ಭೂ ಒತ್ತುವರಿ ವಿರುದ್ಧ ಕ್ರಮಕ್ಕೆ ಸುತ್ತೋಲೆ

Team Udayavani, Jan 22, 2020, 3:06 AM IST

bhoo ottu

ಬೆಂಗಳೂರು: ಸರ್ಕಾರಿ ಜಮೀನು ಒತ್ತುವರಿ ತೆರವು ಹಾಗೂ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳುವ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌.ಮಂಜುನಾಥ್‌ ಪ್ರಸಾದ್‌ ಮಂಗಳವಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯ ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಯಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವು ಪ್ರಕ್ರಿಯೆ ಮಂದಗತಿಯಲ್ಲಿ ಸಾಗುತ್ತಿದೆ. ಭೂ ಒತ್ತುವರಿದಾರರ ವಿರುದ್ಧ ನಿರೀಕ್ಷಿತ ಮಟ್ಟದಲ್ಲಿ ಕ್ರಮ ಆಗಿಲ್ಲ. ನಕಲಿ ದಾಖಲೆ ಸೃಷ್ಟಿಸಿ ಅಕ್ರಮವೆಸಗಿರುವವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಇದರಿಂದ ಕೋಟ್ಯಂತರ ರೂ. ಮೌಲ್ಯದ ಸಾರ್ವಜನಿಕ ಜಮೀನು ಸರ್ಕಾರದ ಕೈ ತಪ್ಪಿ ಹೋಗಿವೆ ಎಂದು ತಿಳಿಸಿದ್ದಾರೆ.

ಅಲ್ಲದೇ, ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾಧಿಕಾರಿಗಳಿಗೆ ಸೂತ್ತೋಲೆ ಹೊರಡಿಸಿದ್ದಾರೆ. ಜತೆಗೆ, ಒತ್ತುವರಿ ತೆರವುಗೊಳಿಸುವಲ್ಲಿ ವಿಫ‌ಲರಾಗಿರುವ ಅಧಿಕಾರಿಗಳು, ಭೂ ಕಬಳಿಕೆಗೆ ಪ್ರೇರಣೆ ನೀಡಿ ನಕಲಿ ದಾಖಲೆ ಸೃಷ್ಟಿಸುವಲ್ಲಿ ಶಾಮೀಲಾಗಿರುವ ಅಧಿಕಾರಿ -ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ಸರ್ಕಾರಿ ಭೂಮಿ ಒತ್ತು ವರಿ ನಿಯಂತ್ರಣ, ಒತ್ತು ವರಿ ತೆರವು ಸಂಬಂಧ ಜಿಲ್ಲಾ ಧಿಕಾರಿಗಳ ಅಧ್ಯಕ್ಷತೆ ಯಲ್ಲಿ ಜಿಲ್ಲಾ ಮಟ್ಟದ ಕಾರ್ಯ ಪಡೆ ರಚಿಸಿ ಸೂಚನೆ ನೀಡಲಾಗಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ ಅನ್ವಯ ಒತ್ತುವರಿದಾರರಿಗೆ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ಕಾರಿ ಜಮೀನು ಒತ್ತುವರಿ ಹಾಗೂ ನಕಲಿ ದಾಖಲೆ ಸೃಷ್ಟಿ ಅಪರಾಧಕ್ಕಾಗಿ 3 ವರ್ಷ ಜೈಲು ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

ಹೀಗಾಗಿ, ಜಿಲ್ಲಾಧಿಕಾರಿಗಳು ಈ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಒತ್ತುವರಿ ತೆರವುಗೊಳಿಸಲು ಬಾಕಿ ಇರುವ ಪ್ರಕರಣ ಹಾಗೂ ಇದುವರೆಗೂ ಸ್ವೀಕೃತ ದೂರುಗಳನ್ನು 15 ದಿನಗಳಲ್ಲಿ ಪರಾಮರ್ಶೆ ಮಾಡುವುದು.

ನಗರ ಪ್ರದೇಶ, ವಾಣಿಜ್ಯ, ಕೈಗಾರಿಕೆ ಇನ್ನಿತರ ಉದ್ದಿಮೆಗಳಿಗೆ ಅನಧಿಕೃತವಾಗಿ ಸರ್ಕಾರಿ ಜಮೀನು ಬಳಸಿದ್ದರೆ ಒತ್ತುವರಿ ಪ್ರಕರಣ ಎಂದು ಪರಿಗಣಿಸಿ ತೆರವು ಮಾಡ ಬೇಕು. ಜಿಲ್ಲಾಧಿಕಾರಿಗಳು ನಿಗದಿಪಡಿಸುವ ಗಡುವಿನ ಒಳಗೆ ಕ್ರಮ ಕೈಗೊಳ್ಳದ ಅಧಿಕಾರಿ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು. ನಕಲಿ ದಾಖಲೆ ಆಧಾರದ ಮೇಲೆ ಭೂ ಕಬಳಿಕೆ ಆಗಿದೆ ಎಂದು ಬಂದಿರುವ ದೂರು ಇತ್ಯರ್ಥಕ್ಕೆ ಕಾಲಮಿತಿ ನಿಗದಿಪಡಿಸಬೇಕು.

ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಲು ಸಹಕಾರ ನೀಡಿರುವುದು ಮೇಲ್ನೋಟಕ್ಕೆ ಕಂಡು ಬಂದಲ್ಲಿ ತಕ್ಷಣ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಗುತ್ತಿಗೆ ನೀಡಿರುವ ಸರ್ಕಾರಿ ಜಮೀನುಗಳನ್ನು ಪ್ರಕರಣವಾರು ಪರಾಮರ್ಶೆ ಮಾಡಿ ಗುತ್ತಿಗೆ ಷರತ್ತು ಪಾಲನೆ ಬಗ್ಗೆ ಗಮನಹರಿಸಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10

Kaup ಒಳಚರಂಡಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಸಭೆ

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

9

Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗ‌ಳಲ್ಲೇ ಬಸ್‌ ನಿಲುಗಡೆ; ಅನಾಹುತಕ್ಕೆ ಎಡೆ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.