ಚಿಲಿ: ಸೋಂಕು ಮುಕ್ತ ಪ್ರಮಾಣ ಪತ್ರ ವಿವಾದ
Team Udayavani, Apr 28, 2020, 4:59 PM IST
ಮಣಿಪಾಲ: ಕೆಲ ವಾರಗಳಿಂದ ಕೋವಿಡ್-19 ವಿರುದ್ಧ ಸೆಣಸಾಡಿ ಚೇತರಿಸಿಕೊಂಡ ಕೆಲ ದೇಶಗಳು ಸಹಜ ಸ್ಥಿತಿಯತ್ತ ಮರುಳುತ್ತಿವೆ. ಅಲ್ಲದೇ ನಿಧಾನವಾಗಿ ಒಂದೊಂದೇ ನಿಯಮಗಳನ್ನು ಸಡಿಲಗೊಳಿಸುವ ಮೂಲಕ ದೈನಂದಿನ ಚಟುವಟಿಕೆಗಳಿಗೆ ತೆರೆದುಕೊಳ್ಳುತ್ತಿದೆ. ಇದೀಗ ದಕ್ಷಿಣ ಅಮೆರಿಕಾ ಭಾಗದಲ್ಲಿರುವ ಚಿಲಿ ಸರಕಾರವೂ ನಿಯಮಗಳ ಸಡಿಲಿಕೆಯತ್ತ ಮುಖ ಮಾಡಿದೆ.
ಜತೆಗೆ ಸೋಂಕು ಮುಕ್ತ ಎಂಬ ಪ್ರಮಾಣ ಪತ್ರವನ್ನೂ ನೀಡಲು ಆರಂಭಿಸಿದೆ. ಕೋವಿಡ್-19 ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡ ಜನರಿಗೆ ಈ ಪ್ರಮಾಣ ಪತ್ರವನ್ನು ನೀಡಲಿದ್ದು, ಅವರು ಹಿಂದಿನಂತೆ ಕೆಲಸಕ್ಕೆ ಮರಳಲು ಅವಕಾಶ ಮಾಡುವುದಾಗಿ ಅಲ್ಲಿನ ಆರೋಗ್ಯ ಸಚಿವರು ತಿಳಿಸಿದ್ದಾರೆ.
ಸೋಂಕಿಗೆ ಒಳಗಾಗಿ ಚೇತರಿಸಿಕೊಂಡ ಜನರು ಮತ್ತೆ ಸೋಂಕಿಗೆ ತುತ್ತಾಗುವುದಿಲ್ಲ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಹಾಗಾಗಿ ಸೋಂಕು ಮುಕ್ತ ಎಂದು ಪ್ರಮಾಣ ಪತ್ರ ಕೊಡುವುದು ಅಸಮಂಜಸ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲೂಎಚ್‌ಒ) ಅಭಿಪ್ರಾಯ ಪಟ್ಟಿತ್ತು. ಜತೆಗೆ ಎಲ್ಲ ದೇಶಗಳಿಗೂ ಅಂಥದೊಂದು ಪದ್ಧತಿಯನ್ನು ಅನುಸರಿಸಬೇಡಿ ಎಂದು ಸಲಹೆ ನೀಡಿತ್ತು.ಈ ಸಲಹೆಯನ್ನು ಗಂಭೀರವಾಗಿ ಪರಿಗಣಿಸದ ಚಿಲಿ ಸರಕಾರ, ಪ್ರಮಾಣ ಪತ್ರ ನೀಡುತ್ತಿರುವುದು ಟೀಕೆಗೆ ಗುರಿಯಾಗಿದೆ. ಸೋಂಕು ಮುಕ್ತ ಪ್ರಮಾಣ ಪತ್ರಗಳನ್ನು ನೀಡುವುದರಿಂದ ಮತ್ತಷ್ಟು ದುಷ್ಪರಿಣಾಮಗಳು ಎದುರಾಗಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಅಪಾಯಕ್ಕೆ ತಳ್ಳುತ್ತಿದೆ ಎಂಬ ವಾದ ಕೇಳಿ ಬಂದಿದೆ.
ಆದರೆ ಈ ಟೀಕೆಯನ್ನು ತಳ್ಳಿಹಾಕಿರುವ ಸರಕಾರವು, “ಸೋಂಕಿನಿಂದ ಅನಾರೋಗ್ಯಕ್ಕೆ ತುತ್ತಾದ ವ್ಯಕ್ತಿ ಮತ್ತೆ ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಕಡಿಮೆ ಎಂಬುದು ನಮಗೆ ತಿಳಿದಿದೆ. ಜನರಲ್ಲಿ ಕೋವಿಡ್ -19 ಅನ್ನು ಮಣಿಸುವ ಶಕ್ತಿ ಇದೆಯೇ ಎಂಬುದನ್ನು ಪ್ರಮಾಣಪತ್ರ ಖಚಿತಪಡಿಸುವುದಿಲ್ಲ.
ಬದಲಾಗಿ ಅವರು ರೋಗದಿಂದ ಚೇತರಿಸಿಕೊಂಡಿದ್ದು, ಕ್ವಾರಂಟೇನ್ ಅವಧಿಯನ್ನು ಪೂರ್ಣಗೊಳಿಸಿದ್ದಾರೆ ಎಂಬುದನ್ನು ಮಾತ್ರ ಖಚಿತಪಡಿಸಲಿದೆ ಎಂದು ತಿಳಿಸಿದ್ದಾರೆ.
ಚಿಲಿಯಲ್ಲಿ ಇದುವರೆಗೆ 13 000 ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 189 ಮಂದಿ ಸಾವಿಗೀಡಾಗಿದ್ದಾರೆ. ಸುಮಾರು 7 ಸಾವಿರದಷ್ಟು ಮಂದಿ ಗುಣಮುಖರಾಗಿದ್ದಾರೆ. ಮಾರ್ಚ್ 20 ರ ಬಳಿಕ ಸೋಂಕು ಪ್ರಕರಣ ಪತ್ತೆಯಾಗುವ ಸಂಖ್ಯೆ ಹೆಚ್ಚುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.