China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್‌ನಲ್ಲಿ ಏಳು ಮಾದರಿ ಪಾಸಿಟಿವ್
Team Udayavani, Dec 8, 2023, 12:55 AM IST
ಹೊಸದಿಲ್ಲಿ, ಡಿ. 7: ಚೀನದಲ್ಲಿ ಕೆಲವು ದಿನಗಳ ಹಿಂದೆ ಸದ್ದು ಮಾಡಿದ್ದ ನ್ಯುಮೋ ನಿಯಾ ಮಾದರಿಯ ಸೋಂಕು ದೇಶವನ್ನು ಪ್ರವೇಶಿಸಿದೆಯೇ? ಹೊಸದಿಲ್ಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐ ಎಂಎಸ್)ಗೆ ಬಂದಿದ್ದ ಏಳು ಮಾದರಿಗಳು ಮೈಕೋಪ್ಲಾಸ್ಮಾ ನ್ಯುಮೋನಿಯಾ ಬ್ಯಾಕ್ಟೀರಿಯಾ ಹೊಂದಿರುವುದು ಕಂಡುಬಂದಿರುವುದರಿಂದ ಈ ಆತಂಕ ಮೂಡಿದೆ.
ಪ್ರಸಕ್ತ ವರ್ಷದ ಎಪ್ರಿಲ್ ಮತ್ತು ಸೆಪ್ಟಂಬರ್ ನಲ್ಲಿ ಹೊಸದಿಲ್ಲಿಯ ಏಮ್ಸ್‌ನಲ್ಲಿ ಈ ಪರೀಕ್ಷಾ ವರದಿಗಳು ಪಾಸಿಟಿವ್ ಆಗಿದ್ದವು. ಹೊಸದಿಲ್ಲಿ ಏಮ್ಸ್‌ನಲ್ಲಿ ಒಟ್ಟು ಆರು ತಿಂಗಳುಗಳ ಅವಧಿ ಯಲ್ಲಿ 1.49 ಲಕ್ಷ ಮಂದಿಯ ಮಾದರಿಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಈ ಪೈಕಿ ಏಳು ಪಾಸಿಟಿವ್ ಆಗಿವೆ. 6 ಪ್ರಕರಣಗಳಲ್ಲಿ ಐಜಿಎಂ ಎಲಿಸಾ ಟೆಸ್ಟ್ ಮೂಲಕ ವೈರಾಣು ಪತ್ತೆಹಚ್ಚಲಾಗಿದ್ದರೆ, ಮತ್ತೂಂದು ಪ್ರಕರಣವನ್ನು ಪಿಸಿಆರ್ ವಿಧಾನದ ಮೂಲಕ ದೃಢಪಡಿಸ ಲಾಗಿದೆ ಎಂದು “ದ ಲ್ಯಾನ್ಸೆಟ್’ನ ಸಂಶೋಧನ ಲೇಖನದಲ್ಲಿ ಉಲ್ಲೇಖೀಸಲಾಗಿದೆ.
ಸಂಬಂಧವೇ ಇಲ್ಲ
ಆದರೆ, ಈ 7 ಪ್ರಕರಣಗಳಿಗೂ ಚೀನದ ನ್ಯುಮೋನಿಯಾ ಮಾದರಿಯ ಪ್ರಕರಣ ಗಳಿಗೂ ಸಂಬಂಧವೇ ಇಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸ್ಪಷ್ಟಪಡಿಸಿದೆ. ಆರು ತಿಂಗಳ ಸು ದೀರ್ಘ ಅವ ಧಿ ಯಲ್ಲಿ ಕಂಡುಬಂದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿವ್ ಆಗಿದೆ. ಹೀಗಾಗಿ ದೇಶವಾಸಿಗಳು ಭೀತಿಗೆ ಒಳಗಾಗಬೇಕಾಗುವ ಅಗತ್ಯ ಇಲ್ಲ ಎಂದು ಕೇಂದ್ರ ಸರಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.