ಚೀನದಲ್ಲಿ ಮತ್ತೆ 11 ಹೊಸ ಸೋಂಕಿತರು ಪತ್ತೆ!
Team Udayavani, Jun 8, 2020, 1:24 PM IST
ಬೀಜಿಂಗ್: ಚೀನದಲ್ಲಿ ಕೋವಿಡ್ ಹಾವಳಿ ಕಡಿಮೆಯಾಗಿ ಎಲ್ಲವರೂ ಸರಿಯಾಯಿತು ಎನ್ನುತ್ತಿರುವಾಗಲೇ ಮತ್ತೆ ಹೊಸ ಕೇಸುಗಳು ಪತ್ತೆಯಾಗತೊಡಗಿವೆ. ಒಟ್ಟು 11 ಹೊಸ ಪ್ರಕರಣಗಳು ಕಂಡು ಬಂದಿದ್ದು, ಇವುಗಳಲ್ಲಿ 5 ಪ್ರಕರಣಗಳಲ್ಲಿ ಜನರಿಗೆ ಕೋವಿಡ್ ರೀತಿಯ ಲಕ್ಷಣಗಳು ಕಾಣಿಸಿಕೊಂಡಿವೆ. ಇದರೊಂದಿಗೆ ದೇಶದ ಕೋವಿಡ್ ಪೀಡಿತರ ಸಂಖ್ಯೆ 83036 ಆಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಚೀನದ ರಾಷ್ಟ್ರೀಯ ಆರೋಗ್ಯ ಆಯೋಗದ ಪ್ರಕಾರ, ಶನಿವಾರ ಅಲ್ಲಿ ಯಾವುದೇ ಕೋವಿಡ್ ಸಂಬಂಧಿ ಸಾವುಗಳು ವರದಿಯಾಗಿಲ್ಲ.
ಸದ್ಯ ಹೊಸ ಪ್ರಕರಣಗಳು ಎಂದು ಪರಿಗಣಿಸಲಾಗಿರುವ 236 ಪ್ರಕರಣಗಳು ಕೋವಿಡ್ ರೀತಿ ರೋಗ ಲಕ್ಷಣಗಳನ್ನು ಹೊಂದಿವೆ. ಇದರಲ್ಲಿ 154 ಪ್ರಕರಣಗಳು ವುಹಾನ್ ಪ್ರದೇಶದಿಂದಲೇ ವರದಿಯಾಗಿವೆ. ಇವರೆಲ್ಲರನ್ನು ಕ್ವಾರಂಟೈನ್‌ನಲ್ಲಿಡಲಾಗಿದ್ದು, ನಿಗಾ ವಹಿಸಲಾಗಿದೆ.
ಸದ್ಯ ವಿವಿಧ ಆಸ್ಪತ್ರೆಗಳಲ್ಲಿ ಕೋವಿಡ್ ಕುರಿತಾಗಿ ಇನ್ನೂ 70 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಸ ಪ್ರಕರಣಗಳು ಹೇಗೆ ಸೃಷ್ಟಿಯಾದವು? ಹೊರಗಿನಿಂದ ಬಂದವೇ ಅಥವಾ ಕಳೆದ ಬಾರಿಯಂತೆ ಇಲ್ಲೇ ಉದ್ಭವವಾಗಿ ಹರಡುತ್ತಿವೆಯೇ ಎಂಬುದನ್ನು ತಿಳಿಯಲು ಚೀನ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ.
ಅಲ್ಲದೇ ಸೋಂಕು ಪೀಡಿತರ ಪ್ರಥಮ ಮತ್ತು ದ್ವಿತೀಯ, ತೃತೀಯ ಹಂತದ ಸಂಪರ್ಕಗಳನ್ನು ಕಲೆ ಹಾಕಲಾಗುತ್ತಿದೆ. ಕೋವಿಡ್ ಸೋಂಕು ಹೆಚ್ಚಾದರೆ ಇವುಗಳ ಮಾಹಿತಿಗಳನ್ನೂ ಕಲೆ ಹಾಕುವುದು ಕಷ್ಟವಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ.
ಇನ್ನು ದೇಶದಲ್ಲಿ ಈವರೆಗೆ 78332 ಮಂದಿ ಕೋವಿಡ್‌ನಿಂದ ಗುಣಮುಖರಾಗಿ ಮನೆಗೆ ಹೋಗಿದ್ದಾರೆ. ಒಟ್ಟು 4634 ಮಂದಿ ಮೃತಪಟ್ಟಿದ್ದಾರೆ.
ಆದರೆ ಸದ್ಯ ಹೊಸ ಪ್ರಕರಣಗಳು ಪತ್ತೆಯಾಗುತ್ತಿರುವುದು ಮತ್ತೆ ಕೋವಿಡ್ ಹರಡಲಿದೆಯೇ? ಅಥವಾ ಈಗಾಗಲೇ ಇದು ಹರಡಿದೆಯೇ ಎಂಬುದನ್ನು ತಿಳಿಯಲು ಸಾಧ್ಯವಾಗಿಲ್ಲ. ಈ ಸಂಶಯದ ಕಾರಣ ವುಹಾನ್‌ನಲ್ಲಿ ಈಗಾಗಲೇ ಚೀನ ಸರಕಾರ 1 ಕೋಟಿಗೂ ಹೆಚ್ಚಿನ ಮಂದಿಗೆ ಕಡ್ಡಾಯ ಕೋವಿಡ್ ಪರೀಕ್ಷೆಯನ್ನು ಮಾಡಿಸಿದೆ. ಜತೆಗೆ ಕಡ್ಡಾಯ ಸುರಕ್ಷತೆ ಕ್ರಮಗಳು, ಹಾಟ್‌ಸ್ಪಾಟ್‌ಗಳಲ್ಲಿ ಜನಸಂದಣಿ ಸೇರುವುದನ್ನು ನಿಷೇಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.