ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಹೆಚ್ಚುತ್ತಿದೆ ಅಪಘಾತ
Team Udayavani, Jun 14, 2020, 8:00 AM IST
ಬೆಳ್ತಂಗಡಿ: ಮಳೆಗಾಲ ಸಮೀಪಿಸುತ್ತಿರುವ ಮುನ್ನವೇ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ.
ಶನಿವಾರ ಸ್ನೇಹಿತರು ಸೇರಿ ಧರ್ಮಸ್ಥಳಕ್ಕೆ ಭೇಟಿ ನೀಡಿ ಚಿಕ್ಕಮಗಳೂರು ಮಾರ್ಗವಾಗಿ ಬೆಂಗಳೂರು ತೆರಳುವ ಕಾರು ಹಾಗೂ ತರಕಾರಿ ಸಾಗಾಟದ ಗೂಡ್ಸ್ ಮಿನಿ ಟೆಂಪೊ ಪರಸ್ಪರ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಟೆಂಪೊ ಚರಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಇಬ್ಬರೂ ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.
22 ಸಣ್ಣಪುಟ್ಟ ಅಪಘಾತ
ಕಳೆದ ಎರಡು ವಾರಗಳ ಅವಧಿಯಲ್ಲಿ ಈ ರಸ್ತೆಯಲ್ಲಿ 22 ಸಣ್ಣಪುಟ್ಟ ಅಪಘಾತಗಳ ಸಹಿತ 6 ತೀವ್ರಸ್ವರೂಪದಲ್ಲಿ ವಾಹನಗಳು ಅಪಘಾತಕ್ಕೀಡಾಗಿವೆ.
ಚಾರ್ಮಾಡಿ ಘಾಟ್ ರಸ್ತೆಯ ಆರಂಭದಿಂದ 11 ತಿರುವುಗಳಿಗೆ ಇತ್ತೀಚೆಗೆ ಹೆದ್ದಾರಿ ಇಲಾಖೆಯಿಂದ ಮರು ಡಾಮರೀಕರಣ ಮಾಡಲಾಗಿತ್ತು. ಈ ಡಾಮರೀಕರಣ ಅತೀ ನುಣುಪಾಗಿದ್ದು, ಮಳೆಗೆ ತೇವಾಂಶವಿರುವ ರಸ್ತೆಯಲ್ಲಿ ವಾಹನಗಳು ಬ್ರೇಕ್ ಅಳವಡಿಸಿದರೂ ನಿಯಂತ್ರಣಕ್ಕೆ ಬಾರದೆ ಅಪಘಾತ ಸಂಭವಿಸುತ್ತಿದೆ ಎಂದು ಚಾಲಕರು ಅಳಲು ತೋಡಿಕೊಂಡಿದ್ದಾರೆ.
ಇದಲ್ಲದೇ ಲಾಕ್‌ಡೌನ್ ಅವಧಿಯಲ್ಲಿ ವಾಹನಗಳ ಸಂಖ್ಯೆ ಇಳಿಮುಖವಾಗಿದ್ದರಿಂದ ಅಗತ್ಯ ಓಡಾಟ ನಡೆಸುವ ವಾಹನಗಳ ಅತೀವೇಗದ ಚಾಲನೆಯಿಂದ ಅಪಘಾತಗಳು ಹೆಚ್ಚುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.