ರಸ್ತೆ ದಾಟಲು ಮಕ್ಕಳ ಹರಸಾಹಸ
ನಿತ್ಯ ರಸ್ತೆಗೆ ಅಡ್ಡಲಾಗಿ ಹಗ್ಗ ಹಿಡಿಯುವ ಶಿಕ್ಷಕರು ; ಕಾರಟಗಿಯಲ್ಲಿ ಉಲ್ಬಣಗೊಳ್ಳುತ್ತಿದೆ ಸಂಚಾರ ದಟ್ಟಣೆ
Team Udayavani, Jun 27, 2022, 12:51 PM IST
ಕಾರಟಗಿ: ಪಟ್ಟಣದ ಹಳೆ ಬಸ್ ನಿಲ್ದಾಣದ ಉನ್ನತೀಕರಿಸಿದ ಸರಕಾರಿ ಶಾಲೆಯ ಶಿಕ್ಷಕರಿಗೆ ವಿದ್ಯಾರ್ಥಿಗಳಿಗೆ ರಸ್ತೆ ದಾಟಿಸುವ ಅನಿವಾರ್ಯತೆ ಬಂದೊದಗಿದೆ.
ಪಟ್ಟಣ ತಾಲೂಕು ಕೇಂದ್ರವಾಗುತ್ತಿದ್ದಂತೆ ಜನಸಂಖ್ಯೆ ಕೂಡ ಹೆಚ್ಚುತ್ತಿದ್ದು, ಅದರೊಂದಿಗೆ ವಾಹನ ದಟ್ಟಣೆ ಕೂಡ ಹೆಚ್ಚುತ್ತಿದೆ. ಹಾಗೆಯೆ ಖಾಸಗಿ ಶಾಲೆಗಳ ಅಬ್ಬರ ಒಂದೆಡೆಯಾದರೆ ಖಾಸಗಿ ಶಾಲೆಯ ವಾಹನಗಳ ಓಡಾಟವೂ ಮೀತಿ ಮೀರಿದೆ. ಇದೆಲ್ಲದರ ಪರಿಣಾಮ ನಿತ್ಯ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲಾಗದೇ ಪೊಲೀಸ್ ಇಲಾಖೆ ಸುಮ್ಮನಾಗಿದೆ.
ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಬೈಕ್‌ಗಳು, ಬಸ್, ಲಾರಿ ಟ್ಯಾಕ್ಸಿ, ಟಾಂಟಂ, ಆಟೋ ಸೇರಿದಂತೆ ಹಲವಾರು ವಾಹನಗಳ ಓಡಾಟದಿಂದ ಟ್ರಾಫಿಕ್ ಸಮಸ್ಯೆ ಉಲ್ಬಗೊಳ್ಳುತ್ತಿದೆ. ಹೀಗಾಗಿ ಶಾಲಾ ಮಕ್ಕಳು ರಸ್ತೆ ದಾಟಲು ಹರಸಾಹಸ ಪಡಬೇಕಾಗಿದೆ. ಇದನ್ನರಿತ ಹಳೆ ಬಸ್ ನಿಲ್ದಾಣದ ಉನ್ನತೀಕರಿಸಿದ ಶಾಲಾ ಶಿಕ್ಷಕರು ಮಕ್ಕಳನ್ನು ಸರದಿಯ ಮೂಲಕ ನಿಲ್ಲಿಸಿ ಎರಡು ಬದಿಗಳಲ್ಲಿ ಹಗ್ಗ ಹಿಡಿದುಕೊಂಡು ಮಕ್ಕಳನ್ನು ರಸ್ತೆ ದಾಟಿಸುವ ಕೆಲಸ ಮಾಡುತ್ತಿದ್ದಾರೆ.
ಹಂಪ್ಸ್ ಗಳಿಲ್ಲ: ರಸ್ತೆ ನಿರ್ಮಾಣ ಮಾಡುವಾಗ ಅವಶ್ಯವಿದ್ದೆಡೆ ಹಂಪ್ಸ್‌ಗಳನ್ನು ಹಾಕಿಲ್ಲ. ಝಿಬ್ರಾ ಕ್ರಾಸಿಂಗ್ ಕೂಡ ಹಾಕಿಲ್ಲ. ಹೀಗಾಗಿ ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ರಸ್ತೆ ದಾಟಲು ಪಡುವ ಕಷ್ಟ ಅಷ್ಟಿಷ್ಟಲ್ಲ. ಪೊಲೀಸ್ ಇಲಾಖೆಗೆ ಹಲವಾರು ಬಾರಿ ಟ್ರಾಫಿಕ್ ನಿಯಂತ್ರಣಕ್ಕೆ ಅಗತ್ಯಕ್ರಮ ಕೈಗೊಳ್ಳುವಂತೆ ಹಲಬಾರು ಬಾರಿ ಮನವಿ ಮಾಡಿದರೂ ಇದುವರೆಗೂ ಯಾವುದೇ ಅಗತ್ಯ ಕ್ರಮ ಕೈಗೊಂಡಿಲ್ಲ. ಕೆಲವೊಮ್ಮೆ ಅಪಘಾತಗಳು ನಡೆದು ಜೀವಹಾನಿ ಸಂಭವಿಸಿವೆ. ಆದರೂ ಕಠಿಣಕ್ರಮಕ್ಕೆ ಇಲಾಖೆ ಮುಂದಾಗಿಲ್ಲ ಎನ್ನುವುದು ಪ್ರಜ್ಞಾವಂತರ ಆರೋಪ.
ಪಟ್ಟಣದ ರಾಜ್ಯ ಹೆದ್ದಾರಿ ಸೇರಿದಂತೆ ನವಲಿ ರಸ್ತೆ, ಬೂದಗುಂಪ ರಸ್ತೆಗಳ ಅಕ್ಕಪಕ್ಕದಲ್ಲಿ ತಳ್ಳು ಬಂಡಿ, ಗೂಡಂಗಡಿ, ಡಬ್ಟಾ ಅಂಗಡಿಗಳ ವ್ಯಾಪಾರಸ್ಥರು ರಸ್ತೆಯ ಬದಿಯಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಅಲ್ಲದೆ ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ಸ್ಥಳವಿಲ್ಲದೇ ಎಲ್ಲೆಂದರಲ್ಲಿ ವಾಹನಗಳ ನಿಲುಗಡೆಯಾಗಿ ನಿತ್ಯ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಟ್ರಾಫಿಕ್ ಸಮಸ್ಯೆಯಾಗುತ್ತದೆ. ಪುರಸಭೆ, ಪೊಲೀಸ್ ಇಲಾಖೆ ಇದರ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಪಟ್ಟಣದ ಜನತೆ ಆಗ್ರಹಿಸಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಬಂದ ನಂತರ ಶಾಲೆಗಳು ಆರಂಭಗೊಂಡು ಜನರ ಓಡಾಟವೂ ಹೆಚ್ಚಿದೆ. ವಾಹನಗಳ ಒಡಾಟವು ಹೆಚ್ಚಿದೆ. ಹೀಗಾಗಿ ರಾಜ್ಯ ಹೆದ್ದಾರಿಯಲ್ಲಿ ಮಕ್ಕಳು ಮಹಿಳೆಯರು ಓಡಾಡುವುದು ದುಸ್ತರವಾಗಿದ್ದು ಮಕ್ಕಳ ಹಿತದೃಷ್ಟಿಯಿಂದ ನಿತ್ಯ ಮಕ್ಕಳನ್ನು ರಸ್ತೆ ದಾಟಿಸುವ ಕೆಲಸ ಮಾಡುತ್ತಿದ್ದೇವೆ. –ಶಾಮಸುಂದರ್ ಇಂಜನಿ, ಶಾಲೆಯ ಮುಖ್ಯಗುರು
ಕಾರಟಗಿ ಮತ್ತು ಕನಕಗಿರಿ ನೂತನ ತಾಲೂಕುಗಳ ಪೊಲೀಸ್ ಠಾಣೆಗಳಿಗೆ ಸಿಬ್ಬಂದಿ ಸಂಖ್ಯೆ ಹೆಚ್ಚಿಸಲಾಗಿದೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. ಶೀಘ್ರದಲ್ಲೇ ಸಿಬ್ಬಂದಿ ನೇಮಕವಾಗುತ್ತದೆ. ಕಾರಟಗಿ ಪಟ್ಟಣದ ಟ್ರಾಫಿಕ್ ಸಮಸ್ಯೆಯನ್ನು ಸೋಮವಾರದಿಂದಲೇ ನಿಯಂತ್ರಣಕ್ಕೆಮುಂದಾಗುವಂತೆ ಸೂಚಿಸುತ್ತೇನೆ. –ರುದ್ರೇಶ ಉಜ್ಜೀನಕೊಪ್ಪ,ಡಿವೈಎಸ್‌ಪಿ
ಕಾರಟಗಿ ಸರಕಾರಿ ಶಾಲೆ ಮುಂಭಾಗದ ಅಂಗಡಿ ಮುಂಗಟ್ಟುಗಳು, ತಳ್ಳು ಬಂಡಿಗಳಿಂದ ರಸ್ತೆ ಅತಿಕ್ರಮಣವಾಗಿ ಪಾದಚಾರಿ ರಸ್ತೆಯಿಲ್ಲದೇ ವಿದ್ಯಾರ್ಥಿಗಳು ರಸ್ತೆ ದಾಟಲಾಗದೇ ತೊಂದರೆ ಅನುಭವಿಸುತ್ತಿದ್ದಾರೆ. ಈ ಕುರಿತು ಪುರಸಭೆ ಹಾಗೂ ಪೊಲೀಸ್ ಇಲಾಖೆಗೆ ಪತ್ರ ಬರೆದು ಪಾದಚಾರಿ ರಸ್ತೆ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡುವುಂತೆ ಹಾಗೂ ಸಂಚಾರ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಪತ್ರ ಬರೆಯುತ್ತೆನೆ. –ಸೋಮಶೇಖರಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ
ದಿಗಂಬರ ಎನ್. ಕುರ್ಡೆಕರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.