ಸಾವಿರ ಗ್ರಾಮಗಳಲ್ಲಿ “ಸ್ವಚ್ಛಮೇವ ಜಯತೆ’ ಆಂದೋಲನ


Team Udayavani, Jun 10, 2019, 3:08 AM IST

savira

ಬೆಂಗಳೂರು: ರಾಜ್ಯದ ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ “ಸ್ವಚ್ಛಮೇವ ಜಯತೆ’ಗೆ ಕಾಲ ಕೂಡಿ ಬಂದಿದೆ. 2019-20ನೇ ಸಾಲಿನ ಬಜೆಟ್‌ ಘೋಷಣೆಯನ್ನು ಅನುಷ್ಠಾನಕ್ಕೆ ತರಲು ಸರ್ಕಾರ ಮುಂದಾಗಿದೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ “ಸ್ವಚ್ಛ ಭಾರತ-ಸ್ವಸ್ಥ ಭಾರತ’ ನಿರ್ಮಾಣದ ಗುರಿಗೆ ಪೂರಕವಾಗಿ ಈಗಾಗಲೇ ಕರ್ನಾಟಕ ಸಂಪೂರ್ಣ “ಬಯಲು ಬಹಿರ್ದೆಸೆ ಮುಕ್ತ’ ರಾಜ್ಯ ಎಂದು ಘೋಷಿಸಿಕೊಂಡಿದೆ. ಅದರ ಮುಂದಿನ ಹೆಜ್ಜೆಯಾಗಿ ರಾಜ್ಯವನ್ನು ಸ್ವಚ್ಛ ಮತ್ತು ಸುಂದರವನ್ನಾಗಿ ಮಾಡುವ ವಿಶಾಲ ದೃಷ್ಠಿಕೋನದಿಂದ ಗ್ರಾಮೀಣ ಭಾಗದ ಘನ ಮತ್ತು ದ್ರವ ತ್ಯಾಜ್ಯದ ಸಮರ್ಪಕ ನಿರ್ವಹಣೆಯ ಉದ್ದೇಶವನ್ನು ಈ “ಸ್ವಚ್ಛಮೇವ ಜಯತೆ’ ಕಾರ್ಯಕ್ರಮ ಹೊಂದಿದೆ.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು 2019ರ ಫೆ.8ರಂದು ಮಂಡಿಸಿದ ಬಜೆಟ್‌ನಲ್ಲಿ ಘೋಷಿಸಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಈ “ಸ್ವಚ್ಛಮೇವ ಜಯತೆ’ ಕಾರ್ಯಕ್ರಮಕ್ಕೆ ರಾಜ್ಯಮಟ್ಟದಲ್ಲಿ ಜೂನ್‌ 11ರಂದು ಚಾಲನೆ ನೀಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಇದರ ಜತೆಗೆ ಈಗಾಗಲೇ ಜಾರಿಯಲ್ಲಿರುವ “ಜಲಾಮೃತ’ ಯೋಜನೆಯಡಿಯಲ್ಲಿ ರಾಜ್ಯದ 6 ಸಾವಿರ ಗ್ರಾಪಂಗಳಲ್ಲಿ 30 ಲಕ್ಷ ಸಸಿಗಳನ್ನು ನೆಡುವ ವಿಶೇಷ ಕಾರ್ಯಕ್ರಮಕ್ಕೂ ಇದೇ ವೇಳೆ ಚಾಲನೆ ನೀಡಲಾಗುತ್ತಿದೆ. ಸ್ವಚ್ಛಮೇವ ಜಯತೆ ಮತ್ತು ಜಲಾಮೃತ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳನ್ನು ಜೂ.11ರಿಂದ ಜುಲೈ 11ರವರೆಗೆ ಅಭಿಯಾನದ ರೂಪದಲ್ಲಿ ಅನುಷ್ಠಾನಕ್ಕೆ ತರಲು ಇಲಾಖೆ ಕ್ರಿಯಾ ಯೋಜನೆಯನ್ನು ರೂಪಿಸಿದೆ.

ಏನಿದು ಸ್ವಚ್ಛಮೇವ ಜಯತೆ: ಹಳ್ಳಿಗಳಲ್ಲಿ ದಿನೇ ದಿನೆ ಪ್ಲಾಸ್ಟಿಕ್‌, ಗಾಜು, ಬಾಟಲ್‌ ಇತ್ಯಾದಿ ಘನ ತ್ಯಾಜ್ಯಗಳ ಶೇಖರಣೆ ಹೆಚ್ಚಾಗುತ್ತಿದೆ. ಇದು ಗ್ರಾಮೀಣ ಜನತೆಯ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಗ್ರಾಮಗಳ ಸ್ವಚ್ಛತೆ ಹಾಗೂ ಸೌಂದರ್ಯ ನಶಿಸುತ್ತಿದೆ. ನಗರ ಪ್ರದೇಶಗಳಿಗೆ ಹತ್ತಿರದಲ್ಲಿರುವ ಗ್ರಾಮಗಳಲ್ಲಿ ಕಸದ ಸಮಸ್ಯೆ ಇನ್ನೂ ಹೆಚ್ಚಾಗುತ್ತಿದೆ. ಅಲ್ಲದೇ ನಗರದ ಕಸವನ್ನು ಗ್ರಾಮಗಳಲ್ಲಿ ತಂದು ಹಾಕುವ ಪ್ರವೃತ್ತಿ ಬೆಳೆಯುತ್ತಿದೆ.

