ಸರಕಾರಿ ನೌಕರರಿಗೆ ಮುಖ್ಯಮಂತ್ರಿ ಅಭಿನಂದನೆ
Team Udayavani, Apr 9, 2020, 5:42 AM IST
ಬೆಂಗಳೂರು: ಕೋವಿಡ್ 19 ವೈರಸ್ ನಿಯಂತ್ರಿಸುವಲ್ಲಿ ರಾಜ್ಯ ಸರಕಾರಿ ನೌಕರರು ಸೇವೆಯಲ್ಲಿ ನಿರಂತರ ಸೇವೆ ಸಲ್ಲಿಸುತ್ತಿರುವುದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಿಗೆ ಪತ್ರ ಬರೆದಿರುವ ಸಿಎಂ, ಸರಕಾರಿ ನೌಕರರು ವೈರಸ್ ವಿರುದ್ಧದ ಹೋರಾಟದಲ್ಲಿ ಸರಕಾರಕ್ಕೆ ಸಹಾಯ ಮಾಡಲು ಒಂದು ದಿನದ ಸಂಬಳವನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಸರಕಾರದ ಮೇಲೆ ವಿಶ್ವಾಸವಿಟ್ಟು ನೀಡಿರುವ ದೇಣಿಗೆಯನ್ನು ಕೋವಿಡ್ 19 ನಿಯಂತ್ರಿಸುವಲ್ಲಿ ಸದ್ಬಳಕೆ ಮಾಡಿಕೊಳ್ಳುವುದಾಗಿ ತಿಳಿಸಿರುವ ಅವರು, ಸರಕಾರಿ ನೌಕರರು ಅತಿವೃಷ್ಟಿ, ಅನಾವೃಷ್ಟಿಯಂಥ ಪ್ರಕೃತಿ ವಿಕೋಪ ಉಂಟಾದ ಸಂದರ್ಭದಲ್ಲಿಯೂ ಸಹಕಾರ ನೀಡಿರುವುದನ್ನು ಶ್ಲಾಘಿಸಿದ್ದು, ಸರಕಾರಿ ನೌಕರರ ಸಹಕಾರ ಹೀಗೆಯೇ ಮುಂದುವರಿಯಲಿ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.