ಚಿತ್ರದುರ್ಗ 164 ಜನರಿಗೆ ಕೋವಿಡ್ ದೃಢ! ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8,110ಕ್ಕೆ ಏರಿಕೆ
Team Udayavani, Oct 7, 2020, 6:35 PM IST
ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 164 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 8,110ಕ್ಕೆ ಏರಿಕೆಯಾದಂತಾಗಿದೆ.
ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಲ್ಲಿ ಬುಧವಾರ 153 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಬುಧವಾರ ಒಟ್ಟು 1,155 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಸಂಗ್ರಹಿಸಲಾಗಿದೆ. ವರದಿಯಲ್ಲಿ 164 ಜನರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 8,110ಕ್ಕೆ ಏರಿಕೆಯಾಗಿದ್ದು, ಇದುವರೆಗೆ 37 ಜನ ಕೋವಿಡ್‍ನಿಂದ ಮೃತಪಟ್ಟಿದ್ದರೆ ಇತರೆ ಕಾರಣದಿಂದ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ ಈಗಾಗಲೆ 7,958 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಜಿಲ್ಲೆಯಲ್ಲಿ ಸದ್ಯ 645 ಸಕ್ರಿಯ ಪ್ರಕರಣಗಳು ಇವೆ.
ಇದನ್ನೂ ಓದಿ:ಸಾರಿಗೆ ಬಸ್ಸುಗಳಲ್ಲಿ ಅಪಘಾತ ಮುನ್ಸೂಚನೆಗೆ ಆಧುನಿಕ ವ್ಯವಸ್ಥೆ ಜಾರಿ: ಡಿಸಿಎಂ ಸವದಿ
ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 67,927 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ.
ಈವರೆಗೆ 72,132 ಜನರ ಮಾದರಿ ಸಂಗ್ರಹಿಸಲಾಗಿದ್ದು, 63,399 ಜನರ ವರದಿ ನೆಗೆಟೀವ್ ಬಂದಿದೆ, ಉಳಿದ 152 ಜನರ ವರದಿ ಬರುವುದು ಬಾಕಿ ಇದೆ. 471 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕøತಗೊಂಡಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.