Dharmasthala ಸ್ವಾತಂತ್ರ್ಯೋತ್ಸವದಂದು 16,797 ಶ್ರದ್ಧಾ ಕೇಂದ್ರಗಳ ಸ್ವಚ್ಛತೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವ
Team Udayavani, Aug 7, 2024, 12:15 AM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಭಾಗಿತ್ವದಲ್ಲಿ ಕಳೆದ 8 ವರ್ಷಗಳಿಂದ ನಿರಂತರವಾಗಿ ಸ್ವ-ಸಹಾಯ ಸಂಘಗಳ ಸದಸ್ಯರುಶ್ರದ್ಧಾಕೇಂದ್ರದ ಸ್ವಚ್ಛತೆ ಕೈಗೊಳ್ಳುತ್ತಿದ್ದು ಪ್ರಸಕ್ತ ಆ. 8ರಿಂದ 14ರ ವರೆಗೆ ರಾಜ್ಯಾದ್ಯಂತ 16,797 ಶ್ರದ್ಧಾಕೇಂದ್ರಗಳ ಸ್ವತ್ಛತಾ ಸಪ್ತಾಹ ನಡೆಸಲಾಗುವುದು ಎಂದು ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ತಿಳಿಸಿದ್ದಾರೆ.
ಧಾರ್ಮಿಕ ಶ್ರದ್ಧಾಕೇಂದ್ರಗಳು ಒಂದು ಗ್ರಾಮದ ಅತೀ ಮುಖ್ಯ ಭಾಗವಾಗಿದ್ದು, ಅವುಗಳು ಸ್ವಚ್ಛವಾಗಿರು ವುದು ಅತೀ ಅಗತ್ಯವಾಗಿದೆ. ಈ ಕುರಿತಂತೆ ಅರಿವು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ. ಹೆಗ್ಗಡೆಯವರ ಚಿಂತನೆಯಂತೆ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನರ ಸಹಭಾಗಿತ್ವದಲ್ಲಿ ಶ್ರದ್ಧಾಕೇಂದ್ರಗಳ ಬೃಹತ್ ಸ್ವಚ್ಛತಾ ಅಭಿಯಾನವನ್ನು ರಾಜ್ಯಾದ್ಯಂತ ಕೈಗೊಳ್ಳಲಾಗುತ್ತಿದೆ.
ಈ ವರ್ಷ ರಾಜ್ಯದಾದ್ಯಂತ 16,797 ಶ್ರದ್ಧಾಕೇಂದ್ರಗಳನ್ನು ಗುರುತಿಸಲಾಗಿದ್ದು, ಸುಮಾರು 3,95,724 ಸ್ವಯಂ ಸೇವಕರು, ದೇವಾಲಯದ ಆಡಳಿತ ಮಂಡಳಿ, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ಸದಸ್ಯರು, ನವಜೀವನ ಸಮಿತಿಯ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣೆಯ ಸದಸ್ಯರು,ಸ್ವಚ್ಛತಾ ಸೇನಾನಿಗಳು, ಊರಿನ ಗಣ್ಯರು, ಗ್ರಾ.ಪಂ.ನ ಸದಸ್ಯರು ವಿವಿಧ ಸಂಘ ಸಂಸ್ಥೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಧಾರ್ಮಿಕ ಕೇಂದ್ರಗಳ ಪಾವಿತ್ರ್ಯತೆ
ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ರಾಜ್ಯಾ ದ್ಯಂತ ಶ್ರದ್ಧಾಕೇಂದ್ರಗಳ ಶುಚಿತ್ವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗುವುದು ಎಂದು ಕಾರ್ಯ ನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್. ತಿಳಿಸಿದ್ದಾರೆ.
ಸ್ವಚ್ಛತಾ ಕಾರ್ಯಕ್ರಮಗಳ ವಿವರ
ದೇವಸ್ಥಾನದ ಸುತ್ತಮುತ್ತಲಿನ ಗಿಡ ಗಂಟಿ ತೆರವು. , ಮಂದಿರ, ಮಸೀದಿ, ಚರ್ಚ್‌ಗಳ ಆವರಣ ಸ್ವಚ್ಛತೆ, ಒಳಾಂಗಣ ಸ್ವಚ್ಛತೆಗೆ ಆದ್ಯತೆ. ದೇವಸ್ಥಾನದ ಕಲ್ಯಾಣಿ, ಸಭಾಭವನ, ಅಶ್ವತ್ಥ ಕಟ್ಟೆ/ಅರಳಿಕಟ್ಟೆ ಸ್ವಚ್ಛತೆ. ಶ್ರದ್ಧಾ ಕೇಂದ್ರದ ಪರಿಕರಗಳನ್ನು ಸ್ವಚ್ಛಗೊಳಿಸುವುದು. ಸಾರ್ವಜನಿಕ ಶೌಚಾಲಯ, ನಗರಸ್ವಚ್ಛತೆ, ಬೀದಿ ಸ್ವಚ್ಛತೆಗೆ ಒತ್ತು. ಶ್ರದ್ಧಾ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ, ಬಟ್ಟೆ ಚೀಲ ಬಳಕೆ ಮಾಡುವುದು. ಜಾತ್ರೆ, ವಿಶೇಷ ಕಾರ್ಯಕ್ರಮದ ದಿನ ಸ್ವಚ್ಛತೆಗೆ ತಂಡ ರಚಿಸಿ ಜಾಗೃತಿ ಮೂಡಿಸುವುದು. ಸ್ವಚ್ಛತೆಯ ಬಗ್ಗೆ ನಿಗಾ ವಹಿಸುವ ಆಸಕ್ತ ಸ್ವಯಂಸೇವಕರ ಕಾವಲು ಸಮಿತಿ ರಚನೆ. ತ್ಯಾಜ್ಯಗಳನ್ನು ಬಿಸಾಡಲು ಕಸದ ಬುಟ್ಟಿ ಇಟ್ಟು ಸೂಚನ ಫಲಕ ಅಳವಡಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.