Cheating: ಸುಧಾಮೂರ್ತಿ ಹೆಸರು ಬಳಸಿ ವಂಚನೆ: ಓರ್ವನ ಬಂಧನ

Team Udayavani, Oct 16, 2023, 11:46 PM IST

sudha murthy

ಬೆಂಗಳೂರು: ಇನ್ಫೋಸಿಸ್‌ ಪ್ರತಿಷ್ಠಾನದ ಮುಖ್ಯಸ್ಥೆ ಡಾ| ಸುಧಾಮೂರ್ತಿ ಹೆಸರು ದುರ್ಬಳಕೆ ಮಾಡಿಕೊಂಡು ವಂಚಿಸಿದ ಆರೋಪದಲ್ಲಿ ಓರ್ವನನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರಾಜಾಜಿನಗರ ನಿವಾಸಿ ಅರುಣ್‌ ಸುದರ್ಶನ್‌(40) ಬಂಧಿತ. ಶ್ರುತಿ ಎಂಬವರ ಕುಟುಂಬದ ಮೇಲಿನ ದ್ವೇಷಕ್ಕಾಗಿ ಈ ರೀತಿಯ ಕೃತ್ಯ ಎಸಗಿದ್ದಾನೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ವಿಚಾರ ತಿಳಿದುಕೊಂಡ ಸುಧಾಮೂರ್ತಿಯವರ ಎಕ್ಸಿಕ್ಯೂಟಿವ್‌ ಅಸಿಸ್ಟೆಂಟ್‌ ಮಮತಾ ಸಂಜಯ್‌ ಎಂಬವರು ಲಾವಣ್ಯಾ ಮತ್ತು ಶ್ರುತಿ ಎಂಬವರ ವಿರುದ್ಧ ದೂರು ನೀಡಿದ್ದರು.

ಶ್ರುತಿ ಕುಟುಂಬದ ಮೇಲೆ ದ್ವೇಷ
ಬೆಂಗಳೂರಿನಲ್ಲಿ ಇವೆಂಟ್‌ ಮ್ಯಾನೇಜ್‌ಮೆಂಟ್‌ ನಡೆಸುವ ಆರೋಪಿ ಅರುಣ್‌ ಹಾಗೂ ಅಮೆರಿಕದಲ್ಲಿ ವಾಸವಾಗಿರುವ ಶ್ರುತಿ ಪತಿ ಹತ್ತಿರದ ಸಂಬಂಧಿಕರು ಹಾಗೂ ಬಾಲ್ಯ ಸ್ನೇಹಿತರು. ಅನಂತರ ಎರಡು ಕುಟುಂಬಗಳು ದೂರವಾಗಿದ್ದವು. ಜತೆಗೆ ಅಮೆರಿಕದಲ್ಲಿ ನೆಲೆಸಿದ್ದ ಶ್ರುತಿ ದಂಪತಿ 10 ವರ್ಷಗಳಿಂದ ವೈಯಕ್ತಿಕ ವಿಚಾರಗಳಿಗೆ ಅರುಣ್‌ ಜತೆ ಸಂಪರ್ಕ ಕಡಿದುಕೊಂಡಿದ್ದರು. ಹೀಗಾಗಿ ಶ್ರುತಿ ದಂಪತಿ ವಿರುದ್ಧ ಆರೋಪಿ ಅರುಣ್‌ ದ್ವೇಷ ಸಾಧಿಸುತ್ತಿದ್ದ. ಈ ಮಧ್ಯೆ ಕನ್ನಡ ಕೂಟ ಆಫ್ ನಾರ್ತ್‌ ಕ್ಯಾಲಿಫೋನಿರ್ಯಾ(ಕೆಕೆಎನ್‌ಸಿ)ಯಿಂದ ಅಮೆರಿಕದ ಸೇವಾ ಮಿಲ್ಟಿಟಸ್‌ನಲ್ಲಿ ಸೆ.26ರಂದು ಡಾ| ಸುಧಾಮೂರ್ತಿ ಜತೆಗೆ ಮೀಟ್‌ ಆ್ಯಂಡ್‌ ಗ್ರೀಟ್‌ ವಿತ್‌ ಡಾ| ಸುಧಾಮೂರ್ತಿ ಎಂಬ ಕಾರ್ಯಕ್ರಮ ಆಯೋಜಿಸಲು ಶ್ರುತಿ ಆಸಕ್ತರಾಗಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿದ್ದ ಸಂಬಂಧಿ ಅರುಣ್‌ಗೆ ಕರೆ ಮಾಡಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದರು. ಈ ಕಾರ್ಯಕ್ರಮಕ್ಕೆ ಡಾ| ಸುಧಾಮೂರ್ತಿ ಅವರನ್ನು ಮುಖ್ಯಅತಿಥಿಯಾಗಿ ಕರೆತರಲು ಸಾಧ್ಯವೇ ಎಂದು ಕೇಳಿದ್ದರು. ಅದಕ್ಕೆ ಒಪ್ಪಿದ ಅರುಣ್‌, ಈ ಮೂಲಕ ಅಮೆರಿಕದಲ್ಲಿ ಶ್ರುತಿ ದಂಪತಿ ಮರ್ಯಾದೆಗೆ ಧಕ್ಕೆ ತರಲು ನಿರ್ಧರಿಸಿದ್ದ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಪೊಲೀಸರು ಹೇಳಿದರು.

ಲಾವಣ್ಯ ಹೆಸರಿನಲ್ಲಿ ನಂಬಿಸಿ ವಂಚನೆ!

ಆ ಬಳಿಕ ಸುಧಾಮೂರ್ತಿ ಆಪ್ತಸಹಾಯಕಿ ಲಾವಣ್ಯಾ ಜತೆಗೆ ಮಾತನಾಡಿ ದ್ದೇನೆ. ಸುಧಾಮೂರ್ತಿ ಕಾರ್ಯಕ್ರಮಕ್ಕೆ ಬರಲು ಒಪ್ಪಿ¨ªಾರೆ ಎಂದು ಶ್ರುತಿ ದಂಪತಿಗೆ ಹೇಳಿದ್ದ. ಸುಧಾಮೂರ್ತಿ ಅಮೆರಿಕಗೆ ಕರೆತರಲು ಖರ್ಚು ವೆಚ್ಚಕ್ಕಾಗಿ 5 ಲಕ್ಷ ರೂ. ಪಡೆದಿದ್ದ. ವಾಸ್ತವದಲ್ಲಿ ಸುಧಾಮೂರ್ತಿಗೆ ಲಾವಣ್ಯಾ ಹೆಸರಿನ ಆಪ್ತ ಸಹಾಯಕಿ ಇಲ್ಲ.

ಮತ್ತೂಂದೆಡೆ ಆರೋಪಿಯ ಮಾತು ನಂಬಿದ ಶ್ರುತಿ ದಂಪತಿ ಅಮೆರಿಕದಲ್ಲಿ ಮೀಟ್‌ ಆ್ಯಂಡ್‌ ಗ್ರೀಟ್‌ ವಿತ್‌ ಡಾ| ಸುಧಾಮೂರ್ತಿ ಎಂಬ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಿದ್ದರು. ಈ ಕಾರ್ಯಕ್ರಮದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಸಹ ನೀಡಿದ್ದರು. ಈ ಕಾರ್ಯಕ್ರಮಕ್ಕೆ ತಲಾ 40 ಡಾಲರ್‌ ಟಿಕೆಟ್‌ ದರ ನಿಗದಿಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಅದನ್ನು ಗಮನಿಸಿದ್ದ ಸುಧಾಮೂರ್ತಿ ಅವರ ಎಕ್ಸಿಕ್ಯೂಟಿವ್‌ ಅಸಿಸ್ಟೆಂಟ್‌ ಮಮತಾ ಸಂಜಯ್‌ ಆಶ್ಚರ್ಯಗೊಂಡು ಕಾರ್ಯಕ್ರಮ ಆಯೋಜಕರನ್ನು ಸಂಪರ್ಕಿಸಿದಾಗ ಲಾವಣ್ಯಾ ಮತ್ತು ಶ್ರುತಿ ಹೆಸರು ಹೇಳಿದ್ದರು. ಹೀಗಾಗಿ ಡಾ| ಸುಧಾಮೂರ್ತಿ ಹೆಸರು ದುರ್ಬಳಕೆ ಮಾಡಿಕೊಂಡು ಹಣ ಸಂಗ್ರಹಿಸಿ ವಂಚಿಸಿದ ಆರೋಪದಡಿ ಶ್ರುತಿ ಮತ್ತು ಲಾವಣ್ಯ ವಿರುದ್ಧ ಮಮತಾ ಸಂಜಯ್‌ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Suvarna-obama

Belagavi Session: ಬರಾಕ್‌ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.