ವರ್ಗವಾದ ಅಧಿಕಾರಿಗಳ ಮೇಲೆ CID ಶಂಕೆ
ಸಚಿವರ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಪ್ರಕರಣ
Team Udayavani, Aug 12, 2023, 11:10 PM IST
ಮಂಡ್ಯ: ಸಚಿವ ಎನ್.ಚಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿ ರಾಜ್ಯಪಾಲರಿಗೆ ಬರೆದಿದ್ದಾರೆ ಎನ್ನಲಾದ ದೂರು ಅರ್ಜಿಯ ವಿಚಾರಣೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳ ತಂಡ ಈಗ ಕೃಷಿ ಇಲಾಖೆಯಿಂದ ವರ್ಗಾವಣೆಗೊಂಡ ಅಧಿ ಕಾರಿಗಳ ಮೇಲೆ ಸಂಶಯ ವ್ಯಕ್ತಪಡಿಸಿದ್ದು, ಅವರನ್ನು ಕರೆಸಿ ತನಿಖೆ ನಡೆಸಲು ಮುಂದಾಗಿದೆ.
ಕೃಷಿ ಅಧಿಕಾರಿಗಳು ಹಾಗೂ ಸಿಬಂದಿ ತಮಗೇನೂ ಗೊತ್ತಿಲ್ಲ. ಯಾರಿಂದಲೂ ನಮಗೆ ಲಂಚಕ್ಕಾಗಿ ಒತ್ತಡ ಬಂದಿಲ್ಲ. ದೂರಿನ ಪತ್ರದಲ್ಲಿರುವ ಸಹಿಗಳು ನಮ್ಮದಲ್ಲ ಎಂದು ತನಿಖಾಧಿಕಾರಿಗಳ ಮುಂದೆ ಹೇಳಿದ್ದಾರೆ.
ಇದರಿಂದ ಸಿಐಡಿ ಅಧಿ ಕಾರಿಗಳಿಗೆ ಕೃಷಿ ಇಲಾಖೆಯಲ್ಲಿರುವವರೇ ಅಧಿಕಾರಿಗಳ ಹೆಸರಿನಲ್ಲಿ ಪತ್ರ ಬರೆದಿರುವ ಶಂಕೆ ವ್ಯಕ್ತವಾಗಿದೆ. ಕಾಂಗ್ರೆಸ್ ಸರಕಾರ ಬಂದ ಬಳಿಕ ಇತ್ತೀಚೆಗೆ ವರ್ಗಾವಣೆಗೊಂಡ ಸಹಾಯಕ ಕೃಷಿ ನಿರ್ದೇಶಕರ ಮೇಲೂ ಶಂಕಿಸಲಾಗಿದೆ. ಮಂಡ್ಯದಿಂದ ಮತ್ತೂಂದು ಜಿಲ್ಲೆಗೆ ವರ್ಗಾವಣೆಯಾಗಿರುವ ಕೃಷಿ ಅ ಧಿಕಾರಿಗಳ ಮೇಲೆ ಸಂಶಯ ಬಂದಿದ್ದು, ವಿಚಾರಣೆಗೊಳಪಡಿಸಲು ಸಜ್ಜಾಗಿದ್ದಾರೆ. ಮಾಜಿ ಶಾಸಕರೊಬ್ಬರ ಆಪ್ತ ಸಹಾಯಕರಾಗಿದ್ದ ಅ ಧಿಕಾರಿಯೊಬ್ಬರ ಮೇಲೂ ಅನುಮಾನ ವ್ಯಕ್ತಪಡಿಸಿದ್ದು, ಅವರನ್ನು ವಿಚಾರಣೆ ನಡೆಸಲು ಸಿಐಡಿ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.