Kasturi Rangan Report ತಿರಸ್ಕರಿಸುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ: ಸಿದ್ದರಾಮಯ್ಯ
ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ
Team Udayavani, Aug 2, 2024, 7:57 PM IST
ಮಡಿಕೇರಿ: ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಿಳಿಸಿದರು.
ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 746 ಕೋಟಿ ಮತ್ತು ಮಡಿಕೇರಿ ಜಿಲ್ಲಾ ಪಿಡಿ ಖಾತೆಯಲ್ಲಿ 46 ಕೋಟಿ ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದು ಎಂದರು.
ಮಳೆ ಬೀಳುತ್ತಲೇ ಇರುವುದರಿಂದ ಭೂ ಕುಸಿತದ ಪ್ರದೇಶವನ್ನು ಸರಿ ಪಡಿಸಲು ಕಷ್ಟ ಆಗುತ್ತಿದೆ. 20 ಕಡೆ ಭೂ ಕುಸಿತ ಆಗಿದ್ದರೆ, ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿರುವುದು ಹೆಚ್ಚು ಕಡೆ ಆಗಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ.67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ ಪೂರ್ಣ ಮತ್ತು ಭಾಗಶಃ ಹಾನಿ ಆಗಿರುವ ಘಟನೆಗಳೂ ನಡೆದಿವೆ. ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು. ಭಾಗಶಃ ಹಾನಿ ಆಗಿರುವ ಮನೆಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಇದರಲ್ಲಿ 43 ಸಾವಿರ ರಾಜ್ಯ ಸರ್ಕಾರದ ಹಣ.ಈಗಾಗಲೇ ನೇರ ಸಂತ್ರಸ್ಥರ ಖಾತೆಗೆ ಹಣ ವರ್ಗಾವಣೆ ಆಗಿದೆ ಎಂದು ಅವರು ತಿಳಿಸಿದರು.
16 ಜಾನುವಾರು ಸತ್ತಿವೆ. ತಲಾ 35 ಸಾವಿರ ಪರಿಹಾರ ನೀಡಿದ್ದೇನೆ. 14 ಪರಿಹಾರ ಕ್ಯಾಂಪ್ ಗಳನ್ನು ತೆರೆಯಲಾಗಿದೆ. 10 ಕ್ಯಾಂಪ್ ಗಳಲ್ಲಿ 186 ಮಂದಿ ಇದ್ದಾರೆ. ತೋರಾ ಕ್ಯಾಂಪ್ ನಲ್ಲಿ ಇರುವವರ ಜೊತೆ ನಾನೇ ನೇರವಾಗಿ ಮಾತನಾಡಿದ್ದೇನೆ ಎಂದರು.
28 ಹೆಕ್ಟೇರ್ ನಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಕಾಫಿ ಬೋರ್ಡ್ ಮತ್ತು ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. 2708 ವಿದ್ಯುತ್ ಕಂಬಗಳು ಬಿದ್ದು ಹೋಗಿವೆ. 150 ಬಿಟ್ಟು ಉಳಿದೆಲ್ಲಾವನ್ನೂ ಮತ್ತೆ ಅಳವಡಿಸಲಾಗಿದೆ. ಹಾಳಾಗಿದ್ದ 47 ಟ್ರಾನ್ಸ್ ಫಾರ್ಮರ್ ಗಳನ್ನೂ ಹೊಸದಾಗಿ ಅಳವಡಿಸಲಾಗಿದೆ. 344 ಕಿಮಿ ಉದ್ದದ ಲೋಕೋಪಯೋಗಿ, ಜಿಲ್ಲಾ ಪಂಚಾಯ್ತಿ ರಸ್ತೆಗಳು ಹಾನಿ ಆಗಿವೆ. ಇವೆಲ್ಲವನ್ನೂ ಆಧ್ಯತೆ ಮೇಲೆ ಸರಿ ಪಡಿಸಲು ಸೂಚಿಸಲಾಗಿದೆ. ಈ ಬಾರಿ ವಾಡಿಕೆಗಿಂತ ಶೇ50 ರಷ್ಟು ಹೆಚ್ಚು ಮಳೆಯಾಗಿದೆ. ನಾವು ಮುಂಜಾಗ್ರತಾ ಕ್ರಮಗಳ ಜೊತೆಗೆ ಅನಾಹುತ ಬಳಿಕ ಪರಿಹಾರ ಕಾರ್ಯಗಳನ್ನು ತುರ್ತಾಗಿ ನಡೆಸಲಾಗುತ್ತಿದೆ.ಜಿಲ್ಲಾಧಿಕಾರಿಗಳ ಕಚೇರಿಯ ಭೂ ಕುಸಿತದ ದುರಸ್ತಿ ಕಾರ್ಯವನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.
ಶಿರಾಡಿ ಘಾಟಿಗೆ ಭೇಟಿ ನೀಡಿ ಅನಾಹುತಗಳನ್ನು ಪರಿಶೀಲನೆ ನಡೆಸುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು. ಭೂಕುಸಿತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರಕ್ಕೆ ಜಿಎಸ್ ಐ ವರದಿ ನೋಡಿ ನಂತರ ತೀರ್ಮಾನಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು, ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ, ಮಾಜಿ ಸಚಿವ ನಾಣಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.