ಕಾರ್ಮಿಕರು ಲಾರಿಯಲ್ಲಿ ಗುಂಪಾಗಿ ಕುಳಿತು ಪ್ರಯಾಣಿಸಿದ ವೀಡಿಯೋ ವೈರಲ್‌

Team Udayavani, May 27, 2020, 9:55 AM IST

ಕಾರ್ಮಿಕರು ಲಾರಿಯಲ್ಲಿ ಗುಂಪಾಗಿ ಕುಳಿತು ಪ್ರಯಾಣಿಸಿದ ವೀಡಿಯೋ ವೈರಲ್‌

ಚಿತ್ರದುರ್ಗ: ಉತ್ತರಪ್ರದೇಶ ಮೂಲದ ವಲಸೆ ಕಾರ್ಮಿಕರಲ್ಲಿ ಕೋವಿಡ್ ಪಾಸಿಟಿವ್‌ ದೃಢಪಟ್ಟ ನಂತರ ಅವರು ಈಚರ್‌ ಲಾರಿಯೊಂದರಲ್ಲಿ ಪ್ರಯಾಣಿಸಿದ ವೀಡಿಯೋ ವೈರಲ್‌ ಆಗಿದೆ.

ಚೆನ್ನೈನಿಂದ ಉತ್ತರ ಪ್ರದೇಶಕ್ಕೆ ಸರಕು ಸಾಗಾಣೆ ಮಾಡುವ ಲಾರಿಯಲ್ಲಿ ಪ್ರಯಾಣಿಸುವ ವೇಳೆ ಅದರಲ್ಲಿದ್ದ ಓರ್ವ ಯುವಕ
ವಿಡಿಯೋ ಮಾಡಿದ್ದು, ಅದರಲ್ಲಿ ತಾವು ಅನುಭವಿಸುತ್ತಿರುವ ಕಷ್ಟವನ್ನು ವಿವರಿಸಿದ್ದಾನೆ. ಗೂಡ್ಸ್‌ ಗಾಡಿಯಲ್ಲಿ ಬರೋಬ್ಬರಿ 58 ಜನ ಒಬ್ಬರಿಗೊಬ್ಬರು ತಾಗಿಕೊಂಡು ಕುಳಿತಿದ್ದು, ಕಾಲು ಚಾಚಲು ಕೂಡಾ ತಾವಿಲ್ಲದ ಸ್ಥಿತಿಯಲ್ಲಿದ್ದಾರೆ. ಹೇಗಾದರೂ ಮಾಡಿ
ಊರು ಸೇರಬೇಕೆಂಬ ಕಾರಣಕ್ಕೆ ಹೀಗೆ ಕಷ್ಟಪಟ್ಟು ತೆರಳುತ್ತಿದ್ದರು. ಆದರೆ ಕ್ರಮೇಣ ಈ ಯಾತ್ರೆ ಯಾತನಮಯವಾಗಿದೆ. ಈ ವೇಳೆ
ವಿಡಿಯೋ ಮಾಡಿರುವ ಯುವಕ ನಾವು ಕರ್ನಾಟಕದಲ್ಲಿದ್ದೇವೆ, ಟ್ರಕ್‌ನಲ್ಲಿ ಯಾವ ಸ್ಥಿತಿಯಲ್ಲಿದ್ದೇವೆ ನೋಡಿ ಸರ್‌, ಕೆಳಗಿಳಿಯುವಂತಿಲ್ಲ. ಜನ ಅನುಮಾನದಲ್ಲಿ ನೋಡಿ ಒದೆಯಲು ಬರುತ್ತಾರೆ. ಪೊಲೀಸರ ಭಯವಿದೆ. ನೀರು, ಊಟ ಏನು ಸಿಗುತ್ತಿಲ್ಲ ಎಂದು ಕಣ್ಣಲ್ಲಿ ನೀರು ತುಂಬಿಕೊಂಡು ಪರಿಸ್ಥಿತಿಯನ್ನು ವಿವರಿಸಿದ್ದಾನೆ.

ಈ ವೀಡಿಯೋ ಉತ್ತರಪ್ರದೇಶಕ್ಕೂ ತಲುಪಿ ಅಲ್ಲಿಂದ ಕರ್ನಾಟಕ ಪೊಲೀಸರ ಗಮನಕ್ಕೂ ಬಂದಿದೆ. ಅದೃಷ್ಟ ಎಂಬಂತೆ
ಚಿತ್ರದುರ್ಗ ಪೊಲೀಸರು ಅದೇ ಲಾರಿಯನ್ನು ತಡೆದು ಅದರಲ್ಲಿದ್ದ ಕಾರ್ಮಿಕರನ್ನು ಕ್ವಾರಂಟೈನ್‌ ಮಾಡಿದ್ದಾರೆ. ಒಂದು ವೇಳೆ ಇಲ್ಲಿಯೂ ಸಿಗದೆ ಮುಂದೆ ಹೋಗಿದ್ದರೆ ಅವರ ಪರಿಸ್ಥಿತಿ ಏನಾಗಿರುತ್ತಿತ್ತೂ ಎನ್ನುವ ಪ್ರಶ್ನೆ ಮೂಡುತ್ತಿದೆ. ಇನ್ನೂ ಒಂದು ಹೆಜ್ಜೆ
ಮುಂದೆ ಹೋಗಿ ಅವರು ಯಾರಿಗೂ ಗೊತ್ತಾಗದೆ ಉತ್ತರಪ್ರದೇಶ ಸೇರಿದ್ದರೆ ಸಮುದಾಯಕ್ಕೆ ಸೋಂಕು ಹರಡುವ ಸಾಧ್ಯತೆಯೂ ಇತ್ತು ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ

KJ-Goerge

ತೋಟದ ಮನೆಗಳಿಗೆ ಹಗಲು ತ್ರಿಫೇಸ್‌, ರಾತ್ರಿ ಸಿಂಗಲ್‌ ಫೇಸ್‌ ವಿದ್ಯುತ್‌: ಸಚಿವ ಜಾರ್ಜ್‌

K-J-George

ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.