅಪರಾಧ ಪ್ರಕರಣಗಳು ದಾಖಲಾ ತಿಯೂ ಹೆಚ್ಚಾಗುತ್ತಿದ್ದು, ಇಂತಹ ಬೆಳವಣಿ ಗೆಯಾಗಲು ಲಾಕ್‌ಡೌನ್ ನಿಯಮಗಳೇ ಕಾರಣವಾಗುತ್ತಿದೆ ಎನ್ನುತ್ತಾರೆ ಕೆಲವರು.
ನಗರಗಳಲ್ಲಿ ಹೆಚ್ಚು
ಗ್ರಾಮೀಣ ಪರಿಸರದ ಜನರು ಇದಕ್ಕೆಲ್ಲ ಹೊಂದಿಕೊಂಡಿದ್ದಾರೆ. ನಗರದ ಜನ ಮಾತ್ರ ಮೋಜು ಮಸ್ತಿಯಲ್ಲಿ ಕಾಲ ಕಳೆಯುತ್ತಿದ್ದು, ಈಗ ಮನೆಯೊಳಗೆ ಪರಸ್ಪರ ಹೊಂದಾಣಿಕೆ ಇಲ್ಲದೆ ಮನಸ್ತಾಪಗಳು ಹೆಚ್ಚಾಗುತ್ತಿವೆ ಎಂದು ವರದಿಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.