ಈ ಸಮಸ್ಯೆಗೆ ಪರಿಹಾರ ಒದಗಿಸುವ ಅವಶ್ಯಕತೆಯಿದೆ. ಘನ ತ್ಯಾಜ್ಯ ವಿಲೇವಾರಿಯಲ್ಲಿ ಒಣ ಮತ್ತು ಹಸಿ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಿಸಿ, ಒಣ ಕಸವನ್ನು ಮರು ಬಳಕೆ ಮಾಡುವುದು ಹಾಗೂ ಹಸಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸುವ ವ್ಯವಸ್ಥೆ ರೂಪಿಸಲು 2019-20ನೇ ಸಾಲಿನಲ್ಲಿ “ಸ್ವಚ್ಛಮೇವ ಜಯತೆ’ ಕಾರ್ಯಕ್ರಮದಡಿ ಆಯ್ದ ಸಾವಿರ ಗ್ರಾಪಂಗಳಲ್ಲಿ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಇದಕ್ಕಾಗಿ 2 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ.

6 ಸಾವಿರ ಗ್ರಾಪಂಗಳಲ್ಲಿ 30 ಲಕ್ಷ ಸಸಿ: 2019ನೇ ವರ್ಷವನ್ನು “ಜಲ ವರ್ಷ’ ಎಂದು ಘೋಷಿಸಿರುವ ರಾಜ್ಯ ಸರ್ಕಾರ ಜಲ ಸಾಕ್ಷರತೆ, ನೀರಿನ ಮಿತ ಬಳಕೆ, ಸಾಂಪ್ರದಾಯಿಕ ಜಲ ಮೂಲಗಳ ಸಂರಕ್ಷಣೆ ಮತ್ತು ಪುನರುಜ್ಜೀವನ ಹಾಗೂ ಹಸಿರೀಕರಣಕ್ಕೆ ಒತ್ತು ಕೊಡುವ “ಜಲಾಮೃತ’ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿದ್ದು, ಅದನ್ನು 2019ರ ಫೆ.28ರಂದು ಜಾರಿಗೆ ತರಲಾಗಿದೆ.

ಈಗ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ “ಜಲಾಮೃತ’ ಯೋಜನೆಯಡಿ ರಾಜ್ಯದ 6,021 ಗ್ರಾಪಂಗಳಲ್ಲಿ ಪ್ರತಿ ಗ್ರಾ.ಪಂ.ನಲ್ಲಿ 500ರಂತೆ ರಾಜ್ಯಾದ್ಯಂತ 30 ಲಕ್ಷ ಸಸಿಗಳನ್ನು ನೆಡುವ, 20 ಸಾವಿರ ಚೆಕ್‌ ಡ್ಯಾಂ ನಿರ್ಮಿಸುವ ಕಾರ್ಯಕ್ಕೆ ಜೂ.11ರಿಂದ ಚಾಲನೆ ನೀಡಲು ಗ್ರಾಮೀಣಾಭಿವೃದ್ಧಿ ಇಲಾಖೆ ನಿರ್ಧರಿಸಿದೆ. ಜಲಾಮೃತ ಯೋಜನೆಗೆ 500 ಕೋಟಿ ರೂ.ಅನುದಾನ ಮೀಸಲಿಡಲಾಗಿದೆ.

ಗ್ರಾಮೀಣ ಭಾಗದಲ್ಲಿ ತ್ಯಾಜ್ಯ ವಿಲೇವಾರಿಯನ್ನು ಪರಿಣಾಮಕಾರಿಯಾಗಿ ಮತ್ತು ಸಮರ್ಪಕವಾಗಿ ನಿರ್ವಹಿಸಿ ಅದನ್ನು ಮರು ಬಳಕೆ ಮಾಡುವ ಉದ್ದೇಶದ “ಸ್ವಚ್ಛಮೇವ ಜಯತೆ’ ಕಾರ್ಯಕ್ರಮಕ್ಕೆ ಜೂ.11ರಂದು ಚಾಲನೆ ನೀಡಲಾಗುತ್ತಿದೆ. ಇದೇ ವೇಳೆ, “ಜಲಾಮೃತ’ ಯೋಜನೆಯಡಿ 30 ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ಅಲ್ಲದೆ, ಜಲ ಸಂರಕ್ಷಣಾ ಕಾಮಗಾರಿಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ.
-ಎಲ್‌.ಕೆ.ಅತೀಕ್‌, ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಇಲಾಖೆ

* ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.