Education: ರಾಜ್ಯದ ವಿವಿಗಳಿಗೆ ಏಕರೂಪ ವೇಳಾಪಟ್ಟಿ ಜಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Team Udayavani, Oct 21, 2023, 10:07 PM IST

SIDDU IMP

ಬೆಂಗಳೂರು: ರಾಜ್ಯ ಸರಕಾರದ ವ್ಯಾಪ್ತಿಯ ಎಲ್ಲ ವಿಶ್ವವಿದ್ಯಾನಿಲಯಗಳಿಗೆ ಏಕರೂಪದ ವೇಳಾಪಟ್ಟಿ ಜಾರಿಗೊಳಿಸುವವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ತಮ್ಮ ಗೃಹ ಕಚೇರಿ “ಕೃಷ್ಣಾ’ದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲಿಸಿದ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ.

ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳ ಕಾರ್ಯಚಟುವಟಿಕೆಗಳು ಬೇರೆ ಬೇರೆ ಅವಧಿಯಲ್ಲಿ ನಡೆಯುವುದರಿಂದ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತದೆ. ಇದರಿಂದಾಗಿ ರಾಜ್ಯದ ಎಲ್ಲ ವಿವಿಗಳಲ್ಲಿ ಏಕರೂಪದ ಕ್ಯಾಲೆಂಡರ್‌ ಆಫ್ ಇವೆಂಟ್ಸ್‌ ಜಾರಿಗೊಳಿಸುವುದು ಸೂಕ್ತ ಎಂದು ಸಿಎಂ ಸೂಚಿಸಿದ್ದಾರೆ.

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಬೋಧಕ ಸಿಬಂದಿಯ ಕೊರತೆ ಬಗ್ಗೆ ಮುಖ್ಯಮಂತ್ರಿಗಳು ಆತಂಕ ವ್ಯಕ್ತಪಡಿಸಿದ್ದು, ಬೋಧಕ ಸಿಬಂದಿಯನ್ನು ಆದ್ಯತೆ ಮೇರೆಗೆ ನೇಮಿಸಿಕೊಳ್ಳುವಂತೆ ಸೂಚಿಸಿದ್ದಾರೆ. ಕಲ್ಯಾಣ ಕರ್ನಾಟಕ ಮತ್ತು ಬ್ಯಾಕ್‌ಲಾಗ್‌ ಹು¨ªೆಗಳನ್ನು ಮೊದಲು ಭರ್ತಿ ಮಾಡಿ ಆ ಬಳಿಕ ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ಹಣಕಾಸು ಹಾಗೂ ಉನ್ನತ ಶಿಕ್ಷಣ ಇಲಾಖೆಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸುಮಾರು ಮೂರು ಸಾವಿರ ಬ್ಯಾಕ್‌ಲಾಗ್‌ ಹುದ್ದೆಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13,169 ವಿದ್ಯಾರ್ಥಿಗಳ ಸಾಮರ್ಥ್ಯದ 224 ವಸತಿ ನಿಲಯಗಳನ್ನು ಹಸ್ತಾಂತರಿಸಿಕೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿದ್ಧವಿದ್ದು, ಇದನ್ನು ಸಚಿವ ಸಂಪುಟದ ಮುಂದೆ ತರಬೇಕು. ಬಡ ಹಾಗೂ ಕೆಳ ಮಧ್ಯಮ ವರ್ಗಕ್ಕೆ ಸೇರಿದ ಮಕ್ಕಳ ಅನುಕೂಲಕ್ಕಾಗಿ ಸುಸಜ್ಜಿತ ಹಾಸ್ಟೆಲ್‌ ನಿರ್ಮಿಸುವಂತೆ ಸಿಎಂ ಸೂಚಿಸಿದ್ದಾರೆ.

ರಾಜ್ಯದ 16 ಸರಕಾರಿ ಎಂಜಿನಿಯರಿಂಗ್‌ ಕಾಲೇಜುಗಳ ಸುಧಾರಣೆಗೆ ಒತ್ತು ನೀಡಬೇಕು. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಲ್‌.ಎಂ.ಎಸ್‌. ವ್ಯವಸ್ಥೆ ಜಾರಿಗೆ ಬಂದಿರುವುದರಿಂದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌, ಲ್ಯಾಪ್‌ಟಾಪ್‌, ಪಿ.ಎಚ್‌.ಡಿ. ವಿದ್ಯಾರ್ಥಿಗಳಿಗೆ ಭತ್ತೆ ನೀಡುವ ಬಗ್ಗೆ, ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಣಕಾಸು ಶಿಸ್ತು, ನೇಮಕಾತಿಯಲ್ಲಿ ಪಾರದರ್ಶಕತೆ ತರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಜೆಎನ್‌ಯು ಕನ್ನಡ ಅಧ್ಯಯನ ಪೀಠದ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಪಡೆಯುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ.

ಮೈಸೂರು ಮಹಾರಾಣಿ ಆರ್ಟ್ಸ್ ಕಾಲೇಜು ಹಾಸ್ಟೆಲ್‌ ಆವರಣದಲ್ಲಿ 99 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆರ್ಟ್ಸ್ ಮತ್ತು ವಿಜ್ಞಾನ ಕಾಲೇಜಿನ ತಲಾ ಸಾವಿರ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುವ ಹಾಸ್ಟೆಲ್‌ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಶಿಥಿಲಾವಸ್ಥೆಯಲ್ಲಿರುವ ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜಿನ ನವೀಕರಣ/ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿ ಕೂಡಲೇ ಪ್ರಸ್ತಾವನೆ ಸಲ್ಲಿಸಬೇಕು. ದಸರಾ ಸಂದರ್ಭದಲ್ಲಿ ತಾವು ಸ್ವತಃ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ವಿಶ್ವಬ್ಯಾಂಕ್‌ ಸಾಲದಿಂದ ಕಾಲೇಜುಗಳ ಅಭಿವೃದ್ಧಿ
ಸಭೆಯ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ| ಎಂ. ಸಿ. ಸುಧಾಕರ್‌, ಉತ್ಕೃಷ್ಟ ಶಿಕ್ಷಣ ಕೇಂದ್ರಗಳೆಂದು ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಥಮ ದರ್ಜೆ ಕಾಲೇಜು ಮತ್ತು ತಲಾ ಒಂದು ಪಾಲಿಟೆಕ್ನಿಕ್‌ ಕಾಲೇಜು, ಒಟ್ಟು ಹತ್ತು ಎಂಜಿನಿಯರಿಂಗ್‌ ಕಾಲೇಜನ್ನು ಉನ್ನತೀಕರಿಸುವ ಯೋಜನೆ ಹೊಂದಿದ್ದೇವೆ. ಇದಕ್ಕಾಗಿ ವರ್ಲ್ಡ್ ಬ್ಯಾಂಕ್‌ನಿಂದ 15ರಿಂದ 20 ವರ್ಷಕ್ಕೆ 1,750 ಕೋಟಿ ರೂ ಸಾಲ ಪಡೆಯುವ ಚಿಂತನೆ ನಡೆಸಿದ್ದೇವೆ. ಈ ಪ್ರಸ್ತಾವನೆಗೆ ಒಪ್ಪಿಗೆ ನೀಡುವಂತೆ ಮುಖ್ಯಮಂತ್ರಿಗಳಿಗೆ ಕೋರಿದ್ದೇವೆ ಎಂದು ತಿಳಿಸಿದರು.

ಅತಿಥಿ ಉಪನ್ಯಾಸಕರಿಗೆ ಈ ಹಿಂದೆ ಕಾಲೇಜು ಆರಂಭ ತಡವಾಗುತ್ತಿರುವ ಕಾರಣವೊಡ್ಡಿ 7-8 ತಿಂಗಳ ಸಂಬಳ ನೀಡಲಾಗುತ್ತಿತ್ತು. ಇನ್ನೀಗ ಹತ್ತು ತಿಂಗಳು ಸಂಬಳ ನೀಡುವ ಬಗ್ಗೆ ಚರ್ಚೆ ನಡೆದಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ 16 ಸಾವಿರಕ್ಕೂ ಹೆಚ್ಚು ಹುದ್ದೆಗಳಿದ್ದು, ಈ ಪೈಕಿ ಸುಮಾರು ಆರು ಸಾವಿರ ಹುದ್ದೆಗಳು ಖಾಲಿ ಇವೆ. ಜತೆಗೆ ಬೋಧಕೇತರ ಹುದ್ದೆಗಳನ್ನು ತುಂಬುವ ಬಗ್ಗೆ ಸಿಎಂ ಜತೆ ಚರ್ಚೆ ನಡೆಸಿದ್ದೇವೆ ಎಂದರು.

ಟಾಪ್ ನ್ಯೂಸ್

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.