ಕೋವಿಡ್‌ನಿಂದ ಜಿಲ್ಲೆಯನ್ನು ಸುರಕ್ನಿತವಾಗಿಸಿ : ಚಾರುಲತಾ ಸೋಮಲ್
Team Udayavani, Jan 5, 2022, 12:44 PM IST
ಚಾಮರಾಜನಗರ: ವೇಗವಾಗಿ ಹರಡುತ್ತಿರುವ ಕೋವಿಡ್-19ರ ಒಮಿಕ್ರಾನ್ 3ನೇ ಅಲೆಯ ಪರಿಣಾಮಕಾರಿ ನಿಯಂತ್ರಣಕ್ಕಾಗಿ ನಗರದಲ್ಲಿ ಆಯೋಜಿಸಲಾಗಿದ್ದ ಮಾಸ್ಕ್ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಮಂಗಳವಾರ ಚಾಲನೆ ನೀಡಿದರು.
ನಗರದ ಭುವನೇಶ್ವರಿ ವೃತ್ತದಲ್ಲಿ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಕೋವಿಡ್ ನಿಯಂತ್ರಣಕ್ಕಾಗಿ ಸುರûಾ ಪಡೆಯ ಕಾರ್ಯಾಚರಣೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಸಿರು ನಿಶಾನೆ ತೋರಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕೋವಿಡ್ -19ರ ಒಮಿಕ್ರಾನ್ ವೈರಾಣು ವೇಗವಾಗಿ ಹರಡುತ್ತಿದೆ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸ್ಯಾನಿಟೈಸರ್ ಬಳಸಬೇಕು. ಆಗಮಾತ್ರ ಕೋವಿಡ್ ವೈರಸ್‌ನಿಂದ ಜಿಲ್ಲೆಯನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ. ಸಾರ್ವಜನಿಕರು ಈ ಬಗ್ಗೆ ಅರಿವು ಹೊಂದಬೇಕು ಎಂದು ತಿಳಿಸಿದರು.
ಎಚ್ಚರಿಕೆ ಅವಶ್ಯ: ಜಿಲ್ಲೆ ಕೋವಿಡ್ ಲಸಿಕಾಕರಣ ಕಾರ್ಯದಲ್ಲಿ ಉತ್ತಮ ಪ್ರಗತಿ ಸಾಧಿಸಿದೆ. ಮೊದಲ ಡೋಸ್ ನೀಡಿಕೆಯಲ್ಲಿ ಶೇ.98ರಷ್ಟು ಗುರಿ ಸಾಧಿಸಿದೆ. 2ನೇ ಡೋಸ್ ನೀಡಿಕೆಯಲ್ಲಿ ಪ್ರಸ್ತುತ ಶೇ.77 ಪ್ರಗತಿಯಾಗಿದ್ದು, ಕೆಲವೇ ದಿನಗಳಲ್ಲಿ ನಿಗದಿತ ಸಾಧನೆಯಾಗಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ 15ರಿಂದ 18ರ ವಯಸ್ಸಿನ ಶಾಲಾ ಮಕ್ಕಳಿಗೂ ಲಸಿಕೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಎಲ್ಲರೂ ಎಚ್ಚರದಿಂದ ಇರಬೇಕಾಗಿರುವುದು ಅವಶ್ಯ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮಾರ್ಗಸೂಚಿ: ನಗರ, ಪಟ್ಟಣ ಪ್ರದೇಶ ಹಾಗೂ ಹೆಚ್ಚಿನ ಜನಸಂಖ್ಯೆಯಿಂದ ಕೂಡಿರುವ ಗ್ರಾಮ ಪಂಚಾಯ್ತಿಗಳಲ್ಲಿ ಹೆಚ್ಚಿನ ಜನ ಗುಂಪುಗೂಡಬಾರದು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾರ್ವಜನಿಕರು ಕೋವಿಡ್ ಮಾರ್ಗಸೂಚಿ ನಿಯಮ ಪಾಲಿಸುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮನವಿ ಮಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ.ವಿಶ್ವೇಶ್ವರಯ್ಯ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೆ. ಸುರೇಶ್, ನಗರಸಭೆ ಪೌರಾಯುಕ್ತ ಕರಿಬಸವಯ್ಯ, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣೆಕೊಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Congress; ಸುರ್ಜೇವಾಲ ವಿರುದ್ಧ ಸಚಿವರಿಂದಲೇ ದೂರು?: ಸತೀಶ್ ಜಾರಕಿಹೊಳಿ ಹೇಳಿದ್ದೇನು?
BJP Rift; ಯತ್ನಾಳ್ ಪರ ಬ್ಯಾಟಿಂಗ್ ಮಾಡಿದ ಶಾಸಕ ಬಿ.ಪಿ. ಹರೀಶ್
MUST WATCH
ಹೊಸ ಸೇರ್ಪಡೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.