ಅನುದಾನ ಕೊರತೆ: ಕೋರ್ಟ್‌ಗೆ ಹೊಸ ಕಟ್ಟಡ ಭಾಗ್ಯ ಮರೀಚಿಕೆ
Team Udayavani, Jan 10, 2021, 12:30 PM IST
ಚಿಕ್ಕೋಡಿ: ಸಂವಿಧಾನ ಬರೆದ ಡಾ.ಅಂಬೇಡ್ಕರ ವಾದ ಮಂಡಿಸಿದ ನ್ಯಾಯಾಲಯಕ್ಕೆ ಹೈಟಿಕ್ ಸ್ಪರ್ಶ ನೀಡಲು ಸರ್ಕಾರ ಮುಂದಾಗಿದೆ. ಆದರೆ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮೂರು ವರ್ಷ ಕಳೆದರೂ ಹೊಸ ಕಟ್ಟಡ ಭಾಗ್ಯ ಮರೀಚಿಕೆಯಾಗಿದೆ.
ಜಿಲ್ಲಾ ಸ್ಥಾನಮಾನ ಹೊಂದಿರುವ ಚಿಕ್ಕೋಡಿ ನಗರದಲ್ಲಿ ಹೈಟೆಕ್ ನ್ಯಾಯಾಲಯ ಕಟ್ಟಡ ನಿರ್ಮಾಣ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ 32 ಕೋಟಿ ರೂ. ಕ್ರಿಯಾಯೋಜನೆ ರೂಪಿಸಿದೆ. ಕಳೆದ 2018ರಲ್ಲಿ ಹೊಸ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ
ನೆರವೇರಿಸಿದೆ. ಆದರೆ ಇಲ್ಲಿಯವರಿಗೆ ಕಟ್ಟಡ ಕಾಮಗಾರಿ ಆರಂಭಿಸದೇ ಇರುವುದು ದುರ್ದೈವದ ಸಂಗತಿ.
ಜಿಲ್ಲಾ ಘೋಷಣೆಗೆ ತುದಿಗಾಲ ಮೇಲೆ ನಿಂತಿರುವ ಚಿಕ್ಕೋಡಿ ನಗರದಲ್ಲಿ ಹೈಟೆಕ್ ನ್ಯಾಯಾಲಯದ ಕಟ್ಟಡ ನಿರ್ಮಿಸಲು ರಾಜ್ಯ ಸರ್ಕಾರ ಮೊದಲು ಹಂತದಲ್ಲಿ 19 ಕೋಟಿ ರೂ. ಮಂಜೂರು ನೀಡಿತ್ತು. ಆದರೆ ಮತ್ತೂಮ್ಮೆ ಕ್ರಿಯಾ ಯೋಜನೆ ರೂಪಿಸಿದಾಗ
32 ಕೋಟಿ ರೂ.ಗೆ ಅನುದಾನ ಹೆಚ್ಚಿಸಿದೆ. ಕಟ್ಟಡ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಿಕೊಟ್ಟಿದೆ. ಒಂದು ವರ್ಷದಲ್ಲಿ ಕಟ್ಟಡ ಕಾಮಗಾರಿ ಮುಗಿಸಿಯೇ ಬಿಡುತ್ತೇವೆಂದು ಭರವಸೆ ನೀಡಿದ ಲೋಕೋಪಯೋಗಿ ಇಲಾಖೆ ಈಗ ಸುಮ್ಮನಾಗಿದೆ. ನ್ಯಾಯಾಲಯದ ಕಟ್ಟಡ ಕಾಮಗಾರಿ ನನೆಗುದಿಗೆ ಜನಪ್ರತಿನಿಧಿ ಗಳ ಇಚ್ಛಾಶಕ್ತಿ ಕೊರತೆಯೇ ಕಾರಣ ಎನ್ನುತ್ತಾರೆ ವಕೀಲರು.
ಸುಸಜ್ಜಿತ ಕಟ್ಟಡದ ಗುರಿ: ಸಂವಿಧಾನ ಬರೆದ ಡಾ.ಬಾಬಾಸಾಹೇಬ ಅಂಬೇಡ್ಕರ್ ಚಿಕ್ಕೋಡಿ ನ್ಯಾಯಾಲಯಕ್ಕೆ ಬಂದು ವಾದ ಮಂಡಿಸಿದ ಹಿನ್ನೆಲ್ಲೆಯಲ್ಲಿ ರಾಜ್ಯದಲ್ಲಿಯೇ ಮಾದರಿ ನ್ಯಾಯಾಲಯದ ಕಟ್ಟಡ ನಿರ್ಮಾಣವಾಗಲು ಹೈಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಇದರಿಂದ ನಗರದ ಹೃದಯ ಭಾಗದಲ್ಲಿ ಇರುವ ಈಗಿನ ನ್ಯಾಯಾಲಯದ ಆವರಣದಲ್ಲಿಯೇ ಎರಡು ಎಕರೆ ಜಾಗದಲ್ಲಿ ಐದು ಕೋರ್ಟ್ ಹಾಲ್, ವಕೀಲರ ಸಂಘದ ಕಚೇರಿ, ಗ್ರಂಥಾಲಯ ಸೇರಿದಂತೆ ಮುಂದಿನ 15 ರಿಂದ 20 ವರ್ಷದ ಭವಿಷ್ಯದಲ್ಲಿ
ಅನುಕೂಲವಾಗುವ ಹಾಗೆ ನೂತನ ಕಟ್ಟಡ ನಿರ್ಮಾಣ ಮಾಡಲು ರಾಜ್ಯ ಸರ್ಕಾರ 32 ಕೋಟಿ ರೂ. ಮಂಜೂರು ನೀಡಿದೆ.
ಶಿಥಿಲಾವಸ್ಥೆಯಲ್ಲಿ ಕಟ್ಟಡ: ಈಗಾಗಲೇ ಚಿಕ್ಕೋಡಿ ನಗರದಲ್ಲಿ ಏಳನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ, ಹಿರಿಯ ದಿವಾಣಿ ನ್ಯಾಯಾಲಯ, ಪ್ರಥಮ ದಿವಾಣಿ ನ್ಯಾಯಾಲಯ, ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಲಯ, ಎರಡನೆ ಹೆಚ್ಚುವರಿ ದಿವಾಣಿ
ನ್ಯಾಯಾಲಯ ಹೀಗೆ ಐದು ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತವೆ. ಎರಡರಿಂದ ಮೂರು ನ್ಯಾಯಾಲಯದ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆ ಕಂಡಿವೆ. ಕಳೆದ ನಾಲ್ಕೈದು ವರ್ಷದ ಹಿಂದೆ ನ್ಯಾಯಾಧೀಶರು ಕುಳಿತುಕೊಳ್ಳುವ ಆಸನದ ಮೇಲ್ಭಾಗದಲ್ಲಿ ಛಾವಣಿ ಕುಸಿತು ಕಂಡು ಭಾರಿ ಚರ್ಚೆಗೆ ಕಾರಣವಾಗಿತ್ತು. ಈಗ ಹೊಸ ಕಟ್ಟಡ ಕಾಮಗಾರಿ ಆರಂಭಿಸಲು ಸರ್ಕಾರ ಹಾಗೂ ನ್ಯಾಯಾಂಗ ಇಲಾಖೆ ಮನಸ್ಸು ಮಾಡಿದೆ. ಆದರೂ ಹೊಸ ಕಟ್ಟಡದ ಕಾಮಗಾರಿ ಆರಂಭವಾಗದಿರುವುದಕ್ಕೆ ನಮಗೂ ಬೇಸರ ಮೂಡಿಸಿದೆ ಎನ್ನುತ್ತಾರೆ ಚಿಕ್ಕೋಡಿ ವಕೀಲರ ಸಂಘದ ಅಧ್ಯಕ್ಷ ನಾಗೇಶ ಕಿವಡ.
ಸುಂದರ ಹಾಗೂ ಸುಸಜ್ಜಿತ ನ್ಯಾಯಾಲಯ ಕಟ್ಟಡ ನಿರ್ಮಿಸಲು ಸರ್ಕಾರ ಹಾಗೂ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಆದರೂ ಹೊಸ ಕಟ್ಟಡ ಕಾಮಗಾರಿ ಭಾಗ್ಯ ಆರಂಭವಾಗಿಲ್ಲ, ಕಾರಣ ತಿಳಿದಿಲ್ಲ.
– ಕಲ್ಮೇಶ ಕಿವಡ, ಉಪಾಧ್ಯಕ್ಷರು, ರಾಜ್ಯ ವಕೀಲರ ಪರಿಷತ್ ಬೆಂಗಳೂರು.
– ಮಹಾದೇವ ಪೂಜೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.