ಚಿಕ್ಕಬಳ್ಳಾಪುರದಲ್ಲಿ 77 ಹೊಸ ಕೋವಿಡ್ ಪ್ರಕರಣ! 577ಕ್ಕೆ ಏರಿದ ಜಿಲ್ಲೆಯ ಸೋಂಕಿತರ ಸಂಖ್ಯೆ
Team Udayavani, Jul 16, 2020, 8:23 PM IST
ಚಿಕ್ಕಬಳ್ಳಾಪುರ: ಜಿಲ್ಲೆಗೆ ಕೋವಿಡ್-19 ಪ್ರವೇಶವಾದ ಬಳಿಕ ಇದೇ ಮೊದಲ ಬಾರಿಗೆ ಒಂದೇ ದಿನ ಬರೋಬ್ಬರಿ 77 ಪಾಸಿಟೀವ್ ಪ್ರಕರಣಗಳು ಜಿಲ್ಲಾದ್ಯಂತ ವರದಿಯಾಗಿದ್ದು ಸೋಂಕಿತರ ಸಂಖ್ಯೆ 577ಕ್ಕೆ ಮುಟ್ಟಿದೆ. ಚಿಕ್ಕಬಳ್ಳಾಪುರದಲ್ಲಿ ಕೋವಿಡ್ ಸೋಂಕಿಗೆ ಒಬ್ಬರು ಬಲಿಯಾಗಿದ್ದು ಸಾವಿನ ಸಂಖ್ಯೆ 17ಕ್ಕೆ ಏರಿಕೆ ಕಂಡಿದೆ.
ಗುರುವಾರ ಜಿಲ್ಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ 28, ಗೌರಿಬಿದನೂರು 17, ಚಿಂತಾಮಣಿ 19, ಬಾಗೇಪಲ್ಲಿ 8, ಶಿಡ್ಲಘಟ್ಟ 3, ಹಾಗೂ ಗುಡಿಬಂಡೆಯಲ್ಲಿ 2 ಪಾಸಿಟೀವ್ ಪ್ರಕರಣಗಳು ಕಂಡು ಬರುವ ಮೂಲಕ ಜಿಲ್ಲೆಯಲ್ಲಿ ಕೋವಿಡ್-19 ಅರ್ಭಟ ಮುಂದುವರೆದಿದೆ.
ಕೇವಲೇ ನಾಲ್ಕೈದು ದಿನದಲ್ಲಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 300 ಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದ್ದು ಇದುವರೆಗೂ ನಗರ, ಪಟ್ಟಣಕ್ಕೆ ಸೀಮಿತವಾಗಿದ್ದ ಮಹಾಮಾರಿ ಕೋವಿಡ್ ಈಗ ಹಳ್ಳಿಗಳಿಗೂ ವಿಸ್ತರಿಸಿ ಜನರ ನಿದ್ದೆಗೆಡಿಸಿದೆ.
200 ಗಡಿ ದಾಟಿದ ಚಿಕ್ಕಬಳ್ಳಾಪುರ:
ಆರಂಭದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಇಡೀ ಜಿಲ್ಲೆಯ ಪೈಕಿ ಗೌರಿಬಿದನೂರಲ್ಲಿ ತನ್ನ ಅಟ್ಟಹಾಸ ಮೆರೆದಿತ್ತು. ಆದರೆ ಈಗ ಚಿಕ್ಕಬಳ್ಳಾಫುರ ಜಿಲ್ಲಾ ಕೇಂದ್ರದಲ್ಲಿ ಕೋವಿಡ್ ರಣಕೇಕೆ ಹಾಕುತ್ತಿದೆ. ಚಿಕ್ಕಬಳ್ಳಾಪುರ ತಾಲೂಕಿನಲ್ಲೀಗ ಸೋಂಕಿತರ ಸಂಖ್ಯೆ 203 ಕ್ಕೆ ತಲುಪಿದೆ. ಉಳಿದಂತೆ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ 86.. ಚಿಂತಾಮಣಿ 87, ಗೌರಿಬಿದನೂರು 158, ಗುಡಿಬಂಡೆ 9, ಶಿಡ್ಲಘಟ್ಟ 34 ಪಾಸಿಟೀವ್ ಪ್ರಕರಣಗಳನ್ನು ಹೊಂದಿದೆ.
ಒಟ್ಟು 577 ಪಾಸಿಟೀವ್ ಪ್ರಕರಣಗಳ ಪೈಕಿ ಜಿಲ್ಲೆಯಲ್ಲಿ ಇದುವರೆಗೂ 294 ಮಂದಿ ಡಿಸ್ಚಾರ್ಜ್ ಆಗಿದ್ದು ಇನ್ನೂ 265 ಸಕ್ರಿಯ ಕೋವಿಡ್ ಪ್ರಕರಣಗಳು ಜಿಲ್ಲೆಯಲ್ಲಿ ಇದ್ದು ಎಲ್ಲರನ್ನು ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಕೋವಿಡ್-19 ಆಸ್ಪತ್ರೆ ಅಲ್ಲದೇ ತಾಲೂಕು ಕೇಂದ್ರಗಳಲ್ಲಿ ಸಹ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್-19ಗೆ 17 ಮಂದಿ ಬಲಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.