ಜೂ. 13ರಿಂದ ಚರ್ಚ್‌ಗಳಲ್ಲಿ ಸಾಮೂಹಿಕ ಪ್ರಾರ್ಥನೆ, ಮಸೀದಿಗಳಲ್ಲಿ ನಮಾಝ್ ಸದ್ಯಕ್ಕಿಲ್ಲ
ಮಸೀದಿಗಳಲ್ಲಿ ನಮಾಝ್ ಸದ್ಯಕ್ಕಿಲ್ಲ
Team Udayavani, Jun 7, 2020, 9:58 AM IST
ಮಂಗಳೂರು/ಉಡುಪಿ: ಕೋವಿಡ್ ಲಾಕ್‌ಡೌನ್ ಪ್ರಯುಕ್ತ ಚರ್ಚ್‌ಗಳಲ್ಲಿ ತಾತ್ಕಾಲಿಕವಾಗಿ ರದ್ದುಪಡಿಸಿದ್ದ ಬಲಿಪೂಜೆ ಮತ್ತು ಇತರ ಸಾಮೂಹಿಕ ಪ್ರಾರ್ಥನೆಗಳು ಮಂಗಳೂರು ಧರ್ಮಪ್ರಾಂತದಲ್ಲಿ ಜೂ. 13ರಿಂದ ಪುನರಾರಂಭಗೊಳ್ಳಲಿವೆ. ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚ್‌ಗಳಲ್ಲಿ ಪ್ರಾರ್ಥನೆಗಳನ್ನು ಜೂ. 13 ರಿಂದ ಆರಂಭಿಸಲಾಗುವುದು ಎಂದು ಬಿಷಪ್ ರೈ| ರೆ| ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಜೂ. 8ರಂದು ನಿರ್ಧಾರ
ಬೆಂಗಳೂರು ಪ್ರಾದೇಶಿಕ ಕೇಂದ್ರದಿಂದ ಜೂ. 13ರಿಂದ ಪ್ರಾರ್ಥನೆಗಳನ್ನು ನಡೆಸಬಹುದು ಎಂಬ ಸೂಚನೆ ಬಂದರೂ ಉಡುಪಿ ಜಿಲ್ಲೆಯಲ್ಲಿ ಪರಿಸ್ಥಿತಿ ಭಿನ್ನವಾಗಿರುವುದರಿಂದ ಜೂ. 8ರಂದು ಬಿಷಪ್ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೋ ಅವರ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಅಂತಿಮ ನಿರ್ಧಾರವನ್ನು ತಳೆಯಲಾಗುವುದು ಎಂದು ಮೂಲಗಳು ತಿಳಿಸಿವೆ.
ಮಸೀದಿಗಳಲ್ಲಿ ನಮಾಝ್ ಸದ್ಯಕ್ಕಿಲ್ಲ
ಮಂಗಳೂರು/ಉಡುಪಿ: ಮಸೀದಿಗಳನ್ನು ಜೂ. 8ರಿಂದ ತೆರೆಯಲು ಸರಕಾರ ಅವಕಾಶ ಮಾಡಿಕೊಟ್ಟರೂ ಮುಂದೆ ಮಸೀದಿಗೆ ಸಂಬಂಧಿಸಿದ ನಿರ್ದಿಷ್ಟ ಮಾರ್ಗಸೂಚಿಗ ಳನ್ನು ಪ್ರಕಟಿಸಿದ ಬಳಿಕವೇ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ.
ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್‌ಹಾಜ್ ಕೆ.ಎಸ್. ಮುಹಮದ್ ಮಸೂದ್ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಜಿಲ್ಲಾಧ್ಯಕ್ಷ ಯಾಸೀನ್ ಮಲ್ಪೆ ಅವರು ಈ ವಿಚಾರವನ್ನು ಉದಯವಾಣಿಗೆ ತಿಳಿಸಿದ್ದಾರೆ.
ಝೀನತ್ ಭಕ್ಷ್ ಜುಮ್ಮಾ ಮಸೀದಿಯಲ್ಲಿ ಪ್ರಾರ್ಥನೆ: ಮಂಗಳೂರು ಬಂದರ್‌ನ ಝೀನತ್ ಭಕ್ಷ್ ಕೇಂದ್ರ ಜುಮ್ಮಾ ಮಸೀದಿಯ ಜಮಾಅತ್ ಖಾನಾದಲ್ಲಿ ಜೂ. 8ರಿಂದ ನಮಾಝ್ ಪ್ರಾಯೋಗಿಕವಾಗಿ ನಡೆಯಲಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಅಲ್‌ಹಾಜ್ ವೈ. ಅಬ್ದುಲ್ಲ ಕುಂಞಿ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.