ಚೀನದಲ್ಲಿ ಇನ್ನು ದಂಪತಿ 3 ಮಕ್ಕಳನ್ನು ಹೊಂದಲು ಅನುಮತಿ!
Team Udayavani, Jun 1, 2021, 7:30 AM IST
ಬೀಜಿಂಗ್: ಜಗತ್ತಿನಲ್ಲಿ ಅತ್ಯಂತ ಹೆಚ್ಚು ಜನಸಂಖ್ಯೆ ಇರುವ ರಾಷ್ಟ್ರ ಚೀನದಲ್ಲಿ ಇನ್ನು ದಂಪತಿ ಮೂರು ಮಕ್ಕಳನ್ನು ಹೊಂದಬಹುದು. ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನೇತೃತ್ವದಲ್ಲಿ ನಡೆದ ಚೀನ ಕಮ್ಯೂನಿಸ್ಟ್ ಪಕ್ಷದ ಪಾಲಿಟ್‌ಬ್ಯೂರೋ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸರಕಾರಿ ಮಾಧ್ಯಮ ಸಂಸ್ಥೆ “ಕ್ಸಿನ್‌ಹುವಾ’ ವರದಿ ಪ್ರಕಾರ, ದೇಶದ ಜನಸಂಖ್ಯೆಯನ್ನು ಪುನರ್ ವ್ಯವಸ್ಥೆಗೊಳಿಸಲು ಹಲವು ಬೆಂಬಲ ಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ. ಹಿರಿಯ ನಾಗರಿಕರ ಯೋಗಕ್ಷೇಮ, ಆರೋಗ್ಯಯುತ ಜನರ ಉತ್ತಮ ಬಳಕೆಯತ್ತ ಹೆಜ್ಜೆ ಇಡಲಾಗುತ್ತಿದೆ. ಜನರಲ್ಲಿ ಮಕ್ಕಳನ್ನು ಪಡೆಯುವ ಸಾಮರ್ಥ್ಯ (ಫರ್ಟಿಲಿಟಿ ರೇಟ್) ಕುಗ್ಗುತ್ತಿರುವ ಹಿನ್ನೆಲೆಯಲ್ಲಿ ಅದನ್ನು ಉತ್ತಮಪಡಿಸಲೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಕಟಿಸಲಾಗಿದೆ. ಆದರೆ, ಈ ಬಗ್ಗೆ ವಿವರ ನೀಡಲಾಗಿಲ್ಲ. ಚೀನ ಈಗ 1.4 ಶತಕೋಟಿ ಜನಸಂಖ್ಯೆ ಹೊಂದಿದೆ.
ಗಣತಿ ವರದಿ ಹೇಳಿದ್ದೇನು?
1980ರ ಬಳಿಕ ಹೆಚ್ಚುತ್ತಿರುವ ಜನಸಂಖ್ಯೆ ನಿಯಂತ್ರಿ ಸಲು ಚೀನ ಸರಕಾರವು, ಒಂದು ದಂಪತಿ ಒಂದೇ ಮಗು ಹೊಂದಿರಬೇಕು ಎಂಬ ನಿಯಮ ಜಾರಿ ಮಾಡಿತ್ತು. 2016ರಲ್ಲಿ ಆ ನೀತಿಯಲ್ಲಿ ಕೊಂಚ ರಿಯಾಯಿತಿ ಪ್ರಕಟಿಸಲಾಗಿತ್ತು. 2020ರ ಜನಗಣತಿ ವರದಿ ಪ್ರಕಾರ, ಚೀನ ಜನ ಸಂಖ್ಯೆ ಶೇ.0.59ರಷ್ಟು ಮಾತ್ರ ಬೆಳವಣಿಗೆ ಕಂಡಿತ್ತು. 15-59 ವರ್ಷ ವಯೋ ಮಿತಿಯವರ ಪ್ರಮಾಣ ಶೇ.70.1ರಿಂದ ಶೇ.63.3ಕ್ಕೆ ಇಳಿಕೆಯಾಗಿದ್ದರೆ, 65 ವರ್ಷ ಮತ್ತು ಮೇಲ್ಪಟ್ಟವರ ಪ್ರಮಾಣ ಶೇ.8.9ರಿಂದ ಶೇ.13.5ಕ್ಕೆ ಏರಿಕೆಯಾಗಿದೆ. 2017ರಲ್ಲಿ ಎರಡು ಮಕ್ಕಳನ್ನು ಹೊಂದುವವರ ಪ್ರಮಾಣ ಶೇ.50ರಿಂದ ಶೇ.40ಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಈಗ ಮೂರು ಮಕ್ಕಳನ್ನು ಹೊಂದಲು ಸರಕಾರ ಅವಕಾಶ ಕಲ್ಪಿಸಿದೆ.
ಆದರೆ, ಹೆಚ್ಚುತ್ತಿರುವ ಜೀವನ ವೆಚ್ಚದಿಂದಾಗಿ ಮಕ್ಕಳೇ ಬೇಡ ಎಂಬ ನಿರ್ಣಯಕ್ಕೆ ಅನೇಕರು ಈಗಾಗಲೇ ಬಂದಿದ್ದಾರೆ. ಈ ಬಗ್ಗೆ “ಬಿಬಿಸಿ’ ಜತೆಗೆ ಮಾತನಾಡಿದ್ದ ಬೀಜಿಂಗ್‌ನ ಮಹಿಳೆ “ನನ್ನ ಸ್ನೇಹಿತರು ಒಳ್ಳೆಯ ಶಾಲೆಗೆ ಮಕ್ಕಳನ್ನು ಸೇರಿಸಲು ಮತ್ತು ಜೀವವ ನಿರ್ವಹಿಸಲು ಪಡುತ್ತಿರುವ ಕಷ್ಟ ಕಂಡು ಬೇಸತ್ತಿದ್ದೇನೆ. ಹೀಗಾಗಿ ನಾನೂ ಮಕ್ಕಳನ್ನು ಹೊಂದಲು ಬಯಸುವುದಿಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.