ಮಹಾ ಮಳೆಗೆ 6 ಸೇತುವೆ ಮುಳುಗಡೆ : ರಾಜ್ಯದ ಕೃಷ್ಣೆಗೆ 50 ಸಾವಿರ ಕ್ಯೂಸೆಕ್‌ ಒಳಹರಿವು


Team Udayavani, Aug 6, 2020, 2:45 PM IST

ಮಹಾ ಮಳೆಗೆ 6 ಸೇತುವೆ ಮುಳುಗಡೆ : ರಾಜ್ಯದ ಕೃಷ್ಣೆಗೆ 50 ಸಾವಿರ ಕ್ಯೂಸೆಕ್‌ ಒಳಹರಿವು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗ ಹಾಗೂ ರಾಜ್ಯದ ಗಡಿ ಭಾಗದಲ್ಲಿ ಕಳೆದ 24 ಗಂಟೆಯಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಕೃಷ್ಣಾ ನದಿ ಉಗಮಸ್ಥಾನ ವ್ಯಾಪ್ತಿಯಲ್ಲಿ ಒಂದೇ ರಾತ್ರಿ 304 ಮಿಮೀ ಮಳೆ ಸುರಿದಿದ್ದು, ಕೃಷ್ಣಾ ಮತ್ತು ಉಪನದಿಗಳ ನೀರಿನ ಮಟ್ಟದಲ್ಲಿ ಗಣನೀಯ ಹೆಚ್ಚಳವಾಗಿದೆ. ರಾಜ್ಯದ ಗಡಿ ಭಾಗದ ಆರು ಸೇತುವೆಗಳು ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ.

ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟದಲ್ಲಿ ಬುಧವಾರ ನಾಲ್ಕು ಅಡಿಯಷ್ಟು ಏರಿಕೆಯಾಗಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಮಂಗಳವಾರವಷ್ಟೇ ಮೂರು ನದಿಗಳಿಗೆ 14 ಸಾವಿರ ಕ್ಯೂಸೆಕ್‌ ನೀರು ಹರಿದು ಬರುತ್ತಿತ್ತು. ಬುಧವಾರ ಮಧ್ಯಾಹ್ನ ಹೊತ್ತಿಗೆ 50 ಸಾವಿರ ಕ್ಯೂಸೆಕ್‌ಗೂ ಜಾಸ್ತಿ ನೀರು ಹರಿದು ಬರುತ್ತಿದೆ. ರಾಜ್ಯದ ಗಡಿಗೆ ಹೊಂದಿಕೊಂಡಿರುವ ನೆರೆಯ ಮಹಾರಾಷ್ಟ್ರದ ಕೋಯ್ನಾ, ಮಹಾಬಳೇಶ್ವರ, ನವಜಾ, ಕಾಳಮ್ಮವಾಡಿ, ರಾಧಾನಗರಿ, ಪಾಟಗಾಂವ ಮತ್ತು ರಾಜ್ಯದ ಗಡಿ ಭಾಗದ ನಿಪ್ಪಾಣಿ, ಚಿಕ್ಕೋಡಿ, ರಾಯಬಾಗ ಹಾಗೂ ಕಾಗವಾಡ ಭಾಗದಲ್ಲಿ ಕಳೆದ ಎರಡು
ದಿನಗಳಿಂದ ಧಾರಾಕಾರ ಮಳೆ ಬೀಳುತ್ತಿದೆ. ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ಆರು ಸೇತುವೆ ಜಲಾವೃತ: ಚಿಕ್ಕೋಡಿ ಉಪವಿಭಾಗದ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗೆ ಅಡ್ಡಲಾಗಿ ಆರು
ಸೇತುವೆಗಳು ಮುಳುಗಡೆಗೊಂಡಿವೆ. ಕೃಷ್ಣಾ ನದಿಗೆ ಕಟ್ಟಿರುವ ಕಲ್ಲೋಳ-ಯಡೂರ, ದೂಧಗಂಗಾ ನದಿಯ ಕಾರದಗಾ-ಭೋಜ,
ಮಲಿಕವಾಡ-ದತ್ತವಾಡ, ವೇದಗಂಗಾ ನದಿಯ ಸಿದ್ನಾಳ-ಅಕ್ಕೋಳ, ಭೋಜವಾಡಿ-ಕುನ್ನೂರ, ಬಾರವಾಡ-ಕುನ್ನೂರ ಸೇತುವೆಗಳು
ಮುಳುಗಡೆಗೊಂಡು ರಸ್ತೆ ಸಂಚಾರ ಕಡಿತಗೊಂಡಿದೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ದಿಂದ ಕೃಷ್ಣಾ ನದಿಗೆ 37 ಸಾವಿರ
ಕ್ಯೂಸೆಕ್‌, ದೂಧಗಂಗಾ ಮತ್ತು ವೇದಗಂಗಾ ನದಿ ಮೂಲಕ 13 ಸಾವಿರ ಕ್ಯೂಸೆಕ್‌ ನೀರು ಹರಿದು ಚಿಕ್ಕೋಡಿ ತಾಲೂಕಿನ ಕಲ್ಲೋಳ ಹತ್ತಿರ ಕೂಡುತ್ತದೆ. ಹೀಗಾಗಿ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಹತ್ತಿರ ಕೃಷ್ಣಾ ನದಿಗೆ ಒಟ್ಟು 50 ಸಾವಿರ ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದೆ. ಜಮಖಂಡಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್‌ ಮೂಲಕ 27 ಸಾವಿರ ಕ್ಯೂಸೆಕ್‌ ನೀರನ್ನು ಆಲಮಟ್ಟಿಗೆ ಹರಿದು ಬಿಡಲಾಗುತ್ತಿದೆ ಎಂದು ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದ ಮಳೆ ವಿವರ: ಕೋಯ್ನಾ- 247 ಮಿಮೀ, ನವಜಾ-300 ಮಿಮೀ, ಮಹಾಬಲೇಶ್ವರ-304 ಮಿಮೀ,
ವಾರಣಾ-140 ಮಿಮೀ, ಸಾಂಗ್ಲೀ-30 ಮಿಮೀ, ಕೊಲ್ಲಾಪುರ 76 ಮಿಮೀ, ಕಾಳಮ್ಮವಾಡಿ-227 ಮಿಮೀ, ರಾಧಾನಗರ-281 ಮಿಮೀ,
ಪಾಟಗಾಂವ-105 ಮಿಮೀ ಮಳೆಯಾಗಿದೆ. ಚಿಕ್ಕೋಡಿ ತಾಲೂಕು: ಚಿಕ್ಕೋಡಿ-33.6 ಮಿಮೀ, ಅಂಕಲಿ-38.4 ಮಿಮೀ,
ನಾಗರಮುನ್ನೋಳ್ಳಿ-14.4 ಸದಲಗಾ-53 ಮಿಮೀ, ಜೋಡಟ್ಟಿ-13, ನಿಪ್ಪಾಣಿ-40 ಮಿಮೀ, ಸೌಂದಲಗಾ-50 ಮಿಮೀ ಮಳೆ
ಸುರಿದಿದೆ.

ಟಾಪ್ ನ್ಯೂಸ್

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

CM-ibrahim

HDK ವಿರುದ್ಧ ಜಮೀರ್‌ ಹೇಳಿಕೆ ತಪ್ಪು: ಸಿ.ಎಂ. ಇಬ್ರಾಹಿಂ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.