ರೌಡಿಶೀಟರ್ ಶಾಂತಿ ಕದಡಿದರೆ ಕಠಿಣ ಕ್ರಮ : ಪೊಲೀಸ್ ವರಿಷ್ಠಾಧಿಕಾರಿ ಖಡಕ್ ಸೂಚನೆ
Team Udayavani, Feb 8, 2022, 8:48 PM IST
ಚಿತ್ರದುರ್ಗ: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ಚಿತ್ರದುರ್ಗ ಉಪವಿಭಾಗದ ರೌಡಿಶೀಟರ್‌ಗಳ ಪರೇಡ್ ನಡೆಯಿತು. ಉಪವಿಭಾಗ ವ್ಯಾಪ್ತಿಯ 229 ರೌಡಿಗಳು ಭಾಗವಹಿಸಿದ್ದರು.
ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಮಾತನಾಡಿ, ಹಲವು ರೌಡಿಗಳು ಇನ್ನೂ ಅಪರಾಧ ಪ್ರಕರಣಗಳಲ್ಲಿ ಸಕ್ರಿಯರಾಗಿದ್ದಾರೆ. ಸಮಾಜದ ಶಾಂತಿ ಕದಡಲು
ಪ್ರಚೋದನೆ ನೀಡಿದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ. ಅಪರಾಧ ಕೃತ್ಯಗಳಲ್ಲಿ ತೊಡಗಿದ್ದು ಗಮನಕ್ಕೆ ಬಂದರೆ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದರು.
ಹಲವರಿಗೆ ವಯಸ್ಸಾಗಿದ್ದರೂ ರೌಡಿಪಟ್ಟಿಯಲ್ಲಿ ಉಳಿದುಕೊಂಡಿದ್ದಾರೆ. ನಡತೆ ಬದಲಾವಣೆ ಆಗಿದ್ದರೆ ತಳಹಂತದ ಅ ಧಿಕಾರಿಗಳ ಶಿಫಾರಸು ಪರಿಗಣಿಸಿ ರೌಡಿಪಟ್ಟಿಯಿಂದ ಕೈಬಿಡಲಾಗುವುದು. ರೌಡಿಪಟ್ಟಿ ಸೇರಿರುವರು ಸಮಾಜದಲ್ಲಿ ಯಾವ ರೀತಿಯ ಸಂಕಷ್ಟ ಎದುರಿಸುತ್ತಾರೆ ಎಂಬುದು ಗೊತ್ತಿದೆ. ಮಕ್ಕಳು, ಮೊಮ್ಮಕ್ಕಳ ಮುಖ ನೋಡಿಯಾದರೂ ನಿಮ್ಮ ವರ್ತನೆ ಬದಲಿಸಿಕೊಳ್ಳಿ ಎಂದು ಸಲಹೆ ನೀಡಿದರು.
ಜೂಜುಕೋರರ ಮೇಲೆ ಪೊಲೀಸ್ ಇಲಾಖೆ ನಿಗಾ ಇಟ್ಟಿದೆ. ಮಟ್ಕಾ, ಜೂಜು ಬಿಡಬೇಕು. ಇಲ್ಲವೇ ಜಿಲ್ಲೆಯನ್ನು ತೊರೆಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಜೂಜು ಹಾಗೂ ಮತೀಯ ಗೂಂಡಾಗಿರಿಯನ್ನು ಪೊಲೀಸ್ ಇಲಾಖೆ ಸಹಿಸುವುದಿಲ್ಲ. ಧರ್ಮ, ಜಾತಿ ಆಧಾರಿತ ಮತೀಯ ಗೂಂಡಾಗಳಿಗೆ ಪೊಲೀಸರು ಯಾವುದೇ ಮರ್ಜಿ ತೋರುವುದಿಲ್ಲ.
ಸಮಾಜಘಾತುಕ ಶಕ್ತಿಗಳ ಮೇಲೆ ಪೊಲೀಸರು ಹದ್ದಿನಕಣ್ಣು ಇಟ್ಟಿದ್ದಾರೆ. ಇದೇ ವರ್ತನೆಯನ್ನು ಮುಂದುವರಿಸಿದರೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕಾಗುತ್ತದೆ. ಜಿಲ್ಲೆಯಿಂದ
ಗಡಿಪಾರು ಮಾಡಲಾಗುತ್ತದೆ ಎಂದು ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಡಿವೈಎಸ್‌ಪಿ ಪಾಂಡುರಂಗ, ಸಿಪಿಐಗಳಾದ ನಯೀಂ ಅಹಮ್ಮದ್, ಬಾಲಚಂದ್ರ ನಾಯಕ್, ಮಧು, ವೆಂಕಟೇಶ್, ರಮೇಶ್‌ರಾವ್,
ಶಂಕರಪ್ಪ, ರವೀಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್ನೆಸ್ ಸರ್ಟಿಫಿಕೇಟ್ಗಿನ್ನು ಆರ್ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ
Mulki: ಉಗುಳಿದರೆ ದಂಡ; ಹಾಕುವವರು ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.