ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 83 ಕೋವಿಡ್ ಕೇಸ್ ಪತ್ತೆ: 993ಕ್ಕೆ ಏರಿದ ಸೋಂಕಿತರ ಸಂಖ್ಯೆ
Team Udayavani, Jul 21, 2020, 10:14 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್-19 ಮಹಾ ಸ್ಪೋಟ ಮುಂದುವರೆದಿದ್ದು ಮಂಗಳವಾರ ಜಿಲ್ಲಾದ್ಯಂತ ಹೊಸದಾಗಿ ಬರೋಬ್ಬರಿ 83 ಕೋವಿಡ್ ಪಾಸಿಟೀವ್ ಪ್ರಕರಣಗಳು ಕಂಡು ಬರುವ ಮೂಲಕ ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ ಈಗ 993ಕ್ಕೆ ಏರಿಕೆ ಕಂಡಿದೆ.
ಕಳೆದ ಸೋಮವಾರವಷ್ಟೇ ಜಿಲ್ಲೆಯಲ್ಲಿ ಒಟ್ಟು 60 ಪ್ರಕರಣಗಳು ಕಂಡು ಬಂದಿದ್ದವು. ಈಗ 83 ಪ್ರಕರಣಗಳು ಕಂಡು ಬರುವ ಮೂಲಕ ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್ ತೀವ್ರಗತಿಯಲ್ಲಿ ಹರಡುತ್ತಿರುವ ವೇಗಕ್ಕೆ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ. ಸದ್ಯದ ಪರಿಸ್ಥಿತಿ ನೋಡಿದರೆ ಜಿಲ್ಲೆಯಲ್ಲಿ ಸಾವಿರದಿಂದ ಸಾವಿರದ ಐದುನೂರು, ಎರಡು ಸಾವಿರವರೆಗೂ ಸೋಂಕಿತರ ಸಂಖ್ಯೆ ಏರಿಕೆಯಾಗುವ ಲಕ್ಷಣಗಳು ಕಾಣುತ್ತಿವೆ.
83 ಹೊಸ ಪ್ರಕರಣಗಳ ಪೈಕಿ ಚಿಕ್ಕಬಳ್ಳಾಪುರ ತಾಲೂಕು ಒಂದರಲ್ಲಿ ಅರ್ಧದಷ್ಟು ಅಂದರೆ ಬರೋಬ್ಬರಿ 40 ಪ್ರಕರಣಗಳು ಕಂಡು ಬಂದರೆ ಬಾಗೇಪಲ್ಲಿಯಲ್ಲಿ 10, ಚಿಂತಾಮಣಿಯಲ್ಲಿ 11, ಗೌರಿಬಿದನೂರಲ್ಲಿ 13, ಗುಡಿಬಂಡೆ 4 ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ 5 ಹೊಸ ಪ್ರಕರಣಗಳು ಕಂಡು ಬಂದಿವೆ. ಇದರ ನಡುವೆ ಮಂಗಳವಾರ ಸೋಂಕಿತರಲ್ಲಿ ಒಟ್ಟು 51 ಮಂದಿ ಕೋವಿಡ್-19 ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 443 ಮಂದಿ ಇದುವರೆಗೂ ಸೋಂಕಿನಿಂದ ಗುಣಮುಖರಾಗಿದ್ದು 993 ಮಂದಿ ಪೈಕಿ ಇನ್ನೂ 528 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿ ಇವೆ. ಒಟ್ಟಾರೆ 993 ಪ್ರಕರಣಗಳಲ್ಲಿ ಚಿಕ್ಕಬಳ್ಳಾಪುರ 348, ಬಾಗೇಪಲ್ಲಿ 137, ಚಿಂತಾಮಣಿ 153, ಗೌರಿಬಿದನೂರು 270, ಗುಡಿಬಂಡೆ 26, ಶಿಡ್ಲಘಟ್ಟ 59 ಪ್ರಕರಣಗಳನ್ನು ಹೊಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.