ಕಾನೂನು ಮೀರಿ ಹಿಂಸೆಗಿಳಿದರೆ ಸಹಿಸೆವು ; ಮುಖ್ಯಮಂತ್ರಿ ಬೊಮ್ಮಾಯಿ
Team Udayavani, Apr 12, 2022, 6:25 AM IST
ಉಡುಪಿ: ಸಂವಿಧಾನ ಬದ್ಧವಾಗಿ ರಚನೆಯಾಗಿರುವ ನಮ್ಮ ಸರಕಾರ ಕಾನೂನು ಸುವ್ಯವಸ್ಥೆ ಮತ್ತು ಸಮಾನತೆಯ ದೃಷ್ಟಿಕೋನದಲ್ಲಿ ಕೆಲಸ ಮಾಡುತ್ತಿದೆ. ಅವರವರ ವಿಚಾರಗಳನ್ನು ಪ್ರಚಾರ ಮಾಡಿದರೆ ತೊಂದರೆ ಇಲ್ಲ. ಆದರೆ ಕಾನೂನನ್ನು ಕೈಗೆ ತೆಗೆದುಕೊಂಡು, ಹಿಂಸೆಗಿಳಿದರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.
ಮಂಗಳೂರಿನಲ್ಲಿ ಲವ್ ಜೆಹಾದ್ ತಡೆಯಲು ಹಿಂದೂ ಟಾಸ್ಕ್ ಫೋರ್ಸ್ ರಚಿಸಲಾಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿ ಸೋಮವಾರ ಆದಿಉಡುಪಿ ಹೆಲಿಪ್ಯಾಡ್‌ನಲ್ಲಿ ಪ್ರತಿಕ್ರಿಯಿಸಿದ ಅವರು, ಎಲ್ಲದಕ್ಕೂ ಕಾನೂನಿದೆ ಮತ್ತು ಕೆಲವು ಕಾನೂನುಗಳನ್ನು ಹಿಂದಿನ ಸರಕಾರಗಳೇ ರಚನೆ ಮಾಡಿವೆ. ಕಾನೂನು ರಕ್ಷಿಸುವುದು ನಮ್ಮ ಕೆಲಸ ಎಂದರು.
ನಮ್ಮ ಆ್ಯಕ್ಷನ್ ಮಾತಾಡಲಿದೆ
ಪ್ರಚಲಿತ ವಿದ್ಯಮಾನಗಳ ಬಗ್ಗೆ ಮುಖ್ಯಮಂತ್ರಿಗಳು ಮೌನವಾಗಿದ್ದಾರೆ ಎಂಬ ವಿಪಕ್ಷ ನಾಯಕರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಆಡಳಿತಾತ್ಮಕ ಕ್ರಮಗಳೇ ಮಾತಾಡುತ್ತಿವೆ. ಎಲ್ಲದಕ್ಕೂ ನಾವು ಮಾತನಾಡಬಾರದು. ನಮ್ಮ ಕೆಲಸಗಳು ಮಾತನಾಡಬೇಕು. ಯಾವ ಸಂದರ್ಭದಲ್ಲಿ ಏನು ನಿರ್ಧಾರ ತೆಗೆದುಕೊಳ್ಳ ಬೇಕು ಎಂದು ನಮಗೆ ತಿಳಿದಿದೆ. ವಿಪಕ್ಷದ ನಾಯಕರಿಂದ ಏನನ್ನೂ ಕಲಿಯಬೇಕಿಲ್ಲ. ಹಲವು ಕೊಲೆಗಳಿಗೆ ನೇರವಾಗಿ ಆರೋಪ ಇರುವ ಸಂಸ್ಥೆಗಳ ಪ್ರಕರಣಗಳನ್ನು ಇವರು ಅಧಿಕಾರದಲ್ಲಿದ್ದಾಗ ಸರಕಾರದ ಮಟ್ಟಕ್ಕೆ ತೆಗೆದುಕೊಂಡು ಹೋಗಿ ಕೈಬಿಟ್ಟಿದ್ದರು. ಆಗ ಇವರ ಕರ್ತವ್ಯ ಪ್ರಜ್ಞೆ ಎಲ್ಲಿತ್ತು? ಕರ್ನಾಟಕ ಶಾಂತಿ ಸುವ್ಯವಸ್ಥೆ ಇರುವ ಅತ್ಯಂತ ಪ್ರಗತಿಪರ ರಾಜ್ಯ. ರಾಜ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು ಎಂದು ಗೊತ್ತಿದೆ. ಅದನ್ನು ಮಾಡಿ ತೋರಿಸುತ್ತಿದ್ದೇವೆ. ಇವರ ಕಾಲದಲ್ಲಿ ಹತ್ತು ಹಲವು ಹಿಂದೂ ಯುವಕರ ಕೊಲೆಗಳಾಗಿದ್ದವು. ಆ ಸಂಸ್ಥೆಗಳ ಮೇಲಿನ ಪ್ರಕರಣವನ್ನೇ ಹಿಂಪಡೆದ್ದರು. ಆಗ ಅವರು ಬುದ್ಧಿ ಕಳೆದುಕೊಂಡಿದ್ದರೇ ಎಂದು ಪ್ರಶ್ನಿಸಿದರು. ಆ ಸಂಸ್ಥೆಯನ್ನು ರದ್ದುಗೊಳಿಸಲಾಗುವುದೇ ಎಂಬ ಪ್ರಶ್ನೆಗೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ ಎಂದರು.
ಪಿಪಿಪಿ ಮಾದರಿಯ 8 ವೈದ್ಯ ಕಾಲೇಜು
ರಾಜ್ಯದಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ (ಪಿಪಿಪಿ) 8 ವೈದ್ಯಕೀಯ ಕಾಲೇಜು ಬರುತ್ತಿವೆ. ಅದರಲ್ಲಿ ಉಡುಪಿಯೂ ಒಂದಾಗಿದೆ. ಡಿಪಿಆರ್ ಸಿದ್ಧಪಡಿ ಸುವ ಕಾರ್ಯವೂ ನಡೆಯುತ್ತಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜತೆಗೆ ಚರ್ಚೆ ನಡೆಸಲಿದ್ದೇವೆ. ಉಡುಪಿ ನಗರದ ಯುಜಿಡಿ ಕಾಮಗಾರಿಗೆ ಅನುದಾನ ಒದಗಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.