Watch: ಚಿಕ್ಕೋಡಿ- ಪಂಚಮಹಾಭೂತ ಲೋಕೋತ್ಸವದಲ್ಲಿ ಮಹಿಳೆಯರ ದಂಡು

ನೀರು, ವಾಯು, ಅಗ್ನಿ, ಆಕಾಶದ ಪಂಚಮಹಾಭೂತ ಚಿತ್ರಣ ವೀಕ್ಷಿಸಲು ಅನುಕೂಲ ಕಲ್ಪಿಸಲಾಗಿದೆ.

Team Udayavani, Feb 25, 2023, 12:58 PM IST

ಚಿಕ್ಕೋಡಿ: ಪಂಚಮಹಾಭೂತ ಲೋಕೋತ್ಸವದಲ್ಲಿ ಮಹಿಳೆಯರ ದಂಡು

ಚಿಕ್ಕೋಡಿ: ಕಣ್ಣು ಹಾಯಿಸಿದಷ್ಟು ಜನ ಜಂಗುಳಿ, ಎಲ್ಲಿ ನೋಡಿದರಲ್ಲಿ ವಾಹನಗಳ ಸಾಲು, ಕರ್ನಾಟಕ-ಮಹಾರಾಷ್ಟ್ರ ಬಾಂಧವ್ಯದ ಜೊತೆಗೆಯೇ ಇಡೀ ಭಾರತದ ಸಂತರು, ತಜ್ಞರು ಸಮಾಗಮದಲ್ಲಿ ಮಹಿಳೆಯರದ್ದೇ ಸಿಂಹಪಾಲು.

ಕರ್ನಾಟಕ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಕೊಲ್ಲಾಪೂರ ಜಿಲ್ಲೆಯ ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಮಠದಲ್ಲಿ ಹಮ್ಮಿಕೊಂಡಿರುವ ಬೃಹತ್‌ ಪಂಚಮಹಾಭೂತ ಲೋಕೋತ್ಸವದಲ್ಲಿ ಶುಕ್ರವಾರ ನಡೆದ ಮಹಿಳಾ ಲೋಕೋತ್ಸವದಲ್ಲಿ ಕಂಡು ಬಂದ ಚಿತ್ರಣವಿದು. ಉತ್ತರ ಕರ್ನಾಟಕ ಮತ್ತು ದಕ್ಷಿಣ ಮಹಾರಾಷ್ಟ್ರದ ಲಕ್ಷಾಂತರ ಮಹಿಳೆಯರು ಕನೇರಿ ಮಠದತ್ತ ಆಗಮಿಸಿ ಲೋಕೋತ್ಸವಕ್ಕೆ ಸಾಕ್ಷಿಯಾಗುತ್ತಿದ್ದಾರೆ.

ಇಡೀ ಕನೇರಿ ಮಠದ ಸುತ್ತಮುತ್ತ ಸುಮಾರು 600 ಎಕರೆ ಪ್ರದೇಶದಲ್ಲಿ ಭೂಮಿ, ನೀರು, ವಾಯು, ಅಗ್ನಿ, ಆಕಾಶದ ಚಿತ್ರಣ ಅನಾವರಣಗೊಂಡಿದೆ. ಐದು ಪಂಚಮಹಾಭೂತ ವೀಕ್ಷಣೆಗೆ ಜನ ಮುಗಿಬಿದ್ದಿದ್ದಾರೆ. ಶುಕ್ರವಾರ ಒಂದೇ ದಿನ ಅಂದಾಜು ನಾಲ್ಕೈದು ಲಕ್ಷದಷ್ಟು ಜನ ಸೇರಿದ್ದಾರೆ. ದಿನದಿಂದ ದಿನಕ್ಕೆ ಲೋಕೋತ್ಸವ ನೋಡಲು ಜನರ ಸಂಖ್ಯೆ ಹೆಚ್ಚುತ್ತಿದೆ. ನೆತ್ತಿ ಸುಡುವ ಬಿಸಿಲು ಲೆಕ್ಕಿಸದೇ ಜನರು ಉತ್ಸಾಹದಿಂದ ಲೋಕೋತ್ಸವ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಸಾವಯವ ಕೃಷಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಕೃಷಿ ದರ್ಶನದ ಚಿತ್ರಣ ರೈತಾಪಿ ವರ್ಗದ ಜನರನ್ನು ಆಕರ್ಷಿಸುತ್ತಿದೆ. ಬೃಹತ್‌ ಕಾರ್ಯಕ್ರಮ ಯಾವ ಮೈದಾನದಲ್ಲಿ ನಡೆದಿಲ್ಲ, ಇದೊಂದು ಕೃಷಿ ಭೂಮಿಯಲ್ಲಿ ನಡೆದಿರುವ ವಿಶೇಷ. ಸಾವಯವ ಪದ್ಧತಿಯಲ್ಲಿ ಬೆಳೆದಿರುವ ವಿವಿಧ ಜಾತಿ ಗಿಡಗಳ ಸಮ್ಮುಖದಲ್ಲಿ ಲೋಕೋತ್ಸವದ ಮಳಿಗೆ ಇವೆ.ತಂಪಾದ ಗಿಡಗಳ ನೆರಳಿನ ಮಧ್ಯದಲ್ಲಿ ಭೂಮಿ, ನೀರು, ವಾಯು, ಅಗ್ನಿ, ಆಕಾಶದ ಪಂಚಮಹಾಭೂತ ಚಿತ್ರಣ ವೀಕ್ಷಿಸಲು ಅನುಕೂಲ ಕಲ್ಪಿಸಲಾಗಿದೆ.

ಸಾವಯವ ಅಡುಗೆ ತಯಾರಿ: ಪಂಚಮಹಾಭೂತ ಲೋಕೋತ್ಸವಕ್ಕೆ ಆಗಮಿಸುವ ಲಕ್ಷೋಪಲಕ್ಷ ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಿದ್ದಾರೆ. ಸಾವಯವ ಪದ್ಧತಿಯಲ್ಲಿಯೇ ಬೆಳೆದ ತರಕಾರಿಯಿಂದ ಅಡುಗೆ ಸಿದ್ಧವಾಗುತ್ತಿದೆ. ನಾಡಿನಾದ್ಯಂತ ಭಕ್ತರು ಕೊಟ್ಟ ರೊಟ್ಟಿ, ಚಪಾತಿ ಹೊರತುಪಡಿಸಿ ಉಳಿದೆಲ್ಲ ಪದಾರ್ಥಗಳು ಭೋಜನ ಮಳಿಗೆಯಲ್ಲಿಯೇ ಸಿದ್ಧಪಡಿಸಲಾಗುತ್ತಿದೆ.

ಗಣ್ಯರು, ಸಂತರು, ಸಾರ್ವಜನಿಕರಿಗೆ ಪ್ರತ್ಯೇಕ ಊಟದ ಮಳಿಗೆಯಲ್ಲಿ ಭೋಜನದ ವ್ಯವಸ್ಥೆ ಮಾಡಿದ್ದಾರೆ. ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರೂ ಶೇಂಗಾ ಹೋಳಿಗೆ, ಮಾದಲಿ, ಜೋಳದ ರೊಟ್ಟಿ, ಚಪಾತಿ, ಎರಡರಿಂದ ಮೂರು ಪಲ್ಯ, ಮಜ್ಜಿಗೆ, ಮೊಸರು, ಅನ್ನ-ಸಾಂಬಾರಿನ ಭೋಜನದ ಸವಿ ಸವಿಯುತ್ತಿದ್ದಾರೆ.

ಯಕ್ಸಂಬಾ ಜೊಲ್ಲೆ ಗ್ರೂಪ್‌ ಸೇವೆ: ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದ ಜೊಲ್ಲೆ ಗ್ರುಪ್‌ನ ಸುಮಾರು 400 ಸಿಬ್ಬಂದಿ ಪಂಚಮಹಾಭೂತ ಲೋಕೋತ್ಸವದಲ್ಲಿ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಡೀ ಲೋಕೋತ್ಸವದ ಭೋಜನ ವ್ಯವಸ್ಥೆಯಲ್ಲಿ ಜೊಲ್ಲೆ ಗ್ರುಪ್‌ ಸಿಬ್ಬಂದಿ ಮುಂಚೂಣಿಯಲ್ಲಿ ನಿಂತು ಕೆಲಸ ನಿರ್ವಹಿಸುತ್ತಿದ್ದಾರೆ.

ಪಂಚಮಹಾಭೂತ ಲೋಕೋತ್ಸವ ಜಾತ್ರೆಯಾಗದೇ ಇದೊಂದು ಸಾಮಾಜಿಕ ಹೊಣೆಗಾರಿಕೆ ಆಗಬೇಕು. ಭೂಮಿ, ನೀರು, ವಾಯು, ಅಗ್ನಿ, ಆಕಾಶ ಉಳಿಸುವತ್ತ ಯುವಕರು ಚಿಂತಿಸಬೇಕಿದೆ. ಪರಿಸರ ಉಳಿದರೆ ಮಾತ್ರ ಜೀವನ ಎನ್ನುವುದು ಜನರಿಗೆ ತಿಳಿಸುವ ಉದ್ದೇಶದಿಂದ ಪಂಚಮಹಾಭೂತ ಲೋಕೋತ್ಸವ ಹಮ್ಮಿಕೊಳ್ಳಲಾಗಿದೆ.
ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಕನೇರಿ

ಕನೇರಿ ಕಾಡಸಿದ್ದೇಶ್ವರ ಮಠದಲ್ಲಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನಮ್ಮ ಇಡೀ ಪೃಥ್ವಿ, ದೇಹ ಪಂಚಮಹಾಭೂತದಿಂದ ನಿರ್ಮಾಣವಾಗಿದ್ದು, ಐದು ತತ್ವಗಳಿಂದ ಕೂಡಿದ ಈ ಪ್ರಕೃತಿ ಉಳಿಸಿಕೊಂಡು ಹೋಗುವುದು ಮುಖ್ಯ. 600 ಎಕರೆ ಪ್ರದೇಶದಲ್ಲಿ ಐದು ತತ್ವಗಳ ಪ್ರದರ್ಶನ ನಡೆಯುತ್ತಿದೆ. ದಿನದಿಂದ ದಿನಕ್ಕೆ 5 ಲಕ್ಷಕ್ಕಿಂತ ಹೆಚ್ಚಿನ ಜನ ವೀಕ್ಷಣೆ ಮಾಡುತ್ತಿದ್ದಾರೆ. ಮುಂದಿನ ಪೀಳಿಗೆಗೆ ಒಳ್ಳೆಯ ಪರಿಸರ ಕೊಡಬೇಕೆನ್ನುವುದು ಇದರ ಉದ್ದೇಶ. ಈ ಪಂಚಮಹಾಭೂತ ಲೋಕೋತ್ಸವ ಸುವರ್ಣಾಕ್ಷರದಲ್ಲಿ ಬರೆದಿಡುವ ಕಾರ್ಯಕ್ರಮವಾಗಿದೆ.
ಶಶಿಕಲಾ ಜೊಲ್ಲೆ, ಸಚಿವೆ

ಮಹಾದೇವ ಪೂಜೇರಿ

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.