Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
ವಿದ್ಯಾರ್ಥಿಗಳಿಗೆ 20 ಸಾವಿರ ಪೆನ್ ವಿತರಿಸಿ ಶಾಸಕ ಯಶ್‌ಪಾಲ್
Team Udayavani, Nov 15, 2024, 1:32 AM IST
ಮಲ್ಪೆ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಕರಾವಳಿ ಜನತೆಗೆ ಸದಾ ಹೆಮ್ಮೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ವಿಕಸಿತ ಭಾರತ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುವ ಮೂಲಕ ವಿಶ್ವಗುರು ಭಾರತದ ಕನಸು ನನಸಾಗಿಸುವ ಸಂಕಲ್ಪವನ್ನು ನಾವೆಲ್ಲರೂ ಮಾಡೋಣ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.
ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ವೆಚ್ಚದಲ್ಲಿ ಸುಮಾರು 20 ಸಾವಿರ ಪೆನ್ ವಿತರಣೆ ಕಾರ್ಯಕ್ರಮಕ್ಕೆ ತೆಂಕನಿಡಿಯೂರು ಗ್ರಾಮದ ಕೆಳಾರ್ಕಳಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
ಓರ್ವ ಶಾಸಕನಾಗಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯಪ್ರವೃತ್ತನಾಗಿದ್ದು, ಕ್ಷೇತ್ರದ ಜನತೆಯ ಸಹಕಾರದಿಂದ ಉಡುಪಿ ಕ್ಷೇತ್ರವನ್ನು ಮಾದರಿಯಾಗಿ ರೂಪಿಸಲು ಬದ್ಧ ಎಂದರು.
ವಿವಿಧ ಶಾಲೆ ಹಾಗೂ ಕಾಲೇಜುಗಳಿಗೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ತೆರಳಿ ವಿದ್ಯಾರ್ಥಿಗಳಿಗೆ ಪೆನ್ ವಿತರಿಸಿ ಶುಭ ಹಾರೈಸಿದರು.
ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ತೆಂಕನಿಡಿಯೂರು ಗ್ರಾ. ಪಂ. ಉಪಾಧ್ಯಕ್ಷ ಅರುಣ್ ಜತ್ತನ್, ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ, ಗಾಯತ್ರಿ, ತಾ. ಪಂ. ಮಾಜಿ ಸದಸ್ಯ ಶರತ್ ಬೈಲಕೆರೆ, ಗ್ರಾಮ ಪಂಚಾಯತ್ ಸದಸ್ಯರಾದ ವಿನೋದ್ ಸುವರ್ಣ, ಸತೀಶ್ ಪೂಜಾರಿ, ಮಾಲಿನಿ, ಪುಷ್ಪ ಉಮೇಶ್, ಪ್ರಮುಖರಾದ ವಿಜಯ ಪ್ರಕಾಶ್, ಕಿರಣ್ ಪಿಂಟೋ, ಕಾವೇರಿ ಗಾಣಿಗ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.