Charmadi Ghat: ಲಘು ಭೂಕುಸಿತ; ವಾಹನ ಸಂಚಾರಕ್ಕೆ ಅಡ್ಡಿಯಾಗಿಲ್ಲ
Team Udayavani, Aug 23, 2024, 1:36 AM IST
ಬೆಳ್ತಂಗಡಿ: ಪಶ್ಚಿಮ ಘಟ್ಟದಲ್ಲಿ ಎರಡು ದಿನಗಳಿಂದ ತೀವ್ರ ಮಳೆಯಾದ ಪರಿಣಾಮ ಚಾರ್ಮಾಡಿ ಘಾಟಿಯ 9 ಮತ್ತು 10ನೇ ತಿರುವಿನ ಸಮೀಪ ಸಣ್ಣ ಪ್ರಮಾಣದಲ್ಲಿ ಬರೆ ಕುಸಿದಿದೆ.
ಆದರೆ ವಾಹನ ಸಂಚಾರಕ್ಕೆ ಅಡ್ಡಿಯಾಗಿಲ್ಲ. ಮಳೆ ರಭಸದಿಂದ ಮೇಲ್ಭಾಗದಿಂದ ನೀರು ಹರಿದು ಬಂದಿರುವ ಪರಿಣಾಮ ಸಣ್ಣ ಪ್ರಮಾಣದಲ್ಲಿ ಕುಸಿತಗೊಂಡಿತ್ತು. ತತ್ಕ್ಷಣ ಮಣ್ಣು ತೆರವು ಮಾಡಲಾಗಿದೆ.
ಮತ್ತೊಂದೆಡೆ ರಾಣಿ ಝರಿ ಸುತ್ತಮುತ್ತ ಬಿರುಕು ಬಿಟ್ಟಿದೆ ಎಂದು ಸಾಮಾಜಿಕ ಸಾಲತಾಣದಲ್ಲಿ ಸ್ಯಾಟಲೈಟ್ ಫೋಟೋ ಹರಿಬಿಡಲಾಗಿದ್ದು, ಈ ಸಂಬಂಧ ಸ್ಥಳಕ್ಕೆ ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆದರೆ ಅಂತಹ ಯಾವುದೇ ಘಟನೆ ಸಂಭವಿಸಿಲ್ಲ ಎಂಬುದು ಸ್ಪಷ್ಟವಾಗಿದೆ.
ಬುಧವಾರ ಬಂಡಾಜೆ ಫಾಲ್ಸ್ನಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಸುರಿದು ಆತಂಕ ಸೃಷ್ಟಿಸಿತ್ತು. ಆದರೆ ಗುರುವಾರ ಮಳೆ ಪ್ರಮಾಣ ಸಂಪೂರ್ಣ ಕಡಿಮೆಯಾಗಿತ್ತು. ಹಾಗಾಗಿ ನದಿನೀರಿನ ಮಟ್ಟ ಇಳಿಕೆಯಾಗಿದೆ. ಜತೆಗೆ ಕಿಂಡಿ ಅಣೆಕಟ್ಟುಗಳಲ್ಲಿ ತುಂಬಿದ್ದ ತ್ಯಾಜ್ಯವನ್ನು ಧರ್ಮಸ್ಥಳ ವಿಪತ್ತು ಸೇವಾ ತಂಡ, ಸ್ಥಳೀಯರ ಸಹಕಾರದಲ್ಲಿ ತೆರವು ಮಾಡಿ ನದಿ ನೀರಿನ ಹರಿವು ಸುಗಮಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